ದಾವಣಗೆರೆ ಜು.22, ಮಾಯಕೊಂಡ ವಿಧಾನಸಭಾ ಕ್ಷೇತ್ರದ ಶಾಸಕರಾದ ಪ್ರೊ. ಎನ್.ಲಿಂಗಣ್ಣ ಇವರ ಅಧ್ಯಕ್ಷತೆಯಲ್ಲಿ ಜು.21 ರಂದು ದಾವಣಗೆರೆ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ, ಗ್ರಾಮ ಪಂಚಾಯಿತಿಗಳ ಆಡಳಿತಾಧಿಕಾರಿಗಳು ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಪ್ರಗತಿ ಪರಿಶೀಲನಾ ಸಭೆ ಏರ್ಪಡಿಸಲಾಗಿತ್ತು.
ಸಭೆಯಲ್ಲಿ ಕೋವಿಡ್-19 ಕುರಿತು ಕೈಗೊಂಡ ಕ್ರಮಗಳ ಬಗ್ಗೆ ಹಾಗೂ ಮಹಾತ್ಮ ಗಾಂಧಿ ರಾಷ್ಟೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ತಾಲ್ಲೂಕಿನಲ್ಲಿ ಕೈಗೊಂಡ ಕಾಮಗಾರಿಗಳ ವಿವರಗಳನ್ನು ಪಡೆದುಕೊಂಡರು. ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಕಾಮಗಾರಿಗಳನ್ನು ಕೈಗೊಂಡ ಕೂಲಿಗಾರರಿಗೆ ಅನುಕೂಲ ಮಾಡಿಕೊಡಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು. ಈ ಸಭೆಯಲ್ಲಿ ಮಾನ್ಯ ದಾರುಕೇಶ್.ಬಿ.ಎಂ, ಕಾರ್ಯನಿರ್ವಾಹಕ ಅಧಿಕಾರಿಗಳು, ತಾಲ್ಲೂಕು ಪಂಚಾಯಿತಿ ದಾವಣಗೆರೆ ಇವರು ಉಪಸ್ಥಿತರಿದ್ದರು.
ಮಾಯಕೊಂಡ ಪ್ರಗತಿ ಪರಿಶೀಲನಾ ಸಭೆ
