Saturday, 17 Oct 2026
Breaking
ಎಸ್‌ಎಸ್‌ಕೆ ಸಮಾಜದ ದಸರಾ ಆಚರಣೆ ಅತ್ಯಂತ ವಿಶೇಷ ವಾಗಿದ್ದು ಭಕ್ತಿ, ಶ್ರದ್ಧೆ ಇತರಿಗೆ ಮಾರ್ಗದರ್ಶಿ ; ಶಾಸಕ ಹರೀಶ್  ಕನ್ನಡ ಸಾಹಿತ್ಯದಲ್ಲಿ ವೈಚಾರಿಕ, ಸಾಂಸ್ಕೃತಿಕ ಹಾಗೂ ಸಾಮಾಜಿಕ ಮೌಲ್ಯಗಳ ಸಮನ್ವಯವಿದೆ ; ಡಾ. ಎ.ಬಿ. ರಾಮಚಂದ್ರಪ್ಪ ಶಿಕ್ಷಣ ಸಂಸ್ಥೆ, ರಿಯಲ್ ಎಸ್ಟೇಟ್ ವ್ಯವಹಾರವಿಲ್ಲ ; ಸೇವೆ ಮಾಡುವ ಉದ್ದೇಶದಿಂದ ಚುನಾವಣೆಗೆ ಸ್ಪರ್ಧೆ: ಶಶಿ ಹುಲಿಕುಂಟೆ ಮಠ ಹರಿಹರ ಗಣೇಶೋತ್ಸವದ ಇತಿಹಾಸದಲ್ಲಿ ಹೊಸ ಅಧ್ಯಾಯ ; ಐತಿಹಾಸಿಕ ರಾಜಭೀದಿ ಉತ್ಸವಕ್ಕೆ ಹರಿಹರದಲ್ಲಿ ಮುನ್ನುಡಿ ದಾವಣಗೆರೆ ‘ಆರೋಗ್ಯ ಸಂಜೀವಿ’ ಕಾಯ್ದೆಹೊಳ್ಳಿ ; ನಿಜದ ಬಿಸಿಲವೃತ್ತ” ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್‌ನಲ್ಲಿ ಇಂದಿರಾಗಾಂಧಿ ವಸತಿ ಶಾಲೆ ವಿದ್ಯಾರ್ಥಿಗಳ ಸಾಧನೆ ಸಾಲ ಮರುಪಾವತಿಸುವಂತೆ ಗ್ರಾಹಕರಿಗೆ ಮನವಿ
Menu
Davanagere News

ದಾವಣಗೆರೆ ನಗರದಲ್ಲಿನ ವರ್ತುಲ ರಸ್ತೆ ಕಾಮಗಾರಿ ಶೀಘ್ರ ಪೂರ್ಣ, ಸಂಚಾರಿ ದಟ್ಟಣೆ ಸುಧಾರಣೆಗೆ ಕ್ರಮ; ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್

January 9, 2024 3 years ago 1 min read

ದಾವಣಗೆರೆ, ಜ.9  ದಾವಣಗೆರೆ ನಗರದಲ್ಲಿ ನಡೆಯುತ್ತಿರುವ ವರ್ತುಲ ರಸ್ತೆಯ ಕಾಮಗಾರಿಗಳನ್ನು ಪೂರ್ಣಗೊಳಿಸಿ ಸಂಚಾರಕ್ಕೆ ಮುಕ್ತಗೊಳಿಸುವ ಮೂಲಕ ನಗರದಲ್ಲಿನ ವಾಹನ ದಟ್ಟಣೆಯನ್ನು ತಗ್ಗಿಸಲು ಕ್ರಮ ಜರುಗಿಸಬೇಕೆಂದು ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ತಿಳಿಸಿದರು.
ಅವರು ಮಂಗಳವಾರ ದಾವಣಗೆರೆ-ಹರಿಹರ ನಗರಾಭಿವೃದ್ದಿ ಪ್ರಾಧಿಕಾರದ ಸಾಮಾನ್ಯ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಹೆಗಡೆ ನಗರದ ರಿಂಗ್ ರಸ್ತೆಯನ್ನು ಬೇತೂರು ರಸ್ತೆಗೆ ಸಂಪರ್ಕಿಸಲು ಈಗಾಗಲೇ ತೆರವು ಕಾರ್ಯ ಮಾಡಿದ್ದು ಆದಷ್ಟು ಬೇಗ ಕೆಲಸ ಪ್ರಾರಂಭಿಸಿ ಮುಕ್ತಾಯ ಮಾಡಿ ಸಂಚಾರಕ್ಕೆ ಅನುವು ಮಾಡಿಕೊಡಬೇಕು. ನಗರದ ಹೊರ ವಲಯದಲ್ಲಿ ರಿಂಗ್ ರಸ್ತೆಗಳ ನಿರ್ಮಾಣ ಮಾಡುವುದರಿಂದ ನಗರದಲ್ಲಿ ಸಂಚರಿಸುವ ವಾಹನಗಳ ದಟ್ಟಣೆ ಕಡಿಮೆಯಾಗಲಿದ್ದು ಇದರಿಂದ ಮಾಲಿನ್ಯವು ಕಡಿಮೆಯಾಗುತ್ತದೆ ಎಂದರು.
ಹೆಗಡೆ ನಗರದ ಮೂಲಕ ಬೇತೂರು ರಸ್ತೆಯಿಂದ ಅವರಗೆರೆ ಮೂಲಕ ರಾಷ್ಟ್ರೀಯ ಹೆದ್ದಾರಿ ಸಂಪರ್ಕಿಸುವ ವರ್ತುಲ ರಸ್ತೆ ನಿರ್ಮಿಸಲು ಪ್ರಾಧಿಕಾರದಿಂದ ಯೋಜಿಸಿದ್ದು ಇದನ್ನು ತುಂಬಾ ವೈಜ್ಞಾನಿಕವಾಗಿ ಮಾಡಬೇಕು. ಈ ಭಾಗದಲ್ಲಿ ಯಾರಿಗೂ ತೊಂದರೆಯಾಗಂತೆ ಹಳ್ಳದ ಪಕ್ಕದಲ್ಲಿ ಸಿಗುವ ಸ್ಥಳದಲ್ಲಿ ಹಳ್ಳಕ್ಕೆ ಸ್ಥಳ ಬಿಟ್ಟು ರಸ್ತೆ ನಿರ್ಮಾಣ ಮಾಡಲು ಯೋಜನೆ ರೂಪಿಸಬೇಕು, ರೈತರಿಗಾಗಲಿ, ನಿವಾಸಿಗಳಿಗಾಗಲಿ ತೊಂದರೆಯಾಗದಂತೆ ಯೋಜನೆ ತಯಾರಿಸಲು ಸೂಚನೆ ನೀಡಿದರು.
ಪ್ರಾಧಿಕಾರದಿಂದ ಒಟ್ಟು 23 ವಿಷಯಗಳ ಕುರಿತು ಚರ್ಚಿಸಲಾಗಿದ್ದು ಕೆಲವು ಮಾರ್ಪಾಡಿನೊಂದಿಗೆ ಅನುಮೋದನೆಯನ್ನು ಸಭೆಯಲ್ಲಿ ನೀಡಲಾಯಿತು.
ಮಾಯಕೊಂಡ ಶಾಸಕರಾದ ಕೆ.ಎಸ್.ಬಸವಂತಪ್ಪ, ಜಿಲ್ಲಾಧಿಕಾರಿ ಹಾಗೂ ಪ್ರಾಧಿಕಾರದ ಅಧ್ಯಕ್ಷರಾದ ಡಾ; ವೆಂಕಟೇಶ್ ಎಂ.ವಿ, ಹೆಚ್ಚುವರಿ ರಕ್ಷಣಾಧಿಕಾರಿ ವಿಜಯಕುಮಾರ್ ಎಂ.ಸಂತೋಷ್, ಪ್ರಾಧಿಕಾರದ ಆಯುಕ್ತರಾದ ಬಸವನಗೌಡ ಕೋಟೂರು, ಪಾಲಿಕೆ ಆಯುಕ್ತರಾದ ರೇಣುಕಾ ಉಪಸ್ಥಿತರಿದ್ದರು.

Share: