Saturday, 17 Oct 2026
Breaking
ಎಸ್‌ಎಸ್‌ಕೆ ಸಮಾಜದ ದಸರಾ ಆಚರಣೆ ಅತ್ಯಂತ ವಿಶೇಷ ವಾಗಿದ್ದು ಭಕ್ತಿ, ಶ್ರದ್ಧೆ ಇತರಿಗೆ ಮಾರ್ಗದರ್ಶಿ ; ಶಾಸಕ ಹರೀಶ್  ಕನ್ನಡ ಸಾಹಿತ್ಯದಲ್ಲಿ ವೈಚಾರಿಕ, ಸಾಂಸ್ಕೃತಿಕ ಹಾಗೂ ಸಾಮಾಜಿಕ ಮೌಲ್ಯಗಳ ಸಮನ್ವಯವಿದೆ ; ಡಾ. ಎ.ಬಿ. ರಾಮಚಂದ್ರಪ್ಪ ಶಿಕ್ಷಣ ಸಂಸ್ಥೆ, ರಿಯಲ್ ಎಸ್ಟೇಟ್ ವ್ಯವಹಾರವಿಲ್ಲ ; ಸೇವೆ ಮಾಡುವ ಉದ್ದೇಶದಿಂದ ಚುನಾವಣೆಗೆ ಸ್ಪರ್ಧೆ: ಶಶಿ ಹುಲಿಕುಂಟೆ ಮಠ ಹರಿಹರ ಗಣೇಶೋತ್ಸವದ ಇತಿಹಾಸದಲ್ಲಿ ಹೊಸ ಅಧ್ಯಾಯ ; ಐತಿಹಾಸಿಕ ರಾಜಭೀದಿ ಉತ್ಸವಕ್ಕೆ ಹರಿಹರದಲ್ಲಿ ಮುನ್ನುಡಿ ದಾವಣಗೆರೆ ‘ಆರೋಗ್ಯ ಸಂಜೀವಿ’ ಕಾಯ್ದೆಹೊಳ್ಳಿ ; ನಿಜದ ಬಿಸಿಲವೃತ್ತ” ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್‌ನಲ್ಲಿ ಇಂದಿರಾಗಾಂಧಿ ವಸತಿ ಶಾಲೆ ವಿದ್ಯಾರ್ಥಿಗಳ ಸಾಧನೆ ಸಾಲ ಮರುಪಾವತಿಸುವಂತೆ ಗ್ರಾಹಕರಿಗೆ ಮನವಿ
Menu
ದೇಶ-ವಿದೇಶ

ಪ್ರಿಯಾಂಕಾ ಗಾಂಧಿ P.A ವಿರುದ್ಧ ಎಫ್‍ಐಆರ್ ದಾಖಲು

March 8, 2023 4 years ago 1 min read

 

ಮೀರತ್,ಮಾ.8 True Media Kannada-ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಆಪ್ತ ಸಹಾಯಕ ತನಗೆ ಜೀವ ಬೆದರಿಕೆ ಹಾಕಿದ್ದಾರೆ ಎಂದು ಬಿಗ್ ಬಾಸ್‍ನಲ್ಲಿ ಕಂಟೆಸ್ಟೆಂಟ್ ಅರ್ಚನಾ ಗೌತಮ್ ಆರೋಪಿಸಿದ್ದಾರೆ.

ಬಿಗ್ ಬಾಸ್ 16ನೇ ಸೀಸನಿನ ಟಾಪ್ 5 ಫೈನಲಿಸ್ಟ್‍ರಲ್ಲಿ ಒಬ್ಬರಾಗಿದ್ದ ಅರ್ಚನಾ ಗೌತಮ್ ಅವರು ಈ ಗಂಭೀರ ಆರೋಪ ಮಾಡಿದ್ದು, ಈ ಕುರಿತಂತೆ ಮೀರತ್‍ನ ಪರ್ತಾಪುರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲು.

ಎಫ್ ಬಿ ಲೈವ್‍ನಲ್ಲಿ ಘಟನೆಯ ಬಗ್ಗೆ ವಿವರವಾಗಿ ಮಾತನಾಡಿರುವ ಅವರು ಪ್ರಿಯಾಂಕಾ ಗಾಂಧಿ ಅವರ ಆಪ್ತ ಸಹಾಯಕ ಸಂದೀಪ್ ಸಿಂಗ್ ನನ್ನ ವಿರುದ್ಧ ಜಾತಿ ನಿಂದನೆ ಮಾಡಿದ್ದಾರೆ.
ಪ್ರಿಯಾಂಕಾ ಗಾಂಧಿಯವರ ಆಹ್ವಾನದ ಮೇರೆಗೆ ಕಾಂಗ್ರೆಸ್ ಮಹಾಧಿವೇಶನದಲ್ಲಿ ಪಾಲ್ಗೊಳ್ಳಲು ಫೆಬ್ರವರಿ 26 ರಂದು ಛತ್ತೀಸ್‍ಗಢದ ರಾಯ್‍ಪುರಕ್ಕೆ ತಮ್ಮ ಪುತ್ರಿ ಅರ್ಚನಾ ತೆರಳಿದ್ದ ಸಂದರ್ಭದಲ್ಲಿ ಪ್ರಿಯಾಂಕಾ ಗಾಂಧಿ ಅವರನ್ನು ಭೇಟಿ ಮಾಡಿಸುವಂತೆ ಅವರ ಆಪ್ತ ಸಹಾಯಕರನ್ನು ಕೇಳಿಕೊಂಡಿದ್ದರು ಎಂದು ಆರ್ಚನಾ ತಂದೆ ಗೌತಮ್ ಬುದ್ಧ ತಿಳಿಸಿದ್ದಾರೆ.

ಆದರೆ, ಆಕೆಯನ್ನು ಪ್ರಿಯಾಂಕಾ ಗಾಂಧಿಗೆ ಪರಿಚಯಿಸಲು ನಿರಾಕರಿಸಿದ್ದ ಆತ, ಜಾತಿವಾದಿ ಪದಗಳು ಹಾಗೂ ಅವಾಚ್ಯ ಶಬ್ಧಗಳನ್ನು ಬಳಸಿ ಅರ್ಚನಾ ಜತೆ ಅಸಭ್ಯವಾಗಿ ಮಾತನಾಡಿದ್ದಾನೆ.ಇದಲ್ಲದೆ ಕೊಲೆ ಬೆದರಿಕೆಯನ್ನೂ ಹಾಕಿದ್ದಾನೆ ಎಂದು ಹೇಳಿದ್ದಾರೆ.

ಅರ್ಚನಾ ಅವರ ತಂದೆ ಗೌತಮ್ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಮೀರತ್ ಎಸ್ಪಿ ಪಿಯೂಷ್ ಸಿಂಗ್ ತಿಳಿಸಿದ್ದಾರೆ. ಬಿಗ್ ಬಾಸ್ ಮಾಜಿ ಸ್ರ್ಪಧಿ ಮತ್ತು ಕಾಂಗ್ರೆಸ್ ನಾಯಕಿ ಅರ್ಚನಾ ಗೌತಮ್ ಅವರಿಗೆ ಬೆದರಿಕೆ ಹಾಕಿದ ಆರೋಪದ ಮೇಲೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಪಿಎ ವಿರುದ್ಧ ಪ್ರಥಮ ಮಾಹಿತಿ ವರದಿಯನ್ನು ದಾಖಲಿಸಲಾಗಿದೆ ಎಂದು ಪೋಲೀಸ್ ಅಧಿಕಾರಿ ತಿಳಿಸಿದ್ದಾರೆ.

Share:

More in ದೇಶ-ವಿದೇಶ

View More →

Leave a Reply

Your email address will not be published. Required fields are marked *