ಅಂಗನವಾಡಿ ಕೇಂದ್ರ ಮತ್ತು ಬಾಲಕಿಯರ ವಸತಿ ನಿಲಯಗಳಿಗೆ ದಿಢೀರ್ ಭೇಟಿ ಹಾಸ್ಟೆಲ್ಗಳಲ್ಲಿ ಸ್ವಚ್ಚತೆ ಕಾಪಾಡಿಕೊಳ್ಳಲು ಡಿಎಲ್ಎಸ್ಎ ಕಾರ್ಯದರ್ಶಿ ಮಹಾವೀರ ಮ.ಕರೆಣ್ಣನವರ
ದಾವಣಗೆರೆ.9 ಅಂಗನವಾಡಿ ಕೇಂದ್ರ ಮತ್ತು ವಿದ್ಯಾರ್ಥಿನಿಲಯದಲ್ಲಿ ಕಂಡು ಬಂದ ಕುಂದುಕೊರತೆಗಳ ನಿವಾರಣೆ ಜೊತೆಗೆ ಸ್ವಚ್ಚತೆ ಕಾಪಾಡಿಕೊಳ್ಳಲು ಶೀಘ್ರ ಕ್ರಮ ಜರುಗಿಸುವಂತೆ ಮೇಲಾಧಿಕಾರಿಗಳಿಗೆ ಪತ್ರ ಬರೆಯಲಾಗುತ್ತದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಮ ಕರೆಣ್ಣವರ ಸೂಚಿಸಿದರು.
ಅವರು ಜನವರಿ 8 ರಂದು ನಗರದಲ್ಲಿರುವ ಶಾಮನೂರು ಗ್ರಾಮದ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಜೆ ಹೆಚ್ ಪಟೇಲ್ ಬಡಾವಣೆಯಲ್ಲಿನ ವಿದ್ಯಾರ್ಥಿನಿಯರ ವಸತಿ ನಿಲಯಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಅಡುಗೆ ಕೋಣೆ ಹಾಗೂ ಉಗ್ರಾಣದಲ್ಲಿ ಸ್ವಚ್ಚತೆ ಇಲ್ಲದಿರುವುದನ್ನು ಗಮನಿಸಿದ ನ್ಯಾಯಾಧೀಶರು ಸಂದರ್ಶನ ಪುಸ್ತಕದಲ್ಲಿ ಕುಂದುಕೊರತೆಯನ್ನು ದಾಖಲು ಮಾಡುವ ಮೂಲಕ ಸಮಸ್ಯೆಗಳನ್ನು ಅತಿ ಶೀಘ್ರವಾಗಿ ಬಗೆಹರಿಸಬೇಕೆಂದು ವಾರ್ಡನ್ಗಳಿಗೆ ಖಡಕ್ ಎಚ್ಚರಿಕೆ ನೀಡಿದರು. ಇದೇ ರೀತಿ ಮೇಲಾಧಿಕಾರಿಗಳು ಕೂಡ ಗಮನ ಹರಿಸಿ ಅತಿ ಶೀಘ್ರವಾಗಿ ಕ್ರಮ ಜರುಗಿಸಿ ಈ ಬಗ್ಗೆ ಪಾಲನಾ ವರದಿಯನ್ನು ಕೂಡ ಇಲಾಖಾ ಮುಖ್ಯಸ್ಥರಿಗೆ ಹಾಗೂ ಪ್ರತಿಯನ್ನು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ಕಳುಹಿಸುವಂತೆ ಸೂಚನೆ ನೀಡಿದರು.
