Friday, 16 Oct 2026
Breaking
ಕನ್ನಡ ಸಾಹಿತ್ಯದಲ್ಲಿ ವೈಚಾರಿಕ, ಸಾಂಸ್ಕೃತಿಕ ಹಾಗೂ ಸಾಮಾಜಿಕ ಮೌಲ್ಯಗಳ ಸಮನ್ವಯವಿದೆ ; ಡಾ. ಎ.ಬಿ. ರಾಮಚಂದ್ರಪ್ಪ ಶಿಕ್ಷಣ ಸಂಸ್ಥೆ, ರಿಯಲ್ ಎಸ್ಟೇಟ್ ವ್ಯವಹಾರವಿಲ್ಲ ; ಸೇವೆ ಮಾಡುವ ಉದ್ದೇಶದಿಂದ ಚುನಾವಣೆಗೆ ಸ್ಪರ್ಧೆ: ಶಶಿ ಹುಲಿಕುಂಟೆ ಮಠ ಹರಿಹರ ಗಣೇಶೋತ್ಸವದ ಇತಿಹಾಸದಲ್ಲಿ ಹೊಸ ಅಧ್ಯಾಯ ; ಐತಿಹಾಸಿಕ ರಾಜಭೀದಿ ಉತ್ಸವಕ್ಕೆ ಹರಿಹರದಲ್ಲಿ ಮುನ್ನುಡಿ ದಾವಣಗೆರೆ ‘ಆರೋಗ್ಯ ಸಂಜೀವಿ’ ಕಾಯ್ದೆಹೊಳ್ಳಿ ; ನಿಜದ ಬಿಸಿಲವೃತ್ತ” ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್‌ನಲ್ಲಿ ಇಂದಿರಾಗಾಂಧಿ ವಸತಿ ಶಾಲೆ ವಿದ್ಯಾರ್ಥಿಗಳ ಸಾಧನೆ ಸಾಲ ಮರುಪಾವತಿಸುವಂತೆ ಗ್ರಾಹಕರಿಗೆ ಮನವಿ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ತಂಬಾಕು ಮಾರಾಟ: ದಾಳಿ,ದಂಡ ವಿಧಿಸಿದ ಅಧಿಕಾರಿಗಳು
Menu
Davanagere News

ಗಣೇಶೋತ್ಸವ ಮೆರವಣಿಗೆಯಲ್ಲಿ ಡಿ.ಜೆ. ಸಿಸ್ಟಂ ಬಳಕೆಗೆ ಕಟ್ಟುನಿಟ್ಟಿನ ನಿಯಮ ; ಜಿಲ್ಲಾಧಿಕಾರಿ ಆದೇಶ

September 10, 2026 1 month ago 1 min read

ದಾವಣಗೆರೆ True Media Kannada: ದಾವಣಗೆರೆ ಜಿಲ್ಲೆಯಾದ್ಯಂತ ಸೆಪ್ಟೆಂಬರ್ 14, 2026ರಿಂದ ಆರಂಭವಾಗಲಿರುವ ಗಣೇಶೋತ್ಸವ ಆಚರಣೆ ಹಾಗೂ ಮೂರ್ತಿ ವಿಸರ್ಜನಾ ಮೆರವಣಿಗೆಗಳ ಸಂದರ್ಭದಲ್ಲಿ ಸಾರ್ವಜನಿಕ ಶಾಂತಿ, ಕಾನೂನು ಸುವ್ಯವಸ್ಥೆ ಹಾಗೂ ಸೌಹಾರ್ದತೆ ಕಾಪಾಡುವ ಉದ್ದೇಶದಿಂದ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ. (ಐಎಎಸ್) ಅವರು ಡಿ.ಜೆ. ಹಾಗೂ ಶಬ್ದ ಮಾಲಿನ್ಯ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಕಟ್ಟುನಿಟ್ಟಿನ ಷರತ್ತುಗಳನ್ನು ವಿಧಿಸಿ ಆದೇಶ ಹೊರಡಿಸಿದ್ದಾರೆ.

ಪ್ರಮುಖ ನಿಯಮಗಳು ಹಾಗೂ ಷರತ್ತುಗಳು:

ಶಬ್ದ ಮಾಲಿನ್ಯ ನಿಯಂತ್ರಣ:
Noise Pollution (Regulation and Control) Rules, 2000ರ ನಿಯಮಾವಳಿಗಳಲ್ಲಿ ನಿಗದಿಪಡಿಸಿರುವ ಮಾನದಂಡಗಳಿಗೆ ಅನುಗುಣವಾಗಿ ಡಿ.ಜೆ. ಹಾಗೂ ಧ್ವನಿವರ್ಧಕಗಳನ್ನು ಬಳಸಬೇಕು. ಪೊಲೀಸ್ ಇಲಾಖೆಯ ಪರಿಶೀಲನೆಯ ನಂತರವೇ ಡಿ.ಜೆ. ಬಳಕೆಗೆ ಅನುಮತಿ ನೀಡಲಾಗುತ್ತದೆ.

ಹೊರ ಜಿಲ್ಲೆಗಳ ಡಿ.ಜೆ.ಗಳಿಗೆ ನಿಷೇಧ:
ಗಣೇಶೋತ್ಸವದ ಸಂದರ್ಭದಲ್ಲಿ ಇತರೆ ಜಿಲ್ಲೆಗಳಿಂದ ಡಿ.ಜೆ. ಸಿಸ್ಟಂಗಳನ್ನು ದಾವಣಗೆರೆ ಜಿಲ್ಲೆಗೆ ತಂದು ಬಳಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಸೌಂಡ್ ಸಿಸ್ಟಂ ಬಳಕೆಗೆ ನಿಯಮ:
ವೂಫರ್‌ಗಳು (Woofers) ಮತ್ತು ಸಬ್‌ವೂಫರ್‌ಗಳನ್ನು (Sub-woofers) ಬಳಸಲು ಅವಕಾಶವಿದ್ದು, ನಿಗದಿತ ಶಬ್ದಮಟ್ಟದ ಮಿತಿಯನ್ನು ಕಡ್ಡಾಯವಾಗಿ ಪಾಲಿಸಬೇಕು.

ಅತಿಯಾದ ಶಬ್ದ ಹೊರಸೂಸುವ ಸಾಧನಗಳಿಗೆ ತಡೆ:
ಡಿ.ಜೆ.ಗಳಲ್ಲಿ ಬಳಸಲಾಗುವ ಅತಿಯಾದ ಶಬ್ದವನ್ನು ಉಂಟುಮಾಡುವ ‘Pressure Measurement’ ಸೇರಿದಂತೆ ಇತರೆ ವಿಶೇಷ ಉಪಕರಣಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಉಲ್ಲಂಘಿಸಿದರೆ ಕಾನೂನು ಕ್ರಮ:
ಜಿಲ್ಲಾಡಳಿತ ನಿಗದಿಪಡಿಸಿರುವ ಮಾನದಂಡಗಳು ಹಾಗೂ ಷರತ್ತುಗಳನ್ನು ಡಿ.ಜೆ. ಬಳಕೆದಾರರು ಅಥವಾ ಆಯೋಜಕರು ಪಾಲಿಸದಿದ್ದಲ್ಲಿ, ಅನುಮತಿ ನೀಡುವ ಪ್ರಾಧಿಕಾರವಾಗಿರುವ ಪೊಲೀಸ್ ಇಲಾಖೆಯು ನಿಯಮಾನುಸಾರ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಿದೆ.

ವಿದ್ಯಾರ್ಥಿಗಳು, ಹಿರಿಯ ನಾಗರಿಕರು, ರೋಗಿಗಳು ಹಾಗೂ ನವಜಾತ ಶಿಶುಗಳಿಗೆ ಶಬ್ದ ಮಾಲಿನ್ಯದಿಂದ ತೊಂದರೆಯಾಗದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಈ ನಿಯಮಗಳನ್ನು ಜಾರಿಗೊಳಿಸಲಾಗಿದೆ.

Share: