Sunday, 18 Oct 2026
Breaking
ಎಸ್‌ಎಸ್‌ಕೆ ಸಮಾಜದ ದಸರಾ ಆಚರಣೆ ಅತ್ಯಂತ ವಿಶೇಷ ವಾಗಿದ್ದು ಭಕ್ತಿ, ಶ್ರದ್ಧೆ ಇತರಿಗೆ ಮಾರ್ಗದರ್ಶಿ ; ಶಾಸಕ ಹರೀಶ್  ಕನ್ನಡ ಸಾಹಿತ್ಯದಲ್ಲಿ ವೈಚಾರಿಕ, ಸಾಂಸ್ಕೃತಿಕ ಹಾಗೂ ಸಾಮಾಜಿಕ ಮೌಲ್ಯಗಳ ಸಮನ್ವಯವಿದೆ ; ಡಾ. ಎ.ಬಿ. ರಾಮಚಂದ್ರಪ್ಪ ಶಿಕ್ಷಣ ಸಂಸ್ಥೆ, ರಿಯಲ್ ಎಸ್ಟೇಟ್ ವ್ಯವಹಾರವಿಲ್ಲ ; ಸೇವೆ ಮಾಡುವ ಉದ್ದೇಶದಿಂದ ಚುನಾವಣೆಗೆ ಸ್ಪರ್ಧೆ: ಶಶಿ ಹುಲಿಕುಂಟೆ ಮಠ ಹರಿಹರ ಗಣೇಶೋತ್ಸವದ ಇತಿಹಾಸದಲ್ಲಿ ಹೊಸ ಅಧ್ಯಾಯ ; ಐತಿಹಾಸಿಕ ರಾಜಭೀದಿ ಉತ್ಸವಕ್ಕೆ ಹರಿಹರದಲ್ಲಿ ಮುನ್ನುಡಿ ದಾವಣಗೆರೆ ‘ಆರೋಗ್ಯ ಸಂಜೀವಿ’ ಕಾಯ್ದೆಹೊಳ್ಳಿ ; ನಿಜದ ಬಿಸಿಲವೃತ್ತ” ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್‌ನಲ್ಲಿ ಇಂದಿರಾಗಾಂಧಿ ವಸತಿ ಶಾಲೆ ವಿದ್ಯಾರ್ಥಿಗಳ ಸಾಧನೆ ಸಾಲ ಮರುಪಾವತಿಸುವಂತೆ ಗ್ರಾಹಕರಿಗೆ ಮನವಿ
Menu
Uncategorized

ಸೇವಾ ಸಿಂಧು ಯೋಜನೆಯಡಿ ವಿವಿಧ ಇಲಾಖೆಗಳ 451ಸೇವೆಗಳು ಲಭ್ಯ: ಅಪರ ಜಿಲ್ಲಾಧಿಕಾರಿ ಜಿ.ಅನುರಾಧ

July 3, 2020 6 years ago 1 min read

ಶಿವಮೊಗ್ಗ, ಜುಲೈ-03: ಸೇವಾ ಸಿಂಧು ಯೋಜನೆಯಡಿ ರಾಜ್ಯದ ವಿವಿಧ 47 ಇಲಾಖೆಗಳ 451ಸೇವೆಗಳನ್ನು ಸಾರ್ವಜನಿಕರು ಆನ್‍ಲೈನ್ ಮೂಲಕ ಪಡೆಯಬಹುದಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಜಿ.ಅನುರಾಧ ಅವರು ತಿಳಿಸಿದರು.
ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೇವಾ ಸಿಂಧು ಯೋಜನೆ ಕುರಿತು ಜಿಲ್ಲಾಮಟ್ಟದ ಅಧಿಕಾರಿಗಳ ಸಭೆ ನಡೆಸಿದರು, ಕರೋನಾ ಅವಧಿಯಲ್ಲಿ ಸಾರ್ವಜನಿಕರು ನೇರವಾಗಿ ಸರ್ಕಾರಿ ಕಚೇರಿಗಳಿಗೆ ಭೇಟಿ ನೀಡುವುದನ್ನು ತಪ್ಪಿಸಲು ಸೇವಾಸಿಂಧು ಆನ್‍ಲೈನ್ ಸೇವೆಯನ್ನು ಬಳಸಿಕೊಳ್ಳಬೇಕು. ಸಾರ್ವಜನಿಕರು ಸರ್ಕಾರದ ಸೇವೆಗಳನ್ನು ಸೇವಾಸಿಂಧು ವೆಬ್‍ಸೈಟ್ ಮೂಲಕ ಅಥವಾ ಸಮೀಪದ ಸಿಎಸ್‍ಸಿ ಕೇಂದ್ರಗಳಲ್ಲಿ ಸಹ ಪಡೆದುಕೊಳ್ಳಬಹುದಾಗಿದೆ. ಜಿಲ್ಲೆಯಲ್ಲಿ 350ಸಿಎಸ್‍ಸಿ ಕೇಂದ್ರಗಳಿವೆ. ಮುಂದಿನ ದಿನಗಳಲ್ಲಿ ಸಕಾಲ ಯೋಜನೆಯಡಿ ಬರುವ ಎಲ್ಲಾ ಸೇವೆಗಳನ್ನು ಸೇವಾಸಿಂಧು ಅಡಿ ಲಭ್ಯವಾಗಲಿದೆ ಎಂದು ಹೇಳಿದರು.
ಕರೋನಾ ಸಂದರ್ಭದಲ್ಲಿ ಜಿಲ್ಲಾ, ಅಂತರ ಜಿಲ್ಲಾ ಹಾಗೂ ಅಂತರ ರಾಜ್ಯ ಪ್ರಯಾಣಕ್ಕೆ ಅನುಮತಿಯನ್ನು ಪಡೆಯಲು ಇದೇ ಸೇವಾ ಸಿಂಧುವಿನಲ್ಲಿ ಸಾರ್ವಜನಿಕರು ಅರ್ಜಿಯನ್ನು ಸಲ್ಲಿಸಿ ಅನುಮತಿ ಪಡೆದುಕೊಂಡಿದ್ದಾರೆ. ಸಾರ್ವಜನಿಕರು www.sevasindhu.karnataka.gov.in ವೆಬ್‍ಸೈಟ್ ಲಾಗಿಇನ್ ಆಗಿ ತಮಗೆ ಬೇಕಾದ ಇಲಾಖೆಗಳನ್ನು ಆಯ್ಕೆ ಮಾಡಿಕೊಂಡು ಅರ್ಜಿ ಸಲ್ಲಿಸಬಹುದಾಗಿದೆ ಎಂದರು.
ಸೇವಾ ಸಿಂಧುವಿನಲ್ಲಿ ಸಾರ್ವಜನಿಕರು ತಮ್ಮ ಅರ್ಜಿಯ ಪ್ರಗತಿಯನ್ನು ಸಹ ಗಮನಿಸಬಹುದು. ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಪ್ರತ್ಯೇಕ ಲಾಗ್‍ಇನ್ ನೀಡಲಾಗಿದ್ದು, ಅವರು ಅದನ್ನು ನಿಗದಿತ ಸಮಯದ ಒಳಗಾಗಿ ವಿಲೇವಾರಿ ಮಾಡಬೇಕು. ಅಗತ್ಯವೆನಿಸಿದರೆ ಈ ಕುರಿತು ಇಲಾಖೆಗಳಿಗೆ ತರಬೇತಿ ನೀಡಲಾಗುವುದು ಎಂದು ಅವರು ತಿಳಿಸಿದರು.
ಸಕಾಲ ಯೋಜನೆಯ ರ್ಯಾಂಕಿಂಗ್ ವ್ಯವಸ್ಥೆಯಲ್ಲಿ ಕೆಲವು ಬದಲಾವಣೆಗಳನ್ನು ಮಾಡಲಾಗಿದೆ. ತಿರಸ್ಕøತವಾಗುವ ಅರ್ಜಿಗಳಿಗೆ ಅಂಕಗಳನ್ನು ಕಳೆಯುವ ಪದ್ಧತಿ ಬಂದಿದೆ. ಸಕಾರಣವಿಲ್ಲದೆ ಯಾವುದೇ ಅರ್ಜಿಗಳನ್ನು ತಿರಸ್ಕರಿಸಬಾರದು. ತಾವು ಸಲ್ಲಿಸುವ ಅರ್ಜಿಗಳ ಸ್ಥಿತಿಗತಿಯನ್ನು ಸಾರ್ವಜನಿಕರು www.sakala.kar.nic.in ವೆಬ್‍ಸೈಟ್ ಮೂಲಕ ಪರಿಶೀಲಿಸಬಹುದಾಗಿದೆ ಎಂದು ಅವರು ಹೇಳಿದರು.

Share: