Sunday, 18 Oct 2026
Breaking
ಎಸ್‌ಎಸ್‌ಕೆ ಸಮಾಜದ ದಸರಾ ಆಚರಣೆ ಅತ್ಯಂತ ವಿಶೇಷ ವಾಗಿದ್ದು ಭಕ್ತಿ, ಶ್ರದ್ಧೆ ಇತರಿಗೆ ಮಾರ್ಗದರ್ಶಿ ; ಶಾಸಕ ಹರೀಶ್  ಕನ್ನಡ ಸಾಹಿತ್ಯದಲ್ಲಿ ವೈಚಾರಿಕ, ಸಾಂಸ್ಕೃತಿಕ ಹಾಗೂ ಸಾಮಾಜಿಕ ಮೌಲ್ಯಗಳ ಸಮನ್ವಯವಿದೆ ; ಡಾ. ಎ.ಬಿ. ರಾಮಚಂದ್ರಪ್ಪ ಶಿಕ್ಷಣ ಸಂಸ್ಥೆ, ರಿಯಲ್ ಎಸ್ಟೇಟ್ ವ್ಯವಹಾರವಿಲ್ಲ ; ಸೇವೆ ಮಾಡುವ ಉದ್ದೇಶದಿಂದ ಚುನಾವಣೆಗೆ ಸ್ಪರ್ಧೆ: ಶಶಿ ಹುಲಿಕುಂಟೆ ಮಠ ಹರಿಹರ ಗಣೇಶೋತ್ಸವದ ಇತಿಹಾಸದಲ್ಲಿ ಹೊಸ ಅಧ್ಯಾಯ ; ಐತಿಹಾಸಿಕ ರಾಜಭೀದಿ ಉತ್ಸವಕ್ಕೆ ಹರಿಹರದಲ್ಲಿ ಮುನ್ನುಡಿ ದಾವಣಗೆರೆ ‘ಆರೋಗ್ಯ ಸಂಜೀವಿ’ ಕಾಯ್ದೆಹೊಳ್ಳಿ ; ನಿಜದ ಬಿಸಿಲವೃತ್ತ” ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್‌ನಲ್ಲಿ ಇಂದಿರಾಗಾಂಧಿ ವಸತಿ ಶಾಲೆ ವಿದ್ಯಾರ್ಥಿಗಳ ಸಾಧನೆ ಸಾಲ ಮರುಪಾವತಿಸುವಂತೆ ಗ್ರಾಹಕರಿಗೆ ಮನವಿ
Menu
Uncategorized

ಚನ್ನಗಿರಿ ತಾಲ್ಲೂಕಿನಲ್ಲಿ ತಂಬಾಕು ದಾಳಿ : ಕಾಯ್ದೆ ಉಲ್ಲಂಘನೆಗೆ ದಂಡ

April 22, 2021 5 years ago 1 min read

ಏ-22-2021, www.truemediakannada.in,ದಾವಣಗೆರೆ, ಚನ್ನಗಿರಿ ತಾಲ್ಲೂಕಿನಲ್ಲಿ ತಂಬಾಕು ನಿಯಂತ್ರಣ ತನಿಖಾ ದಳವು ಗುರುವಾರದಂದು ಸಂತೇಬೆನ್ನೂರಿನ ತಂಬಾಕು ಉತ್ಪನ್ನ ಮಾರಾಟ ಮಾಡುವ ಅಂಗಡಿಗಳು, ಪಾನ್‍ಶಾಪ್, ಹೋಟೆಲ್‍ಗಳ ಮೇಲೆ ದಾಳಿ ನಡೆಸಿ ಕೋಟ್ಪಾ ಕಾಯ್ದೆ ಉಲ್ಲಂಘನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿ ದಂಡ ವಿಧಿಸಿದೆ.
ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಬಾಲ ಕಾರ್ಮಿಕರ ಯೋಜನೆ, ತಾಲ್ಲೂಕು ಪಂಚಾಯ್ತಿ, ಶಿಕ್ಷಣ ಇಲಾಖೆ, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ, ಹಾಗೂ ಪೊಲೀಸ್ ಇಲಾಖೆ ಇವರ ಸಹಯೋಗದೊಂದಿಗೆ ಕಾರ್ಯಾಚರಣೆ ಹಮ್ಮಿಕೊಳ್ಳಲಾಗಿತ್ತು.
ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ ಇವರ ನೇತೃತ್ವದಲ್ಲಿ ತಂಡ ರಚಿಸಿಕೊಂಡು ಸಿಗರೇಟು ಮತ್ತು ಇತರ ತಂಬಾಕು ಉತ್ಪನ್ನಗಳ ಅಧಿನಿಯಮ-2003 ಸೆಕ್ಷನ್ 4 ರಡಿ 22, ಸೆಕ್ಷನ್ 6ಎ ಅಡಿಯಲ್ಲಿ 07, 29 ಸೇರಿದಂತೆ ಒಟ್ಟು 29 ಪ್ರಕರಣಗಳನ್ನು ದಾಖಲಿಸಿ, ರೂ.3500/- ಗಳನ್ನು ದಂಡದ ರೂಪದಲ್ಲಿ ಸಂಗ್ರಹಿಸಲಾಯಿತು.
ತಂಡವು ಚನ್ನಗಿರಿ ತಾಲ್ಲೂಕಿನ ಸಂತೇಬೆನ್ನೂರಿನ ತಂಬಾಕು ಉತ್ಪನ್ನ ಮಾರಾಟ ಮಾಡುವ ಅಂಗಡಿಗಳ ಮೇಲೆ ಹೊಟೇಲ್, ಬಾರ್, ಪಾನ್‍ಶಾಪ್, ಬಸ್ ನಿಲ್ದಾಣ ಇತ್ಯಾದಿ ಪ್ರಮುಖ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನಗಳನ್ನು ಮಾರುವವರು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನಗಳನ್ನು ಸೇವಿಸುವವರಿಗೆ ಸ್ಥಳದಲ್ಲಿಯೇ ದಂಡ ಹಾಕುವ ಮೂಲಕ ಜಾಗೃತಿ ಮೂಡಿಸಿದರು. ಹಾಗೂ ಸಾರ್ವಜನಿಕ ಸ್ಥಳದಲ್ಲಿರುವ ಅಂಗಡಿ ಮಾಲೀಕರುಗಳು ಧೂಮಪಾನ ನಿಷೇಧÀದ ಬಗ್ಗೆ ಪ್ರದರ್ಶಿಸಬೇಕಾದ ಫಲಕಗಳನ್ನು ಕಟ್ಟುನಿಟ್ಟಾಗಿ ಅಳವಡಿಸಲು ತಾಕೀತು ಮಾಡಿದರು.
ಕೋಟ್ಪಾ ಕಾಯಿದೆಯ ಸೆಕ್ಷನ್ 6ಎ ಪ್ರಕಾರ 18 ವರ್ಷದೊಳಗಿನ ಮಕ್ಕಳಿಗೆ ತಂಬಾಕು ಉತ್ಪನ್ನಗಳನ್ನು ಮಾರುವುದು ಹಾಗೂ ಮಕ್ಕಳಿಂದ ತಂಬಾಕು ಉತ್ಪನ್ನಗಳ ಮಾರಾಟ ಮಾಡಿಸುವುದನ್ನು ನಿಷೇಧಿಸಿರುವುದರ ಬಗ್ಗೆ, ಹಾಗೂ ಶಾಲಾ ಕಾಲೇಜು, ಶಿಕ್ಷಣ ಸಂಸ್ಥೆಗಳ 100 ಯಾರ್ಡ್ ಅಂತರದಲ್ಲಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡದಿರುವುದು, ಸೆಕ್ಷನ್ 4 ಸಾರ್ವಜನಿಕ ಪ್ರದೇಶದಲ್ಲಿ ಧೂಮಪಾನ ನಿಷೇಧ ಮತ್ತು ತಂಬಾಕು ಉತ್ಪನ್ನಗಳ ಪ್ಯಾಕ್‍ಗಳ ಮೇಲೆ ಎಚ್ಚರಿಕೆ ಚಿಹ್ನೆ ಇಲ್ಲದೆ ಮಾರಾಟ ಮಾಡುವುದನ್ನು ನಿಷೇಧÀ ಇರುವ ಬಗ್ಗೆ ತಂಡದ ಸದಸ್ಯರು ಮಾಹಿತಿ ನೀಡಿದರು.
ಟಿಹೆಚ್‍ಓ ಡಾ.ಪ್ರಭು.ಬಿ.ಎಂ, ಪಿಎಸ್‍ಐ ಶಿವರುದ್ರಪ್ಪ ಮೇಟಿ, ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಜಿಲ್ಲಾ ಸಲಹೆಗಾರ ಸತೀಶ ಕಲಹಾಳ, ಸಮಾಜ ಕಾರ್ಯಕರ್ತ ದೇವರಾಜ್ ಕೆ.ಪಿ, ಹಿರಿಯ ಆರೋಗ್ಯ ಸಹಾಯಕ ಲೋಕೇಶಪ್ಪ, ಉಪ ತಹಶಿಲ್ದಾರ್ ಮಂಜುನಾಥ, ಹಿರಿಯ ಆರೋಗ್ಯ ಸಹಾಯಕ ಮಂಜಪ್ಪ.ಟಿ.ಕೆ, ಕಂದಾಯ ನಿರೀಕ್ಷಕರಾದ ವಿಶ್ವನಾಥ, ಸಾರ್ವಜನಿಕ ಶಿಕ್ಷಣ ಇಲಾಖೆಯ ಶ್ರೀಶೈಲಪ್ಪ ಹಾಗೂ ಪೊಲೀಸ್ ಸಿಬ್ಬಂದಿ, ಇತರರು ಹಾಜರಿದ್ದರು.

Share: