ಏಪ್ರಿಲ್ 16 ವರೆಗೆ ರಾಜ್ಯದಲ್ಲಿ ಮಳೆ, ಹವಾಮಾನ ಇಲಾಖೆಯ ಮುನ್ಸೂಚನೆ

ಏ-13-2021, www.truemediakannada.in-ರಾಜ್ಯದಲ್ಲಿ ತಾಪಮಾನ ಹೆಚ್ಚಳವಾಗುತ್ತಿದ್ದು ರಾಜ್ಯದ ಕೆಲವು ಪ್ರದೇಶದಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದ.ಕನ್ನಡದಲ್ಲಿ ಏಪ್ರಿಲ್ 13 ರಿಂದ ಏಪ್ರಿಲ್ 16 ರವರೆಗೆ ಯಲ್ಲೋ ಅಲರ್ಟ್ ಘೋಷಿಸಲಾಗಿದ್ದರೆ, ಕೊಡಗು, ಚಾಮರಾಜನಗರ, ಚಿಕ್ಕಮಗಳೂರು, ಹಾಸನ ಮತ್ತು ಶಿವಮೊಗ್ಗದಲ್ಲಿ ಏಪ್ರಿಲ್ 14 ರಿಂದ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಇನ್ನು ಉಡುಪಿ ಹಾಗೂ ಉತ್ತರ ಕನ್ನಡದಲ್ಲಿ ಸಾಧಾರಣ ಮಳೆಯಾಗಲಿದ್ದು, ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಗಾಳಿಯ ಒತ್ತಡ ಕಡಿಮೆಯಾಗಿ ಒತ್ತಡ ಉಂಟಾಗಿದೆ. ತೇವಾಂಶಭರಿತ ಮೋಡಗಳು ಸೃಷ್ಟಿಯಾಗಿ, ಮಳೆಯಾಗುವ ಸಾಧ್ಯತೆ ಇದೆ.

Leave a Reply

Your email address will not be published. Required fields are marked *