Saturday, 17 Oct 2026
Breaking
ಎಸ್‌ಎಸ್‌ಕೆ ಸಮಾಜದ ದಸರಾ ಆಚರಣೆ ಅತ್ಯಂತ ವಿಶೇಷ ವಾಗಿದ್ದು ಭಕ್ತಿ, ಶ್ರದ್ಧೆ ಇತರಿಗೆ ಮಾರ್ಗದರ್ಶಿ ; ಶಾಸಕ ಹರೀಶ್  ಕನ್ನಡ ಸಾಹಿತ್ಯದಲ್ಲಿ ವೈಚಾರಿಕ, ಸಾಂಸ್ಕೃತಿಕ ಹಾಗೂ ಸಾಮಾಜಿಕ ಮೌಲ್ಯಗಳ ಸಮನ್ವಯವಿದೆ ; ಡಾ. ಎ.ಬಿ. ರಾಮಚಂದ್ರಪ್ಪ ಶಿಕ್ಷಣ ಸಂಸ್ಥೆ, ರಿಯಲ್ ಎಸ್ಟೇಟ್ ವ್ಯವಹಾರವಿಲ್ಲ ; ಸೇವೆ ಮಾಡುವ ಉದ್ದೇಶದಿಂದ ಚುನಾವಣೆಗೆ ಸ್ಪರ್ಧೆ: ಶಶಿ ಹುಲಿಕುಂಟೆ ಮಠ ಹರಿಹರ ಗಣೇಶೋತ್ಸವದ ಇತಿಹಾಸದಲ್ಲಿ ಹೊಸ ಅಧ್ಯಾಯ ; ಐತಿಹಾಸಿಕ ರಾಜಭೀದಿ ಉತ್ಸವಕ್ಕೆ ಹರಿಹರದಲ್ಲಿ ಮುನ್ನುಡಿ ದಾವಣಗೆರೆ ‘ಆರೋಗ್ಯ ಸಂಜೀವಿ’ ಕಾಯ್ದೆಹೊಳ್ಳಿ ; ನಿಜದ ಬಿಸಿಲವೃತ್ತ” ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್‌ನಲ್ಲಿ ಇಂದಿರಾಗಾಂಧಿ ವಸತಿ ಶಾಲೆ ವಿದ್ಯಾರ್ಥಿಗಳ ಸಾಧನೆ ಸಾಲ ಮರುಪಾವತಿಸುವಂತೆ ಗ್ರಾಹಕರಿಗೆ ಮನವಿ
Menu
Harihar News

ಎಸ್.ಸಿ.ಪಿ, ಟಿ.ಎಸ್.ಪಿ ಪ್ರಗತಿ ಪರಿಶೀಲನಾ ಸಭೆ, ಕಾಲಮಿತಿಯಲ್ಲಿ ಅನುದಾನ ವೆಚ್ಚ ಮಾಡಲು ಸೂಚನೆ

November 16, 2023 3 years ago 1 min read

ದಾವಣಗೆರೆ, ನ. 16  : ಪರಿಶಿಷ್ಟ ಜಾತಿ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿ ರೂಪಿಸುವ ಯೋಜನೆಗೆ ಬಿಡುಗಡೆಯಾಗುವ ಅನುದಾನವನ್ನು ಕಾಲಮಿತಿಯಲ್ಲಿ ವೆಚ್ಚ ಮಾಡಬೇಕೆಂದು ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ ಸೂಚನೆ ನೀಡಿದರು.
ಅವರು ನವಂಬರ್ 16 ರಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಹಾಗೂ ಅವರ ಅಧ್ಯಕ್ಷತೆಯಲ್ಲಿ ನಡೆದ ಎಸ್.ಸಿ.ಪಿ, ಟಿ.ಎಸ್.ಪಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮಾರ್ಚ್ ಮಾಫಿಯಾಗೆ ಆಕ್ಷೇಪ. ಕೆಲವು ಇಲಾಖೆಯವರು ವರ್ಷವಿಡಿ ಅನುದಾನ ಖರ್ಚು ಮಾಡದಿದ್ದರೂ ಮಾರ್ಚ್ ನಲ್ಲಿ ಶೇ 100 ರಷ್ಟು ಸಾಧನೆ ಮಾಡುತ್ತಾರೆ. ಆದರೆ ಇದಕ್ಕೆ ಅವಕಾಶ ನೀಡದೆ, ಕೊನೆಯಲ್ಲಿ ಖರ್ಚು ಮಾಡುವ ಇಲಾಖೆ ಅಧಿಕಾರಿಗಳ ಮೇಲೆ ತೀವ್ರ ನಿಗಾ ವಹಿಸಲಾಗುತ್ತದೆ. ನೈಜ ಕಾರಣಗಳಿಲ್ಲದಿದ್ದಲ್ಲಿ ಶಿಸ್ತುಕ್ರಮ ಕೈಗೊಳ್ಳಲಾಗುತ್ತದೆ ಎಂದರು.
ಸಕಾಲದಲ್ಲಿ ವೆಚ್ಚ ಮಾಡಿ. ಈಗಾಗಲೇ ಎಲ್ಲಾ ಇಲಾಖೆಗಳ ಕ್ರಿಯಾ ಯೋಜನೆ ಅನುಮೋದನೆಯಾಗಿ ಅನುದಾನವನ್ನು ಬಿಡುಗಡೆ ಮಾಡಲಾಗಿದೆ. ವμÁರ್ಂತ್ಯದಲ್ಲಿ ಚುನಾವಣೆ ಬರುವುದರಿಂದ ಟೆಂಡರ್ ಕರೆದು ಅನುμÁ್ಟನ ಮಾಡಬೇಕು.
ಬೆಸ್ಕಾಂ ಶೂನ್ಯ ಪ್ರಗತಿ, ಆರೋಗ್ಯ ಇಲಾಖೆ ಶೇ 87, ಆಯುμï ಶೇ 35, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಶೇ 64, ಜಲಸಂಪನ್ಮೂಲ ಇಲಾಖೆ ಶೇ 46 ಸಾಧಿಸಲಾಗಿದೆ. ಸಣ್ಣ ನೀರಾವರಿ ಇಲಾಖೆಗೆ ರೂ.6 ಕೋಟಿ ಕ್ರಿಯಾ ಯೋಜನೆಗೆ ಅನುಮೋದನೆ ನೀಡಿದ್ದು ಅನುದಾನ ಬರಬೇಕಿದೆ ಎಂದಾಗ ನೀರಾವರಿ ಸೌಲಭ್ಯದ ಜೊತೆಗೆ ಅವರ ಜಮೀನುಗಳಿಗೆ ಅನುಕೂಲವಾಗುವಂತೆ ಸಣ್ಣ ಸಣ್ಣ ಕೆರೆ, ಚೆಕ್ ಡ್ಯಾಂ ನಿರ್ಮಾಣವನ್ನು ಜಲಸಂಪನ್ಮೂಲ ಇಲಾಖೆಯವರು ಮುಂದಾಗಬೇಕೆಂದರು. ನೀರಾವರಿ ಕೊನೆ ಭಾಗದ ಅನೇಕ ರೈತರು ನೀರು ತಲುಪುತ್ತಿಲ್ಲ ಎಂದು ಮನವಿ ಮಾಡಿದ್ದಾರೆ.
ಖಾತರಿಯಡಿ ಕಾಲುವೆ ಸ್ವಚ್ಛತೆ. ಜಿಲ್ಲೆಯಲ್ಲಿ ಉದ್ಯೋಗ ಖಾತರಿಯಡಿ ವಾರ್ಷಿಕ 35 ಲಕ್ಷ ಮಾನವ ದಿನಗಳ ಗುರಿ ಇದ್ದು ಇದನ್ನು ಇನ್ನೂ ಹೆಚ್ಚಿಸುವ ಮೂಲಕ ಕಾಲುವೆ ಸ್ವಚ್ಛ ಮಾಡಲು ಬಳಕೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಕ್ರಿಯಾ ಯೋಜನೆ ಪರಿಷ್ಕರಿಸಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಜಿ.ಪಂ. ಯೋಜನಾಧಿಕಾರಿಗಳಿಗೆ ತಿಳಿಸಿದರು.
ಜಿಲ್ಲೆಯಲ್ಲಿ ಎಲ್ಲಾ ಇಲಾಖೆ ಎಸ್ .ಸಿ.ಪಿ.ಯಿಂದ ಶೇ 72 ಮತ್ತು ಟಿ.ಎಸ್.ಪಿ.ಯಲ್ಲಿ ಶೇಕಡ 77 ಸೇರಿದಂತೆ ಜಿಲ್ಲೆಯಲ್ಲಿ ಸರಾಸರಿ ಶೇಕಡ 74.50 ರಷ್ಟು ಪ್ರಗತಿ ದಾಖಲಾಗಿದೆ. ಇದನ್ನು ಬರುವ ಡಿಸೆಂಬರ್ ವೇಳೆಗೆ ಶೇಕಡ 80 ಕ್ಕಿಂತಲೂ ಹೆಚ್ಚು ಸಾಧನೆ ಆಗಿರಬೇಕು ಎಂದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಮಲ್ಲನಾಯಕ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ನಾಗರಾಜ್ ಕೆ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

Share: