Sunday, 18 Oct 2026
Breaking
ಎಸ್‌ಎಸ್‌ಕೆ ಸಮಾಜದ ದಸರಾ ಆಚರಣೆ ಅತ್ಯಂತ ವಿಶೇಷ ವಾಗಿದ್ದು ಭಕ್ತಿ, ಶ್ರದ್ಧೆ ಇತರಿಗೆ ಮಾರ್ಗದರ್ಶಿ ; ಶಾಸಕ ಹರೀಶ್  ಕನ್ನಡ ಸಾಹಿತ್ಯದಲ್ಲಿ ವೈಚಾರಿಕ, ಸಾಂಸ್ಕೃತಿಕ ಹಾಗೂ ಸಾಮಾಜಿಕ ಮೌಲ್ಯಗಳ ಸಮನ್ವಯವಿದೆ ; ಡಾ. ಎ.ಬಿ. ರಾಮಚಂದ್ರಪ್ಪ ಶಿಕ್ಷಣ ಸಂಸ್ಥೆ, ರಿಯಲ್ ಎಸ್ಟೇಟ್ ವ್ಯವಹಾರವಿಲ್ಲ ; ಸೇವೆ ಮಾಡುವ ಉದ್ದೇಶದಿಂದ ಚುನಾವಣೆಗೆ ಸ್ಪರ್ಧೆ: ಶಶಿ ಹುಲಿಕುಂಟೆ ಮಠ ಹರಿಹರ ಗಣೇಶೋತ್ಸವದ ಇತಿಹಾಸದಲ್ಲಿ ಹೊಸ ಅಧ್ಯಾಯ ; ಐತಿಹಾಸಿಕ ರಾಜಭೀದಿ ಉತ್ಸವಕ್ಕೆ ಹರಿಹರದಲ್ಲಿ ಮುನ್ನುಡಿ ದಾವಣಗೆರೆ ‘ಆರೋಗ್ಯ ಸಂಜೀವಿ’ ಕಾಯ್ದೆಹೊಳ್ಳಿ ; ನಿಜದ ಬಿಸಿಲವೃತ್ತ” ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್‌ನಲ್ಲಿ ಇಂದಿರಾಗಾಂಧಿ ವಸತಿ ಶಾಲೆ ವಿದ್ಯಾರ್ಥಿಗಳ ಸಾಧನೆ ಸಾಲ ಮರುಪಾವತಿಸುವಂತೆ ಗ್ರಾಹಕರಿಗೆ ಮನವಿ
Menu
Uncategorized

ದಾವಣಗೆರೆ ಜೆಜೆಎಂ ಮೆಡಿಕಲ್ ಕಾಲೇಜಿನ ಗೃಹ ವೈದ್ಯರ ಪ್ರತಿಭಟನಾ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ.ಬಸವರಾಜ ಭೇಟಿ

July 4, 2020 6 years ago 1 min read

ದಾವಣಗೆರೆ ಜು.04-ನಗರದ ಜೆಜೆಎಂ ಮೆಡಿಕಲ್ ಕಾಲೇಜಿನ ಗೃಹ ವೈದ್ಯರು (ಹೌಸ್ ಸರ್ಜನ್ಸ್) 16 ತಿಂಗಳ ಸ್ಟೈಫಂಡ್ ಬಿಡುಗಡೆಗಾಗಿ ಕಳೆದ ಆರು ದಿನದಿಂದ ಜಯದೇವ ಸರ್ಕಲ್‍ನಲ್ಲಿ ಪ್ರತಿಭಟನೆ ಕೈಗೊಂಡಿರುವ ಹಿನ್ನೆಲೆಯಲ್ಲಿ ಶನಿವಾರ ನಗರಾಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ.ಬಸವರಾಜ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ, ಗೃಹವೈದ್ಯರನ್ನು ಮಾತನಾಡಿಸಿದರು.
ಈ ವೇಳೆ ಮಾತನಾಡಿದ ಅವರು, ಮುಖ್ಯಮಂತ್ರಿಗಳು ಹಾಗೂ ವೈದ್ಯಕೀಯ ಸಚಿವರೊಂದಿಗೆ ಈ ಕುರಿತು ಸಭೆ ನಡೆಸಿ ಚರ್ಚಿಸಲಾಗಿದೆ. ಈ ಕುರಿತು ಕೂಡಲೇ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರತಿಭಟನಾನಿರತ ಗೃಹ ವೈದ್ಯರಿಗೆ ತಿಳಿಸಿದರು.
ಈ ಸಂದರ್ಭದಲ್ಲಿ ಸಂಸದ ಜಿ.ಎಂ.ಸಿದ್ದೇಶ್ವರ್, ಶಾಸಕರಾದ ರವೀಂದ್ರನಾಥ್, ಮಾಡಾಳ್ ವಿರೂಪಾಕ್ಷಪ್ಪ, ಎಸ್.ವಿ.ರಾಮಚಂದ್ರ, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ದೀಪಾ ಜಗದೀಶ್, ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಹನುಮಂತರಾಯ್ ಮತ್ತಿತರರು ಇದ್ದರು.

Share: