Friday, 16 Oct 2026
Breaking
ಎಸ್‌ಎಸ್‌ಕೆ ಸಮಾಜದ ದಸರಾ ಆಚರಣೆ ಅತ್ಯಂತ ವಿಶೇಷ ವಾಗಿದ್ದು ಭಕ್ತಿ, ಶ್ರದ್ಧೆ ಇತರಿಗೆ ಮಾರ್ಗದರ್ಶಿ ; ಶಾಸಕ ಹರೀಶ್  ಕನ್ನಡ ಸಾಹಿತ್ಯದಲ್ಲಿ ವೈಚಾರಿಕ, ಸಾಂಸ್ಕೃತಿಕ ಹಾಗೂ ಸಾಮಾಜಿಕ ಮೌಲ್ಯಗಳ ಸಮನ್ವಯವಿದೆ ; ಡಾ. ಎ.ಬಿ. ರಾಮಚಂದ್ರಪ್ಪ ಶಿಕ್ಷಣ ಸಂಸ್ಥೆ, ರಿಯಲ್ ಎಸ್ಟೇಟ್ ವ್ಯವಹಾರವಿಲ್ಲ ; ಸೇವೆ ಮಾಡುವ ಉದ್ದೇಶದಿಂದ ಚುನಾವಣೆಗೆ ಸ್ಪರ್ಧೆ: ಶಶಿ ಹುಲಿಕುಂಟೆ ಮಠ ಹರಿಹರ ಗಣೇಶೋತ್ಸವದ ಇತಿಹಾಸದಲ್ಲಿ ಹೊಸ ಅಧ್ಯಾಯ ; ಐತಿಹಾಸಿಕ ರಾಜಭೀದಿ ಉತ್ಸವಕ್ಕೆ ಹರಿಹರದಲ್ಲಿ ಮುನ್ನುಡಿ ದಾವಣಗೆರೆ ‘ಆರೋಗ್ಯ ಸಂಜೀವಿ’ ಕಾಯ್ದೆಹೊಳ್ಳಿ ; ನಿಜದ ಬಿಸಿಲವೃತ್ತ” ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್‌ನಲ್ಲಿ ಇಂದಿರಾಗಾಂಧಿ ವಸತಿ ಶಾಲೆ ವಿದ್ಯಾರ್ಥಿಗಳ ಸಾಧನೆ ಸಾಲ ಮರುಪಾವತಿಸುವಂತೆ ಗ್ರಾಹಕರಿಗೆ ಮನವಿ
Menu
Harihar News

ವಸತಿ ಯೋಜನೆ ಜಾರಿಗೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಧರಣಿ ಶಾಸಕ ಬಿ.ಪಿ.ಹರೀಶ್ ಭೇಟಿ

January 2, 2024 3 years ago 1 min read

ಹರಿಹರ: ತಾಲ್ಲೂಕಿನ ಭಾನುವಳ್ಳಿ ಹಾಗೂ ಕಡ್ಲೆಗೊಂದಿ ಗ್ರಾಮಗಳ ನಿರ್ವಸತಿಕ ದಲಿತ ಹಾಗೂ ಹಿಂದುಳಿದ ಸಮುದಾಯದವರಿಗೆ ವಸತಿ ಯೋಜನೆ ಜಾರಿಗೆ ಆಗ್ರಹಿಸಿ ನಗರದ ತಾಲ್ಲೂಕು ಕಚೇರಿ ಎದುರು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ.ಬಿ.ಕ್ರಷ್ಣಪ್ಪ ಸ್ಥಾಪಿತ)ಯಿಂದ ನಡೆಸುತ್ತಿರುವ ಧರಣಿ ಸ್ಥಳಕ್ಕೆ ಮಂಗಳವಾರ ಶಾಸಕ ಬಿ.ಪಿ.ಹರೀಶ್ ಭೇಟಿ ನೀಡಿ ಮನವಿ ಸ್ವೀಕರಿಸಿದರು.
ನಂತರ ಕದಸಂಸ ತಾಲ್ಲೂಕು ಸಂಚಾಲಕ ಪಿ.ಜೆ.ಮಹಾಂತೇಶ್ ಮಾತನಾಡಿ, ಎರಡೂ ಗ್ರಾಮಗಳಲ್ಲಿ ದಲಿತ ಹಾಗೂ ಹಿಂದುಳಿದ ಸಮುದಾಯದ ನೂರಾರು ಕುಟುಂಬದವರು ಸಣ್ಣ, ಪುಟ್ಟ ಗುಡಿಸಲು, ನೆರಿಕೆ ಮನೆಗಳಲ್ಲಿಗಳಲ್ಲಿ ಮೂಲ ಸೌಕರ್ಯಗಳಿಲ್ಲದೆ ವಾಸಿಸುತ್ತಿದ್ದಾರೆ.
ಈ ಎರಡೂ ಗ್ರಾಮಗಳಲ್ಲಿ ಸರ್ಕಾರಕ್ಕೆ ಸಂಬಂದಿತ ಜಮೀನುಗಳು ಲಭ್ಯವಿದೆ. ಈ ಕುರಿತು ಕಳೆದ ಎರಡು ವರ್ಷಗಳಿಂದ ಹೋರಾಟ ಮಾಡಲಾಗುತ್ತಿದೆ, ಕಳೆದ ಜೂನ್ ತಿಂಗಳಲ್ಲಿ ಭಾನುವಳ್ಳಿಯಿಂದ ಹರಿಹರದವರೆಗೆ ಪಾದಯಾತ್ರೆಯನ್ನೂ ಮಾಡಲಾಗಿದೆ, ಕಳೆದ 8 ದಿನಗಳಿಂದ ಅನಿರ್ಧಿಷ್ಟ ಧರಣಿ ಸತ್ಯಾಗ್ರಹ ನಡೆಸುತ್ತಿದ್ದೇವೆ, ಈ ಕುರಿತು ತಾಲ್ಲೂಕು ಹಾಗೂ ಜಿಲ್ಲಾಡಳಿತದವರಿಗೆ ಮನವರಿಕೆ ಮಾಡಿ ವಸತಿ ಸೌಲಭ್ಯ ಕೊಡಿಸಬೇಕೆಂದು ಶಾಸಕರಿಗೆ ಮನವಿ ಮಾಡಿದರು.
ಈ ಸಮಸ್ಯೆ ನನ್ನ ಗಮನದಲ್ಲಿದೆ, ಈ ಕುರಿತು ಸಂಬಂಧಿತ ಅಧಿಕಾರಿಗಳೊಂದಿಗೆ ಚರ್ಚಿಸುತ್ತೇನೆಂದು ಶಾಸಕ ಹರೀಶ್ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಹನುಮಜ್ಜಿ ಮಾತಂಗಮ್ಮ, ಗ್ರಾಪಂ ಸದಸ್ಯ ತಿಮ್ಮಣ್ಣ ಕಡ್ಲೆಗೊಂದಿ, ಪರಮೇಶ್, ಚೌಡಪ್ಪ ಭಾನುವಳ್ಳಿ, ಹನುಮಂತಪ್ಪ, ಮಲ್ಲಮ್ಮ, ಬಸಮ್ಮ, ನಿರ್ಮಲ, ಹನುಮಕ್ಕ, ಶಹತಾಜ್‍ಬಾನು, ಮಲ್ಕಾಬಿ, ಸೀತಮ್ಮ, ಗಂಗಮ್ಮ ಇದ್ದರು.

 

Share: