ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ತಂಬಾಕು ಮಾರಾಟ: ದಾಳಿ,ದಂಡ ವಿಧಿಸಿದ ಅಧಿಕಾರಿಗಳು
ದಾವಣಗೆರೆ. ಸೆ 25 True Media Kannada: ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಯಂತ್ರಣ ಹಾಗೂ ಅಪ್ರಾಪ್ತರಿಗೆ ತಂಬಾಕು ಉತ್ಪನ್ನಗಳ ಮಾರಾಟ ತಡೆಯುವ ಉದ್ದೇಶದಿಂದ ಅಧಿಕಾರಿಗಳ ತಂಡ ದಿಢೀರ್ ದಾಳಿ ನಡೆಸಿದೆ. ಈ ಕಾರ್ಯಚರಣೆಯಲ್ಲಿ COTPA – 2003 ಕಾಯ್ದೆಯ ಸೆಕ್ಷನ್ -4 ರ ಪ್ರಕಾರ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇದ ಅಡಿಯಲ್ಲಿ ಒಟ್ಟು 10ಪ್ರಕರಣಗಳನ್ನು ದಾಖಲಿಸಿಕೊಂಡು, ನಿಯಮ ಉಲ್ಲಂಘಿಸಿದವರಿಂದ ₹2,000 ದಂಡ ವಸೂಲಿ ಮಾಡಲಾಗಿದೆ. ಹಾಗೂ ಸೆಕ್ಷನ್ – 6A ರ ಅಡಿಯಲ್ಲಿ 21 ವರ್ಷದೊಳಗಿನ ಮಕ್ಕಳಿಗೆ ತಂಬಾಕು ಉತ್ಪನ್ನಗಳ ಮಾರಾಟ ನಿಷೇಧದ ಕಾಯ್ದೆಯಡಿ 8 ಪ್ರಕರಣಗಳನ್ನು ದಾಖಲಿಸಿಕೊಂಡು , 1,000 ರೂ ದಂಡ ವಿಧಿಸಲಾಯಿತು. ಒಟ್ಟು 18 ಪ್ರಕರಣಗಳನ್ನು ದಾಖಲಿಸಿ 3000 ರೂ, ದಂಡ ವಿಧಿಸಿದ್ದಾರೆ.
ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದವರು, ಜಿಲ್ಲಾ ಸಲಹೆಗಾರರಾದ ಸತೀಶ್ ಕಲಹಾಳ, ಜಿಲ್ಲಾ ಸಾಂಕ್ರಾಮಿಕ ರೋಗ ತಜ್ಞರಾದ ಮನೋಜ್ ಕುಮಾರ್, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಮಹಾಂತೇಶ್ ಎ, ಶಿಕ್ಷಣ ಇಲಾಖೆಯ ಸಿ.ಆರ್.ಪಿ ಜಗದೀಶ್ ಹಾಗೂ ನಲ್ಲೂರು ಪೊಲೀಸ್ ಉಪ ಠಾಣೆಯ ಮುಖ್ಯಪೇದೆ ಸತೀಶ್ ಕುಮಾರ್ ಅವರು ಉಪಸ್ಥಿತರಿದ್ದರು.
