Friday, 16 Oct 2026
Breaking
ಕನ್ನಡ ಸಾಹಿತ್ಯದಲ್ಲಿ ವೈಚಾರಿಕ, ಸಾಂಸ್ಕೃತಿಕ ಹಾಗೂ ಸಾಮಾಜಿಕ ಮೌಲ್ಯಗಳ ಸಮನ್ವಯವಿದೆ ; ಡಾ. ಎ.ಬಿ. ರಾಮಚಂದ್ರಪ್ಪ ಶಿಕ್ಷಣ ಸಂಸ್ಥೆ, ರಿಯಲ್ ಎಸ್ಟೇಟ್ ವ್ಯವಹಾರವಿಲ್ಲ ; ಸೇವೆ ಮಾಡುವ ಉದ್ದೇಶದಿಂದ ಚುನಾವಣೆಗೆ ಸ್ಪರ್ಧೆ: ಶಶಿ ಹುಲಿಕುಂಟೆ ಮಠ ಹರಿಹರ ಗಣೇಶೋತ್ಸವದ ಇತಿಹಾಸದಲ್ಲಿ ಹೊಸ ಅಧ್ಯಾಯ ; ಐತಿಹಾಸಿಕ ರಾಜಭೀದಿ ಉತ್ಸವಕ್ಕೆ ಹರಿಹರದಲ್ಲಿ ಮುನ್ನುಡಿ ದಾವಣಗೆರೆ ‘ಆರೋಗ್ಯ ಸಂಜೀವಿ’ ಕಾಯ್ದೆಹೊಳ್ಳಿ ; ನಿಜದ ಬಿಸಿಲವೃತ್ತ” ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್‌ನಲ್ಲಿ ಇಂದಿರಾಗಾಂಧಿ ವಸತಿ ಶಾಲೆ ವಿದ್ಯಾರ್ಥಿಗಳ ಸಾಧನೆ ಸಾಲ ಮರುಪಾವತಿಸುವಂತೆ ಗ್ರಾಹಕರಿಗೆ ಮನವಿ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ತಂಬಾಕು ಮಾರಾಟ: ದಾಳಿ,ದಂಡ ವಿಧಿಸಿದ ಅಧಿಕಾರಿಗಳು
Menu
Shivamogga News

ಸಹಾಯಕ ಪ್ರಾಧ್ಯಾಪಕರುಗಳ ನೇಮಕಾತಿಗೆ ನೇರ ಸಂದರ್ಶನ

July 6, 2023 3 years ago 1 min read

ಶಿವಮೊಗ್ಗ, ಜುಲೈ 06, True Media Kannada : ಶಿವಮೊಗ್ಗ ಪಶುವೈದ್ಯಕೀಯ ಮಹಾವಿದ್ಯಾಲಯದ ವಿವಿಧ ವಿಭಾಗಗಳಲ್ಲಿ ಕೆಳಕಂಡ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರುಗಳ ಗುತ್ತಿಗೆ ಆಧಾರಿತ ಹುದ್ದೆಗಳ ನೇಮಕಾತಿಗಾಗಿ ಜು.13 ರ ಬೆಳಗ್ಗೆ 11 ಗಂಟೆಗೆ ಡೀನ್ ಕಚೇರಿ, ಪಶುವೈದ್ಯಕೀಯ ಮಹಾವಿದ್ಯಾಲಯದಲ್ಲಿ ಸಂದರ್ಶನವನ್ನು ಏರ್ಪಡಿಸಲಾಗಿದೆ.
ಪಶುವೈದ್ಯಕೀಯ ಶರೀರಕ್ರಿಯಾ ಮತ್ತು ಜೀವರಸಾಯನ ಶಾಸ್ತ್ರ ವಿಭಾಗ, ಜಾನುವಾರು ಉತ್ಪಾದನಾ ನಿರ್ವಹಣೆ ಶಾಸ್ತ್ರ ವಿಭಾಗ, ಪಶುವೈದ್ಯಕೀಯ ಸಾರ್ವಜನಿಕ ಆರೋಗ್ಯ ಮತ್ತು ಸಮುದಾಯ ರೋಗ ಅಧ್ಯಯನ ಶಾಸ್ತ್ರ ವಿಭಾಗ, ಪಶುವೈದ್ಯಕೀಯ ಸ್ತ್ರೀ ರೋಗ ಮತ್ತು ಪ್ರಸೂತಿ ಶಾಸ್ತ್ರ ವಿಭಾಗ, ಪಶುವೈದ್ಯಕೀಯ ಶಸ್ತ್ರ ಚಿಕಿತ್ಸೆ ಮತ್ತು ಕ್ಷ-ಕಿರಣ ಶಾಸ್ತ್ರ ವಿಭಾಗ, ಪಶುವೈದ್ಯಕೀಯ ಪರೋಪಜೀವಿ ಶಾಸ್ತ್ರ ವಿಭಾಗ, ಜಾನುವಾರು ಸಾಗಾಣಿಕೆ ಸಂಕೀರ್ಣ ವಿಭಾಗ (ಪ್ರಾಣಿ ಅನುವಂಶೀಯತೆ ಮತ್ತು ತಳಿ ಶಾಸ್ತ್ರ), ಪಶುವೈದ್ಯಕೀಯ ಚಿಕಿತ್ಸಾ ಸಂಕೀರ್ಣ ಶಾಸ್ತ್ರ ವಿಭಾಗದಲ್ಲಿ (ಪಶುವೈದ್ಯಕೀಯ ಸ್ತ್ರೀ ರೋಗ ಮತ್ತು ಪ್ರಸೂತಿ ಶಾಸ್ತ್ರ, ಪಶುವೈದ್ಯಕೀಯ ಶಸ್ತ್ರ ಚಿಕಿತ್ಸೆ ಮತ್ತು ಕ್ಷ-ಕಿರಣ ಶಾಸ್ತ್ರ, ಪಶುವೈದ್ಯಕೀಯ ಚಿಕಿತ್ಸಾ ಶಾಸ್ತ್ರ, ಚಿಕಿತ್ಸಾ ರೋಗಶಾಸ್ತ್ರ/ಸೂಕ್ಷ್ಮಜೀವಾಣು ಶಾಸ್ತ್ರ/ಪರೋಪಜೀವಿ ಶಾಸ್ತ್ರ/ ಜೀವರಸಾಯನ ಶಾಸ್ತ್ರ) ವಿಭಾಗಗಳಲ್ಲಿ ಅರ್ಹ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ವಿಶ್ವವಿದ್ಯಾಲಯದ ಜಲತಾಣ ವಿಳಾಸ www.kvafsu.edu.in ನ್ನು ಮತ್ತು ದೂರವಾಣಿ ಸಂಖ್ಯೆ : 08182-200872 ನ್ನು ಸಂಪರ್ಕಿಸುವಂತೆ ಡೀನ್ ಪಶುವೈದ್ಯಕೀಯ ಮಹಾವಿದ್ಯಾಲಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share:

More in Shivamogga News

View More →

Leave a Reply

Your email address will not be published. Required fields are marked *