Saturday, 17 Oct 2026
Breaking
ಎಸ್‌ಎಸ್‌ಕೆ ಸಮಾಜದ ದಸರಾ ಆಚರಣೆ ಅತ್ಯಂತ ವಿಶೇಷ ವಾಗಿದ್ದು ಭಕ್ತಿ, ಶ್ರದ್ಧೆ ಇತರಿಗೆ ಮಾರ್ಗದರ್ಶಿ ; ಶಾಸಕ ಹರೀಶ್  ಕನ್ನಡ ಸಾಹಿತ್ಯದಲ್ಲಿ ವೈಚಾರಿಕ, ಸಾಂಸ್ಕೃತಿಕ ಹಾಗೂ ಸಾಮಾಜಿಕ ಮೌಲ್ಯಗಳ ಸಮನ್ವಯವಿದೆ ; ಡಾ. ಎ.ಬಿ. ರಾಮಚಂದ್ರಪ್ಪ ಶಿಕ್ಷಣ ಸಂಸ್ಥೆ, ರಿಯಲ್ ಎಸ್ಟೇಟ್ ವ್ಯವಹಾರವಿಲ್ಲ ; ಸೇವೆ ಮಾಡುವ ಉದ್ದೇಶದಿಂದ ಚುನಾವಣೆಗೆ ಸ್ಪರ್ಧೆ: ಶಶಿ ಹುಲಿಕುಂಟೆ ಮಠ ಹರಿಹರ ಗಣೇಶೋತ್ಸವದ ಇತಿಹಾಸದಲ್ಲಿ ಹೊಸ ಅಧ್ಯಾಯ ; ಐತಿಹಾಸಿಕ ರಾಜಭೀದಿ ಉತ್ಸವಕ್ಕೆ ಹರಿಹರದಲ್ಲಿ ಮುನ್ನುಡಿ ದಾವಣಗೆರೆ ‘ಆರೋಗ್ಯ ಸಂಜೀವಿ’ ಕಾಯ್ದೆಹೊಳ್ಳಿ ; ನಿಜದ ಬಿಸಿಲವೃತ್ತ” ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್‌ನಲ್ಲಿ ಇಂದಿರಾಗಾಂಧಿ ವಸತಿ ಶಾಲೆ ವಿದ್ಯಾರ್ಥಿಗಳ ಸಾಧನೆ ಸಾಲ ಮರುಪಾವತಿಸುವಂತೆ ಗ್ರಾಹಕರಿಗೆ ಮನವಿ
Menu
Uncategorized

ಪದವಿ, ಸ್ನಾತಕೋತ್ತರ, ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಪರೀಕ್ಷೆ ಇಲ್ಲದೆಯೇ ಮುಂದಿನ ಹಂತಕ್ಕೆ

July 10, 2020 6 years ago 1 min read

ಜುಲೈ 10-ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ 2019-20ನೇ ಸಾಲಿನಲ್ಲಿ ಎಂಜಿನಿಯರಿಂಗ್ ಸೇರಿ ಇತರ ಪದವಿ, ಸ್ನಾತಕೋತ್ತರ, ಡಿಪ್ಲೊಮಾ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಧ್ಯಂತರ ಸೆಮಿಸ್ಟರ್ ವಿದ್ಯಾರ್ಥಿಗಳನ್ನು ಅಂತಿಮ ಪರೀಕ್ಷೆ ಇಲ್ಲದೆಯೇ ಮುಂದಿನ ಹಂತಕ್ಕೆ ಉತ್ತೀರ್ಣಗೊಳಿಸುವುದಾಗಿ ರಾಜ್ಯ ಸರ್ಕಾರ ಪ್ರಕಟಿಸಿದೆ.

K-CET 2020 ಪರೀಕ್ಷೆ ಗಳು ನಿಗದಿಯಂತೆ ಇದೇ ತಿಂಗಳ ಜೂಲೈ 30 ಮತ್ತು 31 ರಂದು ನಡೆಯಲಿವೆ.

ಪ್ರಸಕ್ತ ಶೈಕ್ಷಣಿಕ ವರ್ಷದ ಅಂತಿಮ ಸೆಮಿಸ್ಟರ್‌ ಅಥವಾ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಯುಜಿಸಿ ಮಾರ್ಗಸೂಚಿ ಅನ್ವಯ ಸೆಪ್ಟೆಂಬರ್ ಅಂತ್ಯದೊಳಗೆ ಪರೀಕ್ಷೆ ನಡೆಸಲೂ ನಿರ್ಧರಿಸಿದೆ. ಈ ನಿರ್ಧಾರ ಪ್ರಸಕ್ತ ಶೈಕ್ಷಣಿಕ ವರ್ಷಕ್ಕೆ (2019-20) ಮಾತ್ರ ಸೀಮಿತವಾಗಿರುತ್ತದೆ. ಸರಕಾರದ ಈ ನಿರ್ಧಾರಕ್ಕೆ ಕುಲಾಧಿಪತಿಯೂ ಆಗಿರುವ ರಾಜ್ಯಪಾಲ ವಜೂಭಾಯಿ ವಾಲ ಅವರು ಹಸಿರು ನಿಶಾನೆ ತೋರಿಸಿದ್ದಾರೆ ಎಂದು ಉನ್ನತ ಶಿಕ್ಷಣ ಖಾತೆ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ. ವಿದ್ಯಾರ್ಥಿಗಳ ಆರೋಗ್ಯ ಮತ್ತು ಭವಿಷ್ಯವನ್ನು ಗಣನೆಗೆ ತೆಗೆದುಕೊಂಡು ಶಿಕ್ಷಣ ತಜ್ಞರು, ವಿವಿಗಳ ಕುಲಪತಿಗಳ ಜತೆ ನಿರಂತರ ಸಮಾಲೋಚನೆ ನಡೆಸಿದ ನಂತರ ಈ ಮಹತ್ವದ ನಿರ್ಧಾರ ಕೈಕೊಳ್ಳಲಾಗಿದೆ. 2020-21ರ ಶೈಕ್ಷಣಿಕ ಸಾಲಿನ ಮೊದಲ ಸೆಮಿಸ್ಟರ್’ಗೆ ಸೆಪ್ಟೆಂಬರ್ 1 ರಿಂದಲೇ ಆನ್‌ಲೈನ್ ತರಗತಿಗಳು ಹಾಗೂ ಅಕ್ಟೋಬರ್ 1 ರಿಂದ ಆಫ್‌ಲೈನ್ ತರಗತಿಗಳು ಆರಂಭವಾಗುತ್ತವೆ. ಅದಕ್ಕೆ ಬೇಕಾದ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ವಿವಿಗಳು, ಕಾಲೇಜುಗಳಿಗೆ ಸೂಚಿಸಲಾಗಿದೆ ಎಂದರು.

Share: