Friday, 16 Oct 2026
Breaking
ಕನ್ನಡ ಸಾಹಿತ್ಯದಲ್ಲಿ ವೈಚಾರಿಕ, ಸಾಂಸ್ಕೃತಿಕ ಹಾಗೂ ಸಾಮಾಜಿಕ ಮೌಲ್ಯಗಳ ಸಮನ್ವಯವಿದೆ ; ಡಾ. ಎ.ಬಿ. ರಾಮಚಂದ್ರಪ್ಪ ಶಿಕ್ಷಣ ಸಂಸ್ಥೆ, ರಿಯಲ್ ಎಸ್ಟೇಟ್ ವ್ಯವಹಾರವಿಲ್ಲ ; ಸೇವೆ ಮಾಡುವ ಉದ್ದೇಶದಿಂದ ಚುನಾವಣೆಗೆ ಸ್ಪರ್ಧೆ: ಶಶಿ ಹುಲಿಕುಂಟೆ ಮಠ ಹರಿಹರ ಗಣೇಶೋತ್ಸವದ ಇತಿಹಾಸದಲ್ಲಿ ಹೊಸ ಅಧ್ಯಾಯ ; ಐತಿಹಾಸಿಕ ರಾಜಭೀದಿ ಉತ್ಸವಕ್ಕೆ ಹರಿಹರದಲ್ಲಿ ಮುನ್ನುಡಿ ದಾವಣಗೆರೆ ‘ಆರೋಗ್ಯ ಸಂಜೀವಿ’ ಕಾಯ್ದೆಹೊಳ್ಳಿ ; ನಿಜದ ಬಿಸಿಲವೃತ್ತ” ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್‌ನಲ್ಲಿ ಇಂದಿರಾಗಾಂಧಿ ವಸತಿ ಶಾಲೆ ವಿದ್ಯಾರ್ಥಿಗಳ ಸಾಧನೆ ಸಾಲ ಮರುಪಾವತಿಸುವಂತೆ ಗ್ರಾಹಕರಿಗೆ ಮನವಿ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ತಂಬಾಕು ಮಾರಾಟ: ದಾಳಿ,ದಂಡ ವಿಧಿಸಿದ ಅಧಿಕಾರಿಗಳು
Menu
Harihar News

ಐತಿಹಾಸಿಕ ರಾಜಭೀದಿ ಉತ್ಸವಕ್ಕೆ ಹರಿಹರದಲ್ಲಿ ಮುನ್ನುಡಿ

October 3, 2026 2 weeks ago 1 min read
ಒಂದೇ ದಿನ ಹಿಂದೂ ಮಹಾಗಣಪತಿ–ಸಾರ್ವಜನಿಕ ಗಣಪತಿ ವಿಸರ್ಜನೆ; ಸಹಸ್ರಾರು ಭಕ್ತರ ಮಹಾಸಂಗಮಕ್ಕೆ ಸಜ್ಜು
ಹರಿಹರ True Media Kannada : ಸೌಹಾರ್ದತೆ, ಭಕ್ತಿ ಹಾಗೂ ಸಾಮರಸ್ಯದ ಸಂದೇಶ ಸಾರುವ ಐತಿಹಾಸಿಕ ರಾಜಭೀದಿ ಉತ್ಸವಕ್ಕೆ ಹರಿಹರದಲ್ಲಿ ಮುನ್ನುಡಿ ಬರೆಯಲಾಗಿದ್ದು, ಹಿಂದೂ ಮಹಾಗಣಪತಿ ಹಾಗೂ ಸಾರ್ವಜನಿಕ ವಿನಾಯಕ ಮಹೋತ್ಸವ ಸಮಿತಿಗಳ ಗಣಪತಿಗಳ ವಿಸರ್ಜನೆಯನ್ನು ಇದೇ ಭಾನುವಾರ  ಅದ್ದೂರಿ ಯಾಗಿ ನಡೆಸಲು ನಿರ್ಧರಿಸಲಾಗಿದೆ ಎಂದು ಹಿಂದೂ ಮಹಾಗಣಪತಿ ಸಮಿತಿ ಅಧ್ಯಕ್ಷ ಸುರೇಶ್ ಪೈ ಚಂದಾಪುರ ತಿಳಿಸಿದರು.
ನಗರದ ಶ್ರೀ ಆಂಜನೇಯ ದೇವಸ್ಥಾನದ ಮುಂಭಾಗದಲ್ಲಿ ನಿರ್ಮಿಸಲಾಗಿರುವ ಹಿಂದೂ ಮಹಾಗಣಪತಿಯ ಭವ್ಯ ಮಂಟಪದಲ್ಲಿ ಆಯೋಜಿಸಿದ್ದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು , ಹಿರಿಯರ ಮಾರ್ಗದರ್ಶನದಲ್ಲಿ ಎರಡೂ ಗಣಪತಿಗಳ ವಿಸರ್ಜನಾ ಕಾರ್ಯಕ್ರಮವನ್ನು ಒಂದೇ ಭಾವನೆಯೊಂದಿಗೆ ನಡೆಸಲು ಮುಂದಾಗಿರುವುದು ಸಂತಸದ ಸಂಗತಿಯಾಗಿದೆ.
“ನಾವೆಲ್ಲರೂ ಒಂದೇ” ಎಂಬ ಭಾವನೆಯೊಂದಿಗೆ ಭಾನುವಾರ ನಡೆಯಲಿರುವ ಗಣಪತಿ ವಿಸರ್ಜನಾ ಮಹಾಸಂಗಮವನ್ನು ಸೌಹಾರ್ದತೆ ಹಾಗೂ ಭಕ್ತಿಯ ಸಂಕೇತವಾಗಿ ಅತ್ಯಂತ ಅದ್ದೂರಿ ಯಾಗಿ ಆಚರಿಸಲಾಗುವುದು. ಹರಿಹರದ ಇತಿಹಾಸದಲ್ಲಿ ಈ ಕಾರ್ಯಕ್ರಮ ಹೊಸ ಅಧ್ಯಾಯ ಬರೆಯಲಿದೆ ಎಂದು ಅವರು ಹೇಳಿದರು.
ಸಾರ್ವಜನಿಕ ವಿನಾಯಕ ಮಹೋತ್ಸವ ಸಮಿತಿ ಅಧ್ಯಕ್ಷ ಆರ್. ವಿಜಯಕುಮಾರ್ ಮಾತನಾಡಿ, ಶಾಸಕ ಬಿ.ಪಿ. ಹರೀಶ್ ಹಾಗೂ ವಿನಾಯಕ ಸಂಘದ ಗೌರವಾಧ್ಯಕ್ಷ ಎನ್.ಎಚ್. ಶ್ರೀನಿವಾಸ್ ನಂದಿಗಾವಿ ಅವರ ಮಾರ್ಗದರ್ಶನದಲ್ಲಿ ಹರಿಹರ ನಗರಕ್ಕೆ ಹೆಸರು ತರುವಂತಹ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ ಎಂದರು.
ಕಳೆದ ಹಲವು ವರ್ಷಗಳಿಂದ ಬೇರೆ ಬೇರೆ ದಿನಗಳಂದು ನಡೆಸಲಾಗುತ್ತಿದ್ದ ವಿಸರ್ಜನೆ ಕಾರ್ಯವು ಈ ಬಾರಿ ಸಾರ್ವಜನಿಕ ವಿನಾಯಕ ಮಹೋತ್ಸವ ಸಮಿತಿ ಗಣಪತಿ ಹಾಗೂ ಹಿಂದೂ ಜಾಗರಣ ವೇದಿಕೆ ಹಿಂದೂ ಮಹಾಗಣಪತಿ ಗಳ ವಿಸರ್ಜನಾ ಶೋಭಾಯಾತ್ರೆಯನ್ನು ಒಂದೇ ವೇಳೆಯಲ್ಲಿ ಅದ್ದೂರಿಯಾಗಿ ನಡೆಸಲಾಗುತ್ತಿದೆ. ಈ ವಿನೂತನ ಪ್ರಯತ್ನವು ಇತರ ಜಿಲ್ಲೆಗಳಿಗೂ ಪ್ರೇರಣೆಯಾಗುವ ಮೂಲಕ ಹರಿಹರದ ಹೆಸರನ್ನು ರಾಜ್ಯದಾದ್ಯಂತ ಪರಿಚಯಿಸುವಂತಾಗಲಿದೆ ಎಂದು ಹೇಳಿದರು.
ಹಿಂದೂ ಜಾಗರಣ ವೇದಿಕೆ ಸಂಚಾಲಕ ಎಚ್. ದಿನೇಶ್ ಮಾತನಾಡಿ, ವಿವಿಧ ಸಂಘ-ಸಂಸ್ಥೆಗಳ ಗಣಪತಿಗಳ ಸಮ್ಮಿಲನದೊಂದಿಗೆ ಈ ಬಾರಿಯ ವಿಸರ್ಜನಾ ಕಾರ್ಯಕ್ರಮ ನಡೆಯಲಿದೆ. ಸಾರ್ವಜನಿಕರ ಸಹಕಾರದೊಂದಿಗೆ ಶಾಂತಿ, ಸೌಹಾರ್ದತೆ ಹಾಗೂ ಸಂಭ್ರಮದಿಂದ ಕಾರ್ಯಕ್ರಮ ಯಶಸ್ವಿಗೊಳಿಸಲು ವೇದಿಕೆ ಸಜ್ಜಾಗಿದೆ ಎಂದರು.
ಹಿಂದೂ ಮಹಾಗಣಪತಿ ಮಹೋತ್ಸವ ಸಮಿತಿ ಗೌರವ ಸಲಹೆಗಾರ ಶೇಖರಗೌಡ ಪಾಟೀಲ್ ಮಾತನಾಡಿ, ವಿಸರ್ಜನಾ ಶೋಭಾಯಾತ್ರೆಯಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಳ್ಳುವ ನಿರೀಕ್ಷೆಯಿದೆ. 40 ಸಾವಿರಕ್ಕೂ ಅಧಿಕ ಭಕ್ತರಿಗೆ ಅನ್ನಸಂತರ್ಪಣೆ ವ್ಯವಸ್ಥೆ ಮಾಡಲಾಗಿದೆ ಎಂದರು.
ನಗರದ ವಿವಿಧ ವರ್ತಕರು ಹಾಗೂ ಸಂಘ-ಸಂಸ್ಥೆಗಳ ವತಿಯಿಂದ ಪ್ರಮುಖ ರಸ್ತೆಗಳಲ್ಲಿ ಭಕ್ತರಿಗೆ ಕುಡಿಯುವ ನೀರು, ತಂಪು ಪಾನೀಯ ಹಾಗೂ ಉಪಹಾರದ ವ್ಯವಸ್ಥೆಯನ್ನೂ ಸಹ ಮಾಡಲಾಗುತ್ತಿದೆ. ಶೋಭಾಯಾತ್ರೆಯಲ್ಲಿ ಡಿಜೆ ಸೇರಿದಂತೆ ವಿವಿಧ ಕಲಾತಂಡಗಳು ಭಾಗವಹಿಸಲಿದ್ದು, ನಗರದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಲಿದೆ ಎಂದು ತಿಳಿಸಿದರು.
ಸಾರ್ವಜನಿಕ ವಿನಾಯಕ ಮಹೋತ್ಸವ ಸಮಿತಿ ಸಲಹೆಗಾರ ಸಂತೋಷ್ ನೋಟದವರ್ ಮಾತನಾಡಿ, ಸಾರ್ವಜನಿಕ ವಿನಾಯಕ ಸಂಘದ ವತಿಯಿಂದ 64ನೇ ವರ್ಷದ ಗಣಪತಿ ಪ್ರತಿಷ್ಠಾಪನೆ ನಡೆಯುತ್ತಿದೆ. ಈ ಬಾರಿ ಹಿಂದೂ ಮಹಾಗಣಪತಿ ಯೊಂದಿಗೆ “ನಾವೆಲ್ಲರೂ ಒಂದು” ಎಂಬ ಸಂದೇಶದೊಂದಿಗೆ ಶೋಭಾಯಾತ್ರೆ ನಡೆಸುತ್ತಿರುವುದು ವಿಶೇಷವಾಗಿದೆ ಎಂದರು.
ಶೋಭಾಯಾತ್ರೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಪಾಲ್ಗೊಳ್ಳಲಿದ್ದು, ವಿವಿಧ ಸಮುದಾಯಗಳ ಬಾಂಧವರು ಸಹ ತಮ್ಮದೇ ರೀತಿಯಲ್ಲಿ ಸಹಕಾರ ನೀಡುತ್ತಿದ್ದಾರೆ. ನಗರದ ವಿವಿಧೆಡೆ ತಂಪು ಪಾನೀಯ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗುತ್ತಿದೆ. ಭಾನುವಾರ ಹರಿಹರದಲ್ಲಿ ಭಕ್ತಿ, ಸೌಹಾರ್ದತೆ ಹಾಗೂ ಸಂಭ್ರಮದ ಹಬ್ಬದ ವಾತಾವರಣ ನಿರ್ಮಾಣವಾಗಲಿದೆ ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಹಿಂದೂ ಮಹಾಗಣಪತಿ ಪ್ರಚಾರ ಸಮಿತಿ ಅಧ್ಯಕ್ಷ ಸಂತೋಷ್ ಗುಡಿಮನಿ, ನಾಗರಾಜ ಭಂಡಾರಿ, ಸಾರ್ವಜನಿಕ ವಿನಾಯಕ ಮಹೋತ್ಸವ ಸಮಿತಿ ಕಾರ್ಯದರ್ಶಿ ಸಚಿನ್ ಕೊಂಡಜ್ಜಿ, ಬಸವರಾಜ್, ನಾರಾಯಣ, ಶ್ರೀನಿಧಿ, ನಿತ್ಯಾನಂದ ಸೇರಿದಂತೆ ವಿವಿಧ ಸಮಿತಿಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
       ********** ಬಾಕ್ಸ್ ಕಾಲಂಗಾಗಿ **********
ನಾಳೆ ಹರಿಹರದಲ್ಲಿ ನಡೆಯಲಿರುವ ವಿನಾಯಕ ವಿಸರ್ಜನೆಯ ರಾಜಭೀದಿ ಉತ್ಸವದಲ್ಲಿ ನಾಯಕರುಗಳಾದ ಮಾಜಿ ಸಂಸದ  ಪ್ರತಾಪ್ ಸಿಂಹ, ಮಾಜಿ ಶಾಸಕ ಕುಮಾರ್ ಬಂಗಾರಪ್ಪ, ಮಾಜಿ ಸಚಿವ ಹಾಗೂ ಶಾಸಕ ರಮೇಶ್ ಜಾರಕಿಹೊಳಿ ಮತ್ತು ಕೇಂದ್ರ ಮಾಜಿ ಸಚಿವ ಹಾಗೂ ಶಾಸಕ ಬಸವನಗೌಡ ಪಾಟೀಲ್  ಯತ್ನಾಳ್ ಮುಂತಾದ ಗಣ್ಯರು ಭಾಗವಹಿಸುವುದಾಗಿ ಹಿಂದೂ ಮಹಾಗಣಪತಿಯ ಮಹೋತ್ಸವ ಸಮಿತಿ ಪದಾಧಿಕಾರಿಗಳು ಇದೇ ವೇಳೆ ಸ್ಪಷ್ಟಪಡಿಸಿದರು.
Share: