Saturday, 17 Oct 2026
Breaking
ಎಸ್‌ಎಸ್‌ಕೆ ಸಮಾಜದ ದಸರಾ ಆಚರಣೆ ಅತ್ಯಂತ ವಿಶೇಷ ವಾಗಿದ್ದು ಭಕ್ತಿ, ಶ್ರದ್ಧೆ ಇತರಿಗೆ ಮಾರ್ಗದರ್ಶಿ ; ಶಾಸಕ ಹರೀಶ್  ಕನ್ನಡ ಸಾಹಿತ್ಯದಲ್ಲಿ ವೈಚಾರಿಕ, ಸಾಂಸ್ಕೃತಿಕ ಹಾಗೂ ಸಾಮಾಜಿಕ ಮೌಲ್ಯಗಳ ಸಮನ್ವಯವಿದೆ ; ಡಾ. ಎ.ಬಿ. ರಾಮಚಂದ್ರಪ್ಪ ಶಿಕ್ಷಣ ಸಂಸ್ಥೆ, ರಿಯಲ್ ಎಸ್ಟೇಟ್ ವ್ಯವಹಾರವಿಲ್ಲ ; ಸೇವೆ ಮಾಡುವ ಉದ್ದೇಶದಿಂದ ಚುನಾವಣೆಗೆ ಸ್ಪರ್ಧೆ: ಶಶಿ ಹುಲಿಕುಂಟೆ ಮಠ ಹರಿಹರ ಗಣೇಶೋತ್ಸವದ ಇತಿಹಾಸದಲ್ಲಿ ಹೊಸ ಅಧ್ಯಾಯ ; ಐತಿಹಾಸಿಕ ರಾಜಭೀದಿ ಉತ್ಸವಕ್ಕೆ ಹರಿಹರದಲ್ಲಿ ಮುನ್ನುಡಿ ದಾವಣಗೆರೆ ‘ಆರೋಗ್ಯ ಸಂಜೀವಿ’ ಕಾಯ್ದೆಹೊಳ್ಳಿ ; ನಿಜದ ಬಿಸಿಲವೃತ್ತ” ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್‌ನಲ್ಲಿ ಇಂದಿರಾಗಾಂಧಿ ವಸತಿ ಶಾಲೆ ವಿದ್ಯಾರ್ಥಿಗಳ ಸಾಧನೆ ಸಾಲ ಮರುಪಾವತಿಸುವಂತೆ ಗ್ರಾಹಕರಿಗೆ ಮನವಿ
Menu
Uncategorized

ಕನ್ನಡ ಪ್ರವೇಶ,ಕಾವ,ಜಾಣ,ರತ್ನ ಪರೀಕ್ಷೆಗೆ ಅರ್ಜಿ ಆಹ್ವಾನ

July 10, 2020 6 years ago 1 min read

ದಾವಣಗೆರೆ ಜು.10-ಕನ್ನಡ ಸಾಹಿತ್ಯ ಪರಿಷತ್ತು 2020-21 ನೇ ಸಾಲಿನ ಕನ್ನಡ ಪ್ರವೇಶ, ಕಾವ, ಜಾಣ, ರತ್ನ ಪರೀಕ್ಷೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. 2020 ರ ಡಿಸೆಂಬರ್ ಕೊನೆಯ ವಾರದಲ್ಲಿ ನಡೆಸುವ ಪರೀಕ್ಷೆಗಳಿಗೆ ಅರ್ಜಿಗಳನ್ನು ಸಲ್ಲಿಸಲು ಆಗಸ್ಟ್ 21 ಕೊನೆಯ ದಿನವಾಗಿದೆ. ನಂತರ ಅರ್ಜಿಯನ್ನು ಸಲ್ಲಿಸುವವರು ಸೆಪ್ಟೆಂಬರ್ 15 ರವರೆಗೆ ದಂಡ ಶುಲ್ಕ ರೂ.50 ರೂ ಅನ್ನು ಹೆಚ್ಚುವರಿಯಾಗಿ ನೀಡಿ ಅರ್ಜಿಯನ್ನು ಸಲ್ಲಿಸಬಹುದು. ರೂ .25 ಶುಲ್ಕ ಪಾವತಿಸಿ ಪರೀಕ್ಷಾ ನಿಯಮಾವಳಿ ಹಾಗೂ ಅರ್ಜಿಯನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಮಾರಾಟ ಮಳಿಗೆಯಲ್ಲಿ(ಬೆಂಗಳೂರು) ಆಗಸ್ಟ್ 10 ರಿಂದ ಪಡೆಯಬಹುದು ಅಥವಾ ಕನ್ನಡ ಸಾಹಿತ್ಯ ಪರಿಷತ್ತಿನ ಹೆಸರಿಗೆ ಮೂವತ್ತು ರೂಪಾಯಿ ಮನಿಯಾರ್ಡರ್ ಮಾಡಿದರೆ ಅರ್ಜಿಯನ್ನು ಅಂಚೆ ಮೂಲಕ ಕಳುಹಿಸಲಾಗುವುದು.
ಪರೀಕ್ಷಾ ಅರ್ಜಿಗಳನ್ನು ಅಂತರ್ಜಾಲ ತಾಣ ತಿತಿತಿ.ಞಚಿsಚಿಠಿಚಿ.iಟಿ ಮೂಲಕ ಸಹ ಪಡೆದುಕೊಳ್ಳಬಹುದು. ಪರೀಕ್ಷಾ ಶುಲ್ಕದೊಂದಿಗೆ ಅರ್ಜಿ ಶುಲ್ಕ ರೂ.25 ಗಳನ್ನೂ ಪ್ರತ್ಯೇಕವಾಗಿ ಪಾವತಿಸಬಹುದುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಾರ್ಯದರ್ಶಿ ಕನ್ನಡ ಸಾಹಿತ್ಯ ಪರಿಷತ್ತು ಚಾಮರಾಜಪೇಟೆ ಬೆಂಗಳೂರು-18 ದೂರವಾಣಿ ಸಂಖ್ಯೆ 080-26623584 ಯನ್ನು ಸಂಪರ್ಕಿಸಬುಹುದು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯದರ್ಶಿ ಡಾ. ರಾಜಶೇಖರ ಹತಗುಂದಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share: