ರಾಜ್ಯದಲ್ಲಿ ಕೊರೊನಾ ಆರ್ಭಟ ಜೋರಾಗಿದ್ದು, ಇಂದು ಬೆಂಗಳೂರಿನಲ್ಲಿ 1533 ಕೊರೊನಾ ಪ್ರಕರಣಗಳು ಪತ್ತೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕೃತ ಮಾಹಿತಿ ನೀಡಿದೆ. ಹೌದು, ಇಂದು ಬೆಂಗಳೂರಿನಲ್ಲಿ 1533 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಕೊರೊನಾ ಸೋಂಕಿತರ ಸಂಖ್ಯೆ 16862 ಕ್ಕೆ ಏರಿಕೆಯಾಗಿದೆ. ಇಂದು ಆಸ್ಪತ್ರೆಯಿಂದ 404 ಮಂದಿ ಬಿಡುಗಡೆಯಾಗಿದ್ದು, ಇದುವರೆಗೆ 3839 ಮಂದಿ ಬಿಡುಗಡೆಯಾದಂತಾಗಿದೆ, ಇದುವರೆಗೆ 229 ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಇಂದು ಕೂಡ ಕೊರೋನಾ ಸೋಂಕಿನ ಸರಣಿ ಮುಂದುವರೆದಿದೆ. ಇಂದು ರಾಜ್ಯದಲ್ಲಿ 2798 ಜನರಿಗೆ ಕೊರೋನಾ ಸೋಂಕು ಹೊಸದಾಗಿ ದೃಢಪಟ್ಟಿದೆ. ಹೀಗಾಗಿ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 36,261ಕ್ಕೆ ಏರಿಕೆಯಾಗಿದೆ. ಇಂದು ಬರೋಬ್ಬರಿ 70 ಜನ ಕೊರೋನಾ ಸೋಂಕಿನಿಂದಾಗಿ ಸಾವನ್ನಪ್ಪಿದ್ದಾರೆ.
ಬೆಂಗಳೂರಿನಲ್ಲಿ ಇಂದು ‘1533’ ಮಂದಿಗೆ ಸೋಂಕು ಧೃಡ
