Sunday, 18 Oct 2026
Breaking
ಎಸ್‌ಎಸ್‌ಕೆ ಸಮಾಜದ ದಸರಾ ಆಚರಣೆ ಅತ್ಯಂತ ವಿಶೇಷ ವಾಗಿದ್ದು ಭಕ್ತಿ, ಶ್ರದ್ಧೆ ಇತರಿಗೆ ಮಾರ್ಗದರ್ಶಿ ; ಶಾಸಕ ಹರೀಶ್  ಕನ್ನಡ ಸಾಹಿತ್ಯದಲ್ಲಿ ವೈಚಾರಿಕ, ಸಾಂಸ್ಕೃತಿಕ ಹಾಗೂ ಸಾಮಾಜಿಕ ಮೌಲ್ಯಗಳ ಸಮನ್ವಯವಿದೆ ; ಡಾ. ಎ.ಬಿ. ರಾಮಚಂದ್ರಪ್ಪ ಶಿಕ್ಷಣ ಸಂಸ್ಥೆ, ರಿಯಲ್ ಎಸ್ಟೇಟ್ ವ್ಯವಹಾರವಿಲ್ಲ ; ಸೇವೆ ಮಾಡುವ ಉದ್ದೇಶದಿಂದ ಚುನಾವಣೆಗೆ ಸ್ಪರ್ಧೆ: ಶಶಿ ಹುಲಿಕುಂಟೆ ಮಠ ಹರಿಹರ ಗಣೇಶೋತ್ಸವದ ಇತಿಹಾಸದಲ್ಲಿ ಹೊಸ ಅಧ್ಯಾಯ ; ಐತಿಹಾಸಿಕ ರಾಜಭೀದಿ ಉತ್ಸವಕ್ಕೆ ಹರಿಹರದಲ್ಲಿ ಮುನ್ನುಡಿ ದಾವಣಗೆರೆ ‘ಆರೋಗ್ಯ ಸಂಜೀವಿ’ ಕಾಯ್ದೆಹೊಳ್ಳಿ ; ನಿಜದ ಬಿಸಿಲವೃತ್ತ” ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್‌ನಲ್ಲಿ ಇಂದಿರಾಗಾಂಧಿ ವಸತಿ ಶಾಲೆ ವಿದ್ಯಾರ್ಥಿಗಳ ಸಾಧನೆ ಸಾಲ ಮರುಪಾವತಿಸುವಂತೆ ಗ್ರಾಹಕರಿಗೆ ಮನವಿ
Menu
Uncategorized

ಶಿಷ್ಯ ವೇತನ: ಅವಧಿ ವಿಸ್ತರಣೆ

April 20, 2021 5 years ago 1 min read

ಏ-20-2021, www.truemediakannada.in, ಬಳ್ಳಾರಿ,ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2020-21ನೇ ಸಾಲಿನ ಮೆಟ್ರಿಕ್ ನಂತರದ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಶಿಷ್ಯ ವೇತನಕ್ಕಾಗಿ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ ಮಾಡಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರ್ಜಿ ಸಲ್ಲಿಸಲು ಏ.20 ಕೊನೆಯ ದಿನಾಂಕವಾಗಿದ್ದು, ಇದನ್ನು ಏ.30ರವರೆಗೆ ವಿಸ್ತರಿಸಲಾಗಿದೆ.
ವಿದ್ಯಾರ್ಥಿವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಹಾಗೂ ನರ್ಸಿಂಗ್ ವಿದ್ಯಾರ್ಥಿಗಳ ಶಿಷ್ಯವೇತನಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿಯನ್ನು www.ssp.postmatric.karnataka.gov.in ವೆಬ್‍ಸೈಟ್ ಮೂಲಕ ಆನ್‍ಲೈನ್‍ನಲ್ಲಿ ಸಲ್ಲಿಸಬೇಕು.
ಕಾರ್ಯಕ್ರಮಗಳ ವಿವರ, ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ವಿದ್ಯಾರ್ಥಿ ವೇತನಕ್ಕೆ ಸಂಬಂಧಿಸಿದ ಸರ್ಕಾರಿ ಆದೇಶಗಳ ಬಗ್ಗೆ ಮಾಹಿತಿಯನ್ನು www.bcwd.karnataka.gov.in ವೆಬ್‍ಸೈಟ್‍ನಲ್ಲಿ ನೋಡಬಹುದು.
ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದ ಸಹಾಯವಾಣಿ ಇಮೇಲ್: postmatrichelp@karnataka.gov.in, ಇಲಾಖೆಯ ದೂ.ಸಂ.8050770005, 8050770004, ಇಮೇಲ್: bcwd.scholarship@karnataka.gov.in, , ಹೆಚ್ಚಿನ ಮಾಹಿತಿಗಾಗಿ 080-35254757 ಗೆ ಸಂಪರ್ಕಿಸಲು ಅವರು ತಿಳಿಸಿದ್ದಾರೆ.

Share: