Saturday, 17 Oct 2026
Breaking
ಎಸ್‌ಎಸ್‌ಕೆ ಸಮಾಜದ ದಸರಾ ಆಚರಣೆ ಅತ್ಯಂತ ವಿಶೇಷ ವಾಗಿದ್ದು ಭಕ್ತಿ, ಶ್ರದ್ಧೆ ಇತರಿಗೆ ಮಾರ್ಗದರ್ಶಿ ; ಶಾಸಕ ಹರೀಶ್  ಕನ್ನಡ ಸಾಹಿತ್ಯದಲ್ಲಿ ವೈಚಾರಿಕ, ಸಾಂಸ್ಕೃತಿಕ ಹಾಗೂ ಸಾಮಾಜಿಕ ಮೌಲ್ಯಗಳ ಸಮನ್ವಯವಿದೆ ; ಡಾ. ಎ.ಬಿ. ರಾಮಚಂದ್ರಪ್ಪ ಶಿಕ್ಷಣ ಸಂಸ್ಥೆ, ರಿಯಲ್ ಎಸ್ಟೇಟ್ ವ್ಯವಹಾರವಿಲ್ಲ ; ಸೇವೆ ಮಾಡುವ ಉದ್ದೇಶದಿಂದ ಚುನಾವಣೆಗೆ ಸ್ಪರ್ಧೆ: ಶಶಿ ಹುಲಿಕುಂಟೆ ಮಠ ಹರಿಹರ ಗಣೇಶೋತ್ಸವದ ಇತಿಹಾಸದಲ್ಲಿ ಹೊಸ ಅಧ್ಯಾಯ ; ಐತಿಹಾಸಿಕ ರಾಜಭೀದಿ ಉತ್ಸವಕ್ಕೆ ಹರಿಹರದಲ್ಲಿ ಮುನ್ನುಡಿ ದಾವಣಗೆರೆ ‘ಆರೋಗ್ಯ ಸಂಜೀವಿ’ ಕಾಯ್ದೆಹೊಳ್ಳಿ ; ನಿಜದ ಬಿಸಿಲವೃತ್ತ” ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್‌ನಲ್ಲಿ ಇಂದಿರಾಗಾಂಧಿ ವಸತಿ ಶಾಲೆ ವಿದ್ಯಾರ್ಥಿಗಳ ಸಾಧನೆ ಸಾಲ ಮರುಪಾವತಿಸುವಂತೆ ಗ್ರಾಹಕರಿಗೆ ಮನವಿ
Menu
Davanagere News

ಅ.02 ರಂದು ಗಾಂಧಿ ಭವನದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮ ದಿನಾಚರಣೆ ಅಂಗವಾಗಿ ಸರ್ವಧರ್ಮ ಪ್ರಾರ್ಥನೆ

October 1, 2023 3 years ago 1 min read

ದಾವಣಗೆರೆ ಅ.01, ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ದಾವಣಗೆರೆ ಇವರ ಸಂಯುಕ್ತಾಶ್ರಯದಲ್ಲಿ ಗಾಂಧಿ ಭವನದಲ್ಲಿ  ಅಕ್ಟೋಬರ್ 2 ರ ಸೋಮವಾರ ಬೆಳಗ್ಗೆ 10 ಗಂಟೆಗೆ ಗಾಂಧೀ ಜಯಂತಿ ಮತ್ತು ಲಾಲ್ ಬಹಾದ್ದೂರ್ ಶಾಸ್ತ್ರಿಯವರ ಜನ್ಮ ದಿನಾಚರಣೆ ಏರ್ಪಡಿಸಲಾಗಿದೆ. ಗಣಿ ಮತ್ತು ಭೂವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ್ ಅವರು ಗಾಂಧಿಜೀಯವರ ಪ್ರತಿಮೆಗೆ ಮಾಲಾರ್ಪಣೆ ಮಾಡುವರು. ದಕ್ಷಿಣ ಕ್ಷೇತ್ರದ ಶಾಸಕರಾದ ಡಾ.ಶಾಮನೂರು ಶಿವಶಂಕರಪ್ಪ ಇವರು ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಲೋಕಸಭಾ ಸದಸ್ಯರಾದ ಡಾ.ಜಿ.ಎಂ.ಸಿದ್ದೇಶ್ವರ, ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ, ಜಗಳೂರು ಶಾಸಕ ಬಿ.ದೇವೇಂದ್ರಪ್ಪ, ಹೊನ್ನಾಳಿ ಶಾಸಕ ಶಾಂತನಗೌಡ ಡಿ.ಜಿ, ಚನ್ನಗಿರಿ ಶಾಸಕ ಬಸವರಾಜು ವಿ.ಶಿವಗಂಗಾ, ಹರಿಹರ ಶಾಸಕ ಬಿ.ಪಿ ಹರೀಶ್, ಮಹಾನಗರ ಪಾಲಿಕೆ ಮೇಯರ್ ವಿನಾಯಕ ಬಿ.ಹೆಚ್, ವಿಧಾನ ಪರಿಷತ್ ಸದಸ್ಯರಾದ ಕೆ.ಪಿ.ನಂಜುಂಡಿ ವಿಶ್ವಕರ್ಮ, ರವಿಕುಮಾರ್ ಎನ್, ಡಾ. ತೇಜಸ್ವಿನಿಗೌಡ, ಎಸ್.ಎಲ್ ಭೋಜೇಗೌಡ, ವೈ.ಎ. ನಾರಾಯಣಸ್ವಾಮಿ, ಚಿದಾನಂದ. ಎಂ.ಗೌಡ, ಡಿ.ಎಸ್ ಅರುಣ್, ಕೆ.ಎಸ್ ನವೀನ್, ಕೆ.ಅಬ್ದುಲ್ ಜಬ್ಬಾರ್, ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀಮತಿ ಉಮಾ ಪ್ರಶಾಂತ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುರೇಶ್ ಬಿ. ಇಟ್ನಾಳ್ ಭಾಗವಹಿಸುವರು.
ಕಾರ್ಯಕ್ರಮದಲ್ಲಿ ಜಯಂತಿ ಅಂಗವಾಗಿ ಸರ್ವಧರ್ಮ ಪ್ರಾರ್ಥನೆ ಹಾಗೂ ಹಿರಿಯ ಪತ್ರಕರ್ತರಾದ ಜಿ.ಎಸ್.ಉಜ್ಜಿನಪ್ಪ ಉಪನ್ಯಾಸ ನೀಡುವರು. ಬಾಪೂಜಿ ಕುರಿತು ಪ್ರಬಂಧ ಸ್ಪರ್ಧೆ, ವಿಜೇತರಿಗೆ ಗಾಂಧೀ ಜಯಂತಿ ಕಾರ್ಯಕ್ರಮದಲ್ಲಿ ನಗದು ಬಹುಮಾನ, ಪ್ರಮಾಣ ಪತ್ರ ವಿತರಣೆ.

Share: