ಜಿಲ್ಲಾ ಮಟ್ಟದ ಕ್ರಿಕೆಟ್ನಲ್ಲಿ ದಾವಣಗೆರೆ ಗುರುಕುಲ ಶಾಲೆಗೆ ಪ್ರಥಮ ಸ್ಥಾನ
ದಾವಣಗೆರೆ True Media Kannada: ನಗರದ ಗುರುಕುಲ ವಸತಿಯುತ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ಲೆದರ್ ಬಾಲ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭರ್ಜರಿ ಪ್ರದರ್ಶನ ನೀಡಿ ಗಮನಾರ್ಹ ಸಾಧನೆ ಮಾಡಿದ್ದಾರೆ.
ಇತ್ತೀಚೆಗೆ ನಡೆದ ಜಿಲ್ಲಾ ಕ್ರೀಡಾಂಗಣದಲ್ಲಿ ದಾವಣಗೆರೆ ದಕ್ಷಿಣ ವಲಯ ಮಟ್ಟದ ಲೆದರ್ ಬಾಲ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸಿದ್ಧಗಂಗಾ, ಸರ್ವಜ್ಞ, ಜೈನ್ ಸ್ಕೂಲ್, ಕೇಸರಿ ವಿದ್ಯಾಲಯ, ನ್ಯೂ ಸೆಂಟ್ ಪೀಟರ್ ಸೇರಿದಂತೆ ವಿವಿಧ ಶಾಲೆಗಳ 14 ವರ್ಷದೊಳಗಿನ (U-14) ಹಾಗೂ 17 ವರ್ಷದೊಳಗಿನ (U-17) ವಯೋಮಿತಿ ವಿಭಾಗಗಳಲ್ಲಿ ಪಂದ್ಯಗಳು ನಡೆದವು. ಈ ಪಂದ್ಯಾವಳಿಯಲ್ಲಿ ಗುರುಕುಲ ವಸತಿಯುತ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ತದನಂತರ ನಡೆದ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿಯೂ ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಮೆರೆದಿದ್ದಾರೆ.ಅಂಡರ್-14 ವಿಭಾಗ: ಪ್ರಥಮ ಸ್ಥಾನ ಗಳಿಸಿ ವಿಭಾಗ ಮಟ್ಟದ ಪಂದ್ಯಾವಳಿಗೆ ದಾವಣಗೆರೆ ಜಿಲ್ಲೆಯ ಅಧಿಕೃತ ಪ್ರತಿನಿಧಿಯಾಗಿ ಆಯ್ಕೆಯಾಗಿದೆ.
ಅಂಡರ್-17 ವಿಭಾಗ: ಅತ್ಯುತ್ತಮ ಪ್ರದರ್ಶನ ನೀಡಿ ದ್ವಿತೀಯ ಸ್ಥಾನವನ್ನು ತನ್ನದಾಗಿಸಿಕೊಂಡಿದೆ.
ವಿದ್ಯಾರ್ಥಿಗಳ ನಿರಂತರ ಪರಿಶ್ರಮ, ಕಠಿಣ ಶಿಸ್ತು, ತಂಡದ ಒಗ್ಗಟ್ಟು ಹಾಗೂ ತರಬೇತುದಾರರು ಮತ್ತು ಶಿಕ್ಷಕರ ಸೂಕ್ತ ಮಾರ್ಗದರ್ಶನವೇ
ಈ ಯಶಸ್ಸಿಗೆ ಕಾರಣ ಎಂದು ಶಾಲೆಯ ವತಿಯಿಂದ ತಿಳಿಸಲಾಗಿದೆ.
ಸಾಧಕ ವಿದ್ಯಾರ್ಥಿಗಳನ್ನು ಶಾಲಾ ಶಿಕ್ಷಣ ಇಲಾಖೆಯ (ಆಡಳಿತ) ಉಪನಿರ್ದೇಶಕರಾದ ಬಿ.ಎಚ್. ಕೃಷ್ಣಪ್ರಸಾದ್ ಅವರು ನೇರವಾಗಿ ಅಭಿನಂದಿಸಿ,
ವಿಭಾಗ ಮಟ್ಟದಲ್ಲಿಯೂ ಉತ್ತಮ ಪ್ರದರ್ಶನ ನೀಡಿ ಜಿಲ್ಲೆಯ ಕೀರ್ತಿಯನ್ನು ಹೆಚ್ಚಿಸುವಂತೆ ಶುಭ ಹಾರೈಸಿದರು.
ದೈಹಿಕ ಶಿಕ್ಷಣ ಪರಿವೀಕ್ಷಕರಾದ ಸರಸ್ವತಿ, ಜಿಲ್ಲಾ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಶ್ರೀನಿವಾಸ್,
ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕರಾದ ವರ್ಣ್ಯ ಕುಮಾರ್ ಹಾಗೂ ಸಂಘದ ವಿವಿಧ ಪದಾಧಿಕಾರಿಗಳು ವಿಜೇತ ಕ್ರೀಡಾಪಟುಗಳಿಗೆ ಶುಭಾಶಯಗಳನ್ನು ಸಲ್ಲಿಸಿದರು.
ಗುರುಕುಲ ವಸತಿಯುತ ಶಾಲೆಯ ಮುಖ್ಯಸ್ಥರಾದ ಅಬ್ದುಲ್ ಅವರು ವಿದ್ಯಾರ್ಥಿಗಳು ಹಾಗೂ ಕ್ರೀಡಾ ತರಬೇತುದಾರರನ್ನು ಗೌರವಿಸಿ,
ಮುಂಬರುವ ವಿಭಾಗ ಮಟ್ಟದ ಪಂದ್ಯಾವಳಿಯಲ್ಲಿಯೂ ಅತ್ಯುತ್ತಮ ಪ್ರದರ್ಶನ ನೀಡಿ ರಾಜ್ಯ ಹಾಗೂ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಲಿ ಎಂದು ಆಶಿಸಿದರು.
