ಅಪರಾಧ
ಟ್ರಾಫಿಕ್ ರೂಲ್ಸ್ಗೆ ಖಡಕ್… ಜೂಜಾಟಕ್ಕೆ ಮೌನವೇ?
ಮಾನ್ಯ ಸಬ್ ಇನ್ಸ್ಪೆಕ್ಟರ್ ಸಾಹೇಬರೆ ಟ್ರಾಫಿಕ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸಾರ್ವಜನಿಕರಿಗೆ ಸೂಚಿಸುವ ನೀವು, ನಿಮ್ಮ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆಯುತ್ತಿದೆ ಎನ್ನಲಾಗುತ್ತಿರುವ ಜೂಜಾಟದ ಬಗ್ಗೆ ಯಾಕೆ ನಿರ್ಲಕ್ಷ್ಯ ವಹಿಸುತ್ತಿದ್ದೀರಿ?
ನೀವು ವರ್ಗಾವಣೆಯಾಗಿ ಬಂದು ಕೆಲವೇ ದಿನಗಳಲ್ಲಿ, ನಿಮ್ಮ ವ್ಯಾಪ್ತಿಯಲ್ಲಿ ರಾಜಾರೋಷವಾಗಿ ಜೂಜಾಟ ನಡೆಯುತ್ತಿದೆ ಎಂಬ ಆರೋಪಗಳು ಕೇಳಿಬರುತ್ತಿರುವುದು ಸಾರ್ವಜನಿಕರಲ್ಲಿ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.
ಕಾನೂನು ಪಾಲನೆಗೆ ಒತ್ತು ನೀಡುವ ಪೊಲೀಸ್ ಇಲಾಖೆ, ಜೂಜಾಟದಂತಹ ಅಕ್ರಮ ಚಟುವಟಿಕೆಗಳ ವಿರುದ್ಧವೂ ಸಮಾನವಾಗಿ ಕ್ರಮ ಕೈಗೊಳ್ಳಬೇಕಲ್ಲವೇ?
ಇದು ನಿಜವಾಗಿಯೂ ನಿಮ್ಮ ಗಮನಕ್ಕೆ ಬಂದಿಲ್ಲವೇ?
ಅಥವಾ ಗಮನಕ್ಕೆ ಬಂದಿದ್ದರೂ ಕ್ರಮ ಕೈಗೊಳ್ಳದಿರುವುದಕ್ಕೆ ಕಾರಣವೇನು?
ನಿಮ್ಮ ವ್ಯಾಪ್ತಿಯ ಇತಿಹಾಸದಲ್ಲೇ ಇಂತಹ ಪರಿಸ್ಥಿತಿ ಇದೇ ಮೊದಲ ಬಾರಿಯೇ ಎಂಬ ಪ್ರಶ್ನೆಯೂ ಸಾರ್ವಜನಿಕರಲ್ಲಿ ಮೂಡಿದೆ.
ಸಾರ್ವಜನಿಕರ ಪ್ರಶ್ನೆಗಳಿಗೆ ಪೊಲೀಸ್ ಇಲಾಖೆ ಸ್ಪಷ್ಟ ಉತ್ತರ ನೀಡಬೇಕಿದೆ.
