Friday, 16 Oct 2026
Breaking
ಕನ್ನಡ ಸಾಹಿತ್ಯದಲ್ಲಿ ವೈಚಾರಿಕ, ಸಾಂಸ್ಕೃತಿಕ ಹಾಗೂ ಸಾಮಾಜಿಕ ಮೌಲ್ಯಗಳ ಸಮನ್ವಯವಿದೆ ; ಡಾ. ಎ.ಬಿ. ರಾಮಚಂದ್ರಪ್ಪ ಶಿಕ್ಷಣ ಸಂಸ್ಥೆ, ರಿಯಲ್ ಎಸ್ಟೇಟ್ ವ್ಯವಹಾರವಿಲ್ಲ ; ಸೇವೆ ಮಾಡುವ ಉದ್ದೇಶದಿಂದ ಚುನಾವಣೆಗೆ ಸ್ಪರ್ಧೆ: ಶಶಿ ಹುಲಿಕುಂಟೆ ಮಠ ಹರಿಹರ ಗಣೇಶೋತ್ಸವದ ಇತಿಹಾಸದಲ್ಲಿ ಹೊಸ ಅಧ್ಯಾಯ ; ಐತಿಹಾಸಿಕ ರಾಜಭೀದಿ ಉತ್ಸವಕ್ಕೆ ಹರಿಹರದಲ್ಲಿ ಮುನ್ನುಡಿ ದಾವಣಗೆರೆ ‘ಆರೋಗ್ಯ ಸಂಜೀವಿ’ ಕಾಯ್ದೆಹೊಳ್ಳಿ ; ನಿಜದ ಬಿಸಿಲವೃತ್ತ” ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್‌ನಲ್ಲಿ ಇಂದಿರಾಗಾಂಧಿ ವಸತಿ ಶಾಲೆ ವಿದ್ಯಾರ್ಥಿಗಳ ಸಾಧನೆ ಸಾಲ ಮರುಪಾವತಿಸುವಂತೆ ಗ್ರಾಹಕರಿಗೆ ಮನವಿ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ತಂಬಾಕು ಮಾರಾಟ: ದಾಳಿ,ದಂಡ ವಿಧಿಸಿದ ಅಧಿಕಾರಿಗಳು
Menu
Davanagere News

ದಾವಣಗೆರೆ ‘ಆರೋಗ್ಯ ಸಂಜೀವಿ’ ಕಾಯ್ದೆಹೊಳ್ಳಿ ; ನಿಜದ ಬಿಸಿಲವೃತ್ತ”

September 28, 2026 3 weeks ago 1 min read

ದಾವಣಗೆರೆ True Media Kannada: ಹಣ, ಆಸ್ತಿ, ಅಂತಸ್ತು ಗಳಿಸುವುದಕ್ಕಿಂತ ಆರೋಗ್ಯ ಎಂಬ ಸಂಪತ್ತನ್ನು ಕಾಪಾಡಿಕೊಳ್ಳುವುದು ಪ್ರತಿಯೊಬ್ಬರ ಆದ್ಯತೆಯಾಗಬೇಕು. ಬಿಡುವಿಲ್ಲದ ಜೀವನಶೈಲಿಯಿಂದ ಆರೋಗ್ಯ ಸಮಸ್ಯೆಗಳು ಹೆಚ್ಚಾಗುತ್ತಿವೆ. ನಿಯಮಿತ ವ್ಯಾಯಾಮ ಹಾಗೂ ಆರೋಗ್ಯಕರ ಜೀವನ ಕ್ರಮವನ್ನು ರೂಢಿಸಿಕೊಳ್ಳಬೇಕು ಎಂದು ಸಜೀವ ಕೆ.ಎಸ್. ಬಸವರಾಜ್ ಹೇಳಿದರು.

ದೈಹಿಕ ಚಟುವಟಿಕೆ ಕಡಿಮೆಯಾಗುತ್ತಿದೆ, ವ್ಯಾಯಾಮ ಮಾಡದಿರುವುದರಿಂದ ವಿವಿಧ ಆರೋಗ್ಯ ಸಮಸ್ಯೆಗಳು ಎದುರಾಗುತ್ತಿವೆ. ಹೀಗಾಗಿ ಆರೋಗ್ಯದ ಬಗ್ಗೆ ಪ್ರತಿಯೊಬ್ಬರೂ ಕಾಳಜಿ ವಹಿಸಬೇಕು. ಈ ನಿಟ್ಟಿನಲ್ಲಿ ಸಿಟಿ ಸೆಂಟ್ರಲ್ ಆಸ್ಪತ್ರೆ ವತಿಯಿಂದ ಆರೋಗ್ಯ ಜಾಗೃತಿ ಅಭಿಯಾನ ಆಯೋಜಿಸಿರುವುದು ಸಮಯೋಚಿತವಾಗಿದೆ” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಆರೋಗ್ಯ ಜಾಗೃತಿ ಅಭಿಯಾನದ ನಡಿಗೆಗೆ ಸಚಿವ ಕೆ.ಎಸ್. ಬಸವರಾಜ್, ‘ಧೂಡಾ’ ಅಧ್ಯಕ್ಷ ದಿನೇಶ್ ಶೆಟ್ಟಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್.ಕೆ. ಶೇಖರ್ ಹಾಗೂ ಆಸ್ಪತ್ರೆಯ ಮುಖ್ಯಸ್ಥ ಡಾ. ಸುಬ್ಬಾರಾವ್ ಚಾಲನೆ ನೀಡಿದರು.

ಸಿಟಿ ಸೆಂಟ್ರಲ್ ಆಸ್ಪತ್ರೆಯಿಂದ ಆರಂಭವಾದ ನಡಿಗೆಯು ಅಂಬೇಡ್ಕರ್ ವೃತ್ತ, ಜಯದೇವ ವೃತ್ತ ಸೇರಿದಂತೆ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿತು. ವಿದ್ಯಾರ್ಥಿಗಳು, ಸಾರ್ವಜನಿಕರು, ವೈದ್ಯಕೀಯ ಸಿಬ್ಬಂದಿ ಹಾಗೂ ಅಧಿಕಾರಿಗಳು ಭಾಗವಹಿಸಿದ್ದರು.

Share: