Harihara
ಅಪಘಾತದಲ್ಲಿ ಕಾನೂನು ವಿದ್ಯಾರ್ಥಿ ಸಾವು
ದಾವಣಗೆರೆ True Media Kannada : ನಗರದ ಆರ್.ಎಲ್. ಕಾನೂನು ಕಾಲೇಜಿನಲ್ಲಿ ಅಂತಿಮ ವರ್ಷದ ವ್ಯಾಸಂಗ ಮಾಡುತ್ತಿದ್ದ ಸಿ.ಎಚ್. ರಾಕೇಶ್ (22) ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ಸೆಪ್ಟೆಂಬರ್ 4ರಂದು ಬೆಂಗಳೂರಿನಿಂದ ಬೈಕ್ನಲ್ಲಿ ಬರುತ್ತಿದ್ದ ವೇಳೆ ಸಂಭವಿಸಿದ ಅಪಘಾತದಲ್ಲಿ ರಾಕೇಶ್ ಅವರ ತಲೆಗೆ ಗಂಭೀರ ಗಾಯವಾಗಿತ್ತು. ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಶುಕ್ರವಾರ ಸಂಜೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ರಾಕೇಶ್ ಅವರು ನಗರಸಭೆ ಮಾಜಿ ಅಧ್ಯಕ್ಷೆ ರಾಧಾ ಸಿ.ಎನ್. ಹುಲಗೇಶ್ ಮತ್ತು ಹಾಲುಮತ ಮಹಾಸಭಾದ ತಾಲೂಕು ಘಟಕದ ಅಧ್ಯಕ್ಷ ಸಿ.ಎನ್. ಹುಲಗೇಶ್ ದಂಪತಿ ಪುತ್ರ.
ಶನಿವಾರ ಮಧ್ಯಾಹ್ನ 2 ಗಂಟೆಗೆ ನಗರದ ಹಿಂದೂ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.
