ಜಿಲ್ಲಾ ಉಸ್ತುವಾರಿ ಸಚಿವರ ಪರಿಷ್ಕತ ಪ್ರವಾಸ ಕಾರ್ಯಕ್ರಮ

ದಾವಣಗೆರೆ ಜು.03-ಜಿಲ್ಲಾ ಉಸ್ತುವಾರಿ ಮತ್ತು ನಗರಾಭಿವೃದ್ದಿ ಸಚಿವರಾದ ಬಿ.ಎ.ಬಸವರಾಜ ಇವರು ಜು.3 ರಂದು ಬೆಂಗಳೂರಿನಿಂದ ಮಧ್ಯಾಹ್ನ 2 ಗಂಟೆಗೆ ಹೊರಟು ಸಂಜೆ 5.30 ಕ್ಕೆ ದಾವಣಗೆರೆ ಪ್ರವಾಸಿ ಮಂದಿರಕ್ಕೆ ಆಗಮಿಸುವರು ಹಾಗೂ ಇಲ್ಲಿಯೇ ವಾಸ್ತವ್ಯ ಮಾಡುವರು. ಜು.4 ರ ಬೆಳಿಗ್ಗೆ ಹಾವೇರಿಗೆ ಪ್ರವಾಸ ಕೈಗೊಂಡು ಅಲ್ಲಿ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಮಧ್ಯಾಹ್ನ 12.15 ಕ್ಕೆ ದಾವಣಗೆರೆ ಪ್ರವಾಸಿ ಮಂದಿರಕ್ಕೆ ಆಗಮಿಸುವರು. ಮಧ್ಯಾಹ್ನ 12.30 ಕ್ಕೆ ದಾವಣಗೆರೆ ಜಿಲ್ಲಾ ಚಿಗಟೇರಿ ಆಸ್ಪತ್ರೆ ಆವರಣದಲ್ಲಿ ಮಕ್ಕಳ ಮತ್ತು ಮಹಿಳೆಯರ 100 ಹಾಸಿಗೆಗಳ ಆಸ್ಪತ್ರೆಯ ಹೊಸ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸುವರು. ಮಧ್ಯಾಹ್ನ 2 ಗಂಟೆಗೆ ದಾವಣಗೆರೆಯಿಂದ ನಿರ್ಗಮಿಸಿ ಚಿತ್ರದುರ್ಗಕ್ಕೆ ತೆರಳುವರೆಂದು ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *