ಬೀದಿ ಬದಿ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಿ ತೆರವು ಮಾಡುವಂತೆ ಮನವಿ
ಹರಿಹರ True Media Kannada ಬೀದಿ ಬದಿ ವ್ಯಾಪಾರಿಗಳನ್ನು ತೆರವುಗೊಳಿಸುವ ಮುನ್ನ ಅವರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಹರಿಹರ ತಾಲೂಕು ಘಟಕದ ವತಿಯಿಂದ ದಾವಣಗೆರೆ ಜಿಲ್ಲಾ ಉಸ್ತುವಾರಿ ಹಾಗೂ ಗಣಿ ಮತ್ತು ಭೂ ವಿಜ್ಞಾನ ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ್ ಅವರಿಗೆ ಮನವಿ ಸಲ್ಲಿಸಲಾಯಿತು.
ಹರಿಹರ ನಗರದಲ್ಲಿ ಇತ್ತೀಚೆಗೆ ಬೀದಿ ಬದಿ ವ್ಯಾಪಾರಿಗಳ ತೆರವು ಕಾರ್ಯಾಚರಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ, ಹಲವು ವರ್ಷಗಳಿಂದ ವ್ಯಾಪಾರ ನಡೆಸಿಕೊಂಡು ಜೀವನ ಸಾಗಿಸುತ್ತಿರುವ ಸಣ್ಣ ವ್ಯಾಪಾರಿಗಳಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ವ್ಯಾಪಾರಿಗಳನ್ನು ಏಕಾಏಕಿ ತೆರವುಗೊಳಿಸುವ ಬದಲು, ಅವರಿಗೆ ಸೂಕ್ತ ಪರ್ಯಾಯ ಸ್ಥಳವನ್ನು ಗುರುತಿಸಿ ಅಗತ್ಯ ಮೂಲಸೌಕರ್ಯ ಕಲ್ಪಿಸಿದ ಬಳಿಕ ತೆರವು ಕಾರ್ಯಾಚರಣೆ ನಡೆಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಮುಖಂಡರು ಸಚಿವರಲ್ಲಿ ಮನವಿ ಮಾಡಿದ್ದಾರೆ.
ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಹರಿಹರ ತಾಲೂಕು ಅಧ್ಯಕ್ಷ ರಮೇಶ್ ಮಾನೆ, ನಗರ ಅಧ್ಯಕ್ಷ ಪ್ರೀತಮ್ ಬಾಬು ಸೇರಿದಂತೆ ಇತರ ಮುಖಂಡರು ಉಪಸ್ಥಿತರಿದ್ದರು.
