Saturday, 17 Oct 2026
Breaking
ಎಸ್‌ಎಸ್‌ಕೆ ಸಮಾಜದ ದಸರಾ ಆಚರಣೆ ಅತ್ಯಂತ ವಿಶೇಷ ವಾಗಿದ್ದು ಭಕ್ತಿ, ಶ್ರದ್ಧೆ ಇತರಿಗೆ ಮಾರ್ಗದರ್ಶಿ ; ಶಾಸಕ ಹರೀಶ್  ಕನ್ನಡ ಸಾಹಿತ್ಯದಲ್ಲಿ ವೈಚಾರಿಕ, ಸಾಂಸ್ಕೃತಿಕ ಹಾಗೂ ಸಾಮಾಜಿಕ ಮೌಲ್ಯಗಳ ಸಮನ್ವಯವಿದೆ ; ಡಾ. ಎ.ಬಿ. ರಾಮಚಂದ್ರಪ್ಪ ಶಿಕ್ಷಣ ಸಂಸ್ಥೆ, ರಿಯಲ್ ಎಸ್ಟೇಟ್ ವ್ಯವಹಾರವಿಲ್ಲ ; ಸೇವೆ ಮಾಡುವ ಉದ್ದೇಶದಿಂದ ಚುನಾವಣೆಗೆ ಸ್ಪರ್ಧೆ: ಶಶಿ ಹುಲಿಕುಂಟೆ ಮಠ ಹರಿಹರ ಗಣೇಶೋತ್ಸವದ ಇತಿಹಾಸದಲ್ಲಿ ಹೊಸ ಅಧ್ಯಾಯ ; ಐತಿಹಾಸಿಕ ರಾಜಭೀದಿ ಉತ್ಸವಕ್ಕೆ ಹರಿಹರದಲ್ಲಿ ಮುನ್ನುಡಿ ದಾವಣಗೆರೆ ‘ಆರೋಗ್ಯ ಸಂಜೀವಿ’ ಕಾಯ್ದೆಹೊಳ್ಳಿ ; ನಿಜದ ಬಿಸಿಲವೃತ್ತ” ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್‌ನಲ್ಲಿ ಇಂದಿರಾಗಾಂಧಿ ವಸತಿ ಶಾಲೆ ವಿದ್ಯಾರ್ಥಿಗಳ ಸಾಧನೆ ಸಾಲ ಮರುಪಾವತಿಸುವಂತೆ ಗ್ರಾಹಕರಿಗೆ ಮನವಿ
Menu
Uncategorized

ಬಳ್ಳಾರಿ ನಗರದ ವಿವಿಧ ಪ್ರದೇಶಗಳಲ್ಲಿ ಡೆಂಗ್ಯೂ ಜ್ವರ ಸಮೀಕ್ಷೆ

July 4, 2020 6 years ago 1 min read

ಬಳ್ಳಾರಿ,ಜು.04- ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಬಳ್ಳಾರಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಇವರ ಸಂಯುಕ್ತಾಶ್ರಯದಲ್ಲಿ ಶನಿವಾರ ಡೆಂಗ್ಯೂ ಜ್ವರ ನಿಯಂತ್ರಣ ಸಮೀಕ್ಷೆಯನ್ನು ನಗರದ ವಿವಿಧ ಪ್ರದೇಶಗಳಲ್ಲಿ ಹಮ್ಮಿಕೊಳ್ಳಲಾಯಿತು. ಸಮೀಕ್ಷೆಯನ್ನು ಸ್ವಯಂ ಸೇವಕರ ಜೊತೆ ಆಶಾ ಕಾರ್ಯಕರ್ತೆಯರು ಪ್ರತಿ ಮನೆ ಮನೆಗೆ ಹೋಗಿ ಅವರು ಸಂಗ್ರಹಿಸಿದ್ದ ನೀರಲ್ಲಿ ಲಾರ್ವ ಇರುವ ನೀರನ್ನು ಚೆಲ್ಲಿಸಿ ಪ್ರತಿ ಮನೆಯಲ್ಲಿ ಡೆಂಗ್ಯೂ ಜ್ವರ ಹೇಗೆ ತಡೆಗಟ್ಟಬೇಕೆಂದು ವಿವರವಾಗಿ ತಿಳಿಸಿದರು. ವಿವಿಧ ತೆಗ್ಗು ಪ್ರದೇಶಗಳಾದ ನಾಲಾಗಡ್ಡ, ಕೇಸರಿ ಬೀದಿ, ಗ್ವಾಲರಹಟ್ಟಿ, ಲಾಲಾಕಮಾನ್ ಪ್ರದೇಶದ ಮನೆಗಳಲ್ಲಿ ಸಂಗ್ರಹಿಸಿದ್ದ ನೀರಿನಲ್ಲಿ ಲಾರ್ವ ಕಂಡುಬಂದ ಕಾರಣ ಔಷಧಿಯನ್ನು ಹಾಕಿ ಡೆಂಗ್ಯೂ ಸೊಳ್ಳೆಗಳು ಹೇಗೆ ನಾಶ ಹೊಂದುತ್ತವೆ ಎಂದು ಮನೆಯ ಜನರಿಗೆ ತಿಳಿಸಿದರು. ಮನೆಗಳಲ್ಲಿ ಹೆಚ್ಚುದಿನಗಳವರೆಗೆ ನೀರನ್ನು ಸಂಗ್ರಹಿಸಬಾರದು ಎಂದು ಜನರಿಗೆ ಸಲಹೆ ನೀಡಿದರು. ಈ ಸಂದರ್ಭದಲ್ಲಿ ಆರೋಗ್ಯ ಅಧಿಕಾರಿಗಳಾದ ಡಾ.ಅಬ್ದುಲ್ಲಾ, ಡಾ.ಕರುಣ, ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಕಾರ್ಯದರ್ಶಿ ಎಂ.ಎ.ಷಕೀಬ್, ಸೀನಿಯರ್ ಲ್ಯಾಬ್ ಟೆಕ್ನೀಶಿಯನ್ ನಂದಾರೆಡ್ಡಿ, ಶಶಿಧರ್ ಮೂರ್ತಿ, ಜಿಲ್ಲಾ ಕನ್ಸಲ್ಟಟೆಂಟ್ ಶಿಕ್ಷಾಣಾಧಿಕಾರಿ ಪ್ರತಾಪ್, ಸಂಯೋಜಕರಾದ ನಿಸಾರ್ ಅಹಮ್ಮದ್, ಆರೋಗ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು, ಆರೋಗ್ಯ ಸಹಾಯಕರು ಹಾಗೂ ರೆಡ್ ಕ್ರಾಸ್ ಸಂಸ್ಥೆಯ ಸದಸ್ಯರು ಸೇರಿದಂತೆ ಇತರರು ಇದ್ದರು.

Share: