Saturday, 17 Oct 2026
Breaking
ಎಸ್‌ಎಸ್‌ಕೆ ಸಮಾಜದ ದಸರಾ ಆಚರಣೆ ಅತ್ಯಂತ ವಿಶೇಷ ವಾಗಿದ್ದು ಭಕ್ತಿ, ಶ್ರದ್ಧೆ ಇತರಿಗೆ ಮಾರ್ಗದರ್ಶಿ ; ಶಾಸಕ ಹರೀಶ್  ಕನ್ನಡ ಸಾಹಿತ್ಯದಲ್ಲಿ ವೈಚಾರಿಕ, ಸಾಂಸ್ಕೃತಿಕ ಹಾಗೂ ಸಾಮಾಜಿಕ ಮೌಲ್ಯಗಳ ಸಮನ್ವಯವಿದೆ ; ಡಾ. ಎ.ಬಿ. ರಾಮಚಂದ್ರಪ್ಪ ಶಿಕ್ಷಣ ಸಂಸ್ಥೆ, ರಿಯಲ್ ಎಸ್ಟೇಟ್ ವ್ಯವಹಾರವಿಲ್ಲ ; ಸೇವೆ ಮಾಡುವ ಉದ್ದೇಶದಿಂದ ಚುನಾವಣೆಗೆ ಸ್ಪರ್ಧೆ: ಶಶಿ ಹುಲಿಕುಂಟೆ ಮಠ ಹರಿಹರ ಗಣೇಶೋತ್ಸವದ ಇತಿಹಾಸದಲ್ಲಿ ಹೊಸ ಅಧ್ಯಾಯ ; ಐತಿಹಾಸಿಕ ರಾಜಭೀದಿ ಉತ್ಸವಕ್ಕೆ ಹರಿಹರದಲ್ಲಿ ಮುನ್ನುಡಿ ದಾವಣಗೆರೆ ‘ಆರೋಗ್ಯ ಸಂಜೀವಿ’ ಕಾಯ್ದೆಹೊಳ್ಳಿ ; ನಿಜದ ಬಿಸಿಲವೃತ್ತ” ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್‌ನಲ್ಲಿ ಇಂದಿರಾಗಾಂಧಿ ವಸತಿ ಶಾಲೆ ವಿದ್ಯಾರ್ಥಿಗಳ ಸಾಧನೆ ಸಾಲ ಮರುಪಾವತಿಸುವಂತೆ ಗ್ರಾಹಕರಿಗೆ ಮನವಿ
Menu
Harihar News

ವಿದ್ಯಾರ್ಥಿಗಳ ಅನುಕೂಲಕ್ಕೆ ಬಸ್ ಸೌಲಭ್ಯ ಕಲ್ಪಿಸಲು ಜೈ ಕರ್ನಾಟಕ ಸಂಘಟನೆಯ ಮನವಿ

September 10, 2023 3 years ago 1 min read
True Media kannada 06-Sept-2023-ಹರಿಹರ : ಜಯಕರ್ನಾಟಕ ಸಂಘಟನೆ ನೇತೃತ್ವದಲ್ಲಿ ಬುಧವಾರ ಬೆಳ್ಳೂಡಿ ಗ್ರಾಮದ ವಿದ್ಯಾರ್ಥಿಗಳು ಶಾಲಾ, ಕಾಲೇಜುಗಳಿಗೆ ತೆರಳಲು ಅನುಕೂಲವಾಗುವಂತೆ ಬಸ್ ಸಂಚಾರ ಸೌಲಭ್ಯ ಕಲ್ಪಿಸಲು ಆಗ್ರಹಿಸಿ ಇಲ್ಲಿನ ಕೆಎಸ್‌ಆರ್‌ಟಿಸಿ ಡಿಪೋ ಅಧಿಕಾರಿಗೆ ಮನವಿ ನೀಡಿದರು.
   ಜಯಕರ್ನಾಟಕ ಸಂಘಟನೆ ಹರಿಹರ ತಾಲ್ಲೂಕು ಘಟಕದ ಅಧ್ಯಕ್ಷ ಎಸ್.ಗೋವಿಂದ ಮಾತನಾಡಿ, ಗ್ರಾಮಕ್ಕೆ ಅತಿ ಕಡಿಮೆ ಬಸ್ ಸಂಚಾರವಿದ್ದು, ಶಾಲಾ ಕಾಲೇಜುಗಳಿಗೆ ವಿದ್ಯಾರ್ಥಿಗಳು ಸಂಚರಿಸುವ ಸಮಯಕ್ಕೆ ಬಸ್ ಸೌಲಭ್ಯವಿಲ್ಲ ಎಂದರು.ಹರಿಹರದ ವಿವಿಧ ಶಾಲಾ, ಕಾಲೇಜುಗಳಿಗೆ ಗ್ರಾಮದಿಂದ 150 ಕ್ಕೂ ಹೆಚ್ಚು ವಿದ್ಯಾರ್ಥಿಗಳು ನಿತ್ಯ ಓಡಾಡುತ್ತಾರೆ. ಸಮಯಕ್ಕೆ ಸರಿಯಾಗಿ ಬಸ್ ಇಲ್ಲದ್ದರಿಂದ ಅನಿವಾರ್ಯವಾಗಿ ವಿದ್ಯಾರ್ಥಿಗಳು ಅಪೆ ಆಟೋಗಳಲ್ಲಿ ಸಾಗುತ್ತಿದ್ದಾರೆ.
   ಬಸ್ ಇಲ್ಲದ್ದರಿಂದ ಈ ವಿದ್ಯಾರ್ಥಿಗಳು ಸಮಯಕ್ಕೆ ಸರಿಯಾಗಿ ಶಾಲಾ, ಕಾಲೇಜುಗಳಿಗೆ ತಲುಪಲಾಗದೆ ಶೈಕ್ಷಣಿಕ ಹಿನ್ನೆಡೆ ಅನುಭವಿಸುತ್ತಿದ್ದಾರೆ. ಬೆಳಿಗ್ಗೆ 9.10ಕ್ಕೆ ಬೆಳ್ಳೂಡಿಯಿಂದ ಹರಿಹರಕ್ಕೆ ಬಸ್ ಸೌಲಭ್ಯ ಒದಗಿಸಬೇಕು. ತಾಲ್ಲೂಕಿನ ಹಲವು ಗ್ರಾಮಗಳಲ್ಲಿ ಯೂ ಈ ಸಮಸ್ಯೆ ಇದೆ. ಹಣ ಪಾವತಿಸಿ ಬಸ್ ಪಾಸ್ ಹೊಂದಿರುವ ವಿದ್ಯಾರ್ಥಿಗಳಿಗೆ ಸೌಲಭ್ಯ ಒದಗಿಸುವುದು ಸಾರಿಗೆ ಸಂಸ್ಥೆಯ ಜವಾಬ್ದಾರಿಯಾಗಿದೆ.
    ಶನಿವಾರದಿಂದ ಬೆಳ್ಳೂಡಿ ವಿದ್ಯಾರ್ಥಿಗಳಿಗೆ ಬಸ್ ಸೌಲಭ್ಯ ಒದಗಿಸದಿದ್ದರೆ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಲಾಗುವು ದೆಂದು ಎಚ್ಚರಿಸಿದರು. ಮನವಿ ಸ್ವೀಕರಿಸಿದ ಡಿಪೋ ಅಧಿಕಾರಿ ಪರಿಶೀಲನೆ ಮಾಡಿ ಸಮಸ್ಯೆ ಬಗೆಹರಿಸಲಾಗುವುದೆಂದರು.
     ಈ ಸಮಯದಲ್ಲಿ ಸoಘಟನೆ ಉಪಾಧ್ಯಕ್ಷ ಆನಂದ್ ಎಂ.ಆರ್., ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಸಿ.ಎಚ್. ಖಜಾಂಚಿ ಶಬರೀಶ್ ಮತ್ತು ವಿದ್ಯಾರ್ಥಿ ಘಟಕದ ಅಧ್ಯಕ್ಷ ಶ್ರೀನಿವಾಸ್, ಕಾರ್ತಿಕ್, ಸುದೀಪ್, ರಾಜು, ಮಹಾರುದ್ರ, ಹರೀಶ್, ಎಂ.ಎo.ಚೈತ್ರ, ಮೇಘನ, ನಯನ, ನಂದಿನಿ, ಜ್ಯೋತಿ, ಕೆ.ಪಿ.ಪಲ್ಲವಿ, ಕವಿತಾ ಹಾಗೂ ಇತರರು ಉಪಸ್ಥಿತರಿದ್ದರು.
Share: