Uncategorized
ಲಾಕ್ಡೌನ್: ಮತ್ತೊಂದು ಸಲಹೆ ನೀಡಿದ ಕುಮಾರಸ್ವಾಮಿ
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊರೊನಾ ವೈರಸ್ ನಿಯಂತ್ರಣಕ್ಕೆ ಬಾರದ ಹಿನ್ನೆಲೆ ಒಂದು ವಾರಗಳ ಕಾಲ ಸಂಪೂರ್ಣ ಲಾಕ್ಡೌನ್ ಘೋಷಣೆಯಾಗಿದೆ. ಜುಲೈ 14 ರಿಂದ ಒಂದು ವಾರ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳು ಬಂದ್ ಆಗಲಿದೆ ಎಂದು ಸಿಎಂ ಅಧಿಕೃತಪಡಿಸಿದ್ದರು.
ಮುಖ್ಯಮಂತ್ರಿ ಅವರ ಈ ನಿರ್ಧಾರವನ್ನು ಸ್ವಾಗತಿಸಿರುವ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ”ಅಂತರ್ ಜಿಲ್ಲಾ ಸಂಚಾರವನ್ನು ನಿರ್ಬಂಧಿಸುವಂತೆ” ಒತ್ತಾಯಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತ್ರವಲ್ಲ ರಾಜ್ಯದ ಇತರೆ ಕೆಲವು ಜಿಲ್ಲೆಗಳಲ್ಲೂ ಕೊರೊನಾ ವೈರಸ್ ಪ್ರಕರಣಗಳು ಹೆಚ್ಚು ವರದಿಯಾಗುತ್ತಿದೆ. ಈ ನಿಟ್ಟಿನಲ್ಲಿ ರಾಜ್ಯಾದ್ಯಂತ ಲಾಕ್ಡೌನ್ ಅವಶ್ಯಕ ಎಂದು ವಿಪಕ್ಷಗಳು ಈ ಹಿಂದೆ ಅಭಿಪ್ರಾಯ ಪಟ್ಟಿದ್ದವು
