ಬಳ್ಳಾರಿ,ಜು.22, ಮಾನ್ಯ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ರಾಜ್ಯ ಸರಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಪೂರ್ಣಗೊಳಿಸಿರುವ ಈ ಸುಸಂದರ್ಭದಲ್ಲಿ ಮೊದಲ ವರ್ಷದ ಪ್ರಧಾನ ಸಮಾರಂಭವು ನವತಂತ್ರಜ್ಞಾನದ ವರ್ಚುವಲ್ ಪ್ಲಾಟ್‌ಫಾರಂ ಮೂಲಕ ಜು.27ರಂದು ಬೆಳಗ್ಗೆ 11ಕ್ಕೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆಯಲಿದೆ.
ಇದೇ ಕಾರ್ಯಕ್ರಮವು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಏಕಕಾಲಕ್ಕೆ ಭಿತ್ತರವಾಗಲಿದೆ. ನಾಡದೊರೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ರಾಜ್ಯದ ಜನರನ್ನು ಉದ್ದೇಶಿಸಿ ಕಳೆದ ಒಂದು ವರ್ಷದಲ್ಲಿ ಆಗಿರುವ ಅಭಿವೃದ್ಧಿ ಕಾರ್ಯಗಳು ಮತ್ತು ಮುಂದೆ ಆಗಬೇಕಾದ ಕೆಲಸಗಳು ಸೇರಿದಂತೆ ಅನೇಕ ವಿಷಯಗಳ ಕುರಿತು ಮಾತನಾಡಲಿದ್ದಾರೆ ಮತ್ತು ವಿವಿಧ ಯೋಜನೆಗಳ ಫಲಾನುಭವಿಗಳೊಂದಿಗೆ ಅವರು ಸಂವಾದ ನಡೆಸಲಿದ್ದಾರೆ.
ಬಳ್ಳಾರಿ ಜಿಲ್ಲೆಯಲ್ಲಿ ಈ ಜಿಪಂ ಸಭಾಂಗಣದಲ್ಲಿ ನವತಂತ್ರಜ್ಞಾನದ ವರ್ಚುವಲ್ ಪ್ಲಾಟ್‌ಫಾರಂ ಮೂಲಕ ಕಾರ್ಯಕ್ರಮದ ನೇರಪ್ರಸಾರಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಪರಿಸರ, ಅರಣ್ಯ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲೆಯ ಎಲ್ಲಾ ಶಾಸಕರು, ಜನಪ್ರತಿನಿಧಿಗಳು, ಅಧಿಕಾರಿಗಳು ವೀಕ್ಷಿಸಲಿದ್ದಾರೆ. ವಿವಿಧ ಯೋಜನೆಗಳ ಫಲಾನುಭವಿಗಳು, ಮಾಧ್ಯಮ ಪ್ರತಿನಿಧಿಗಳು ಉಪಸ್ಥಿತರಿರಲಿದ್ದಾರೆ.
ಇದೇ ಸಂದರ್ಭದಲ್ಲಿ ಸರಕಾರದ ಒಂದು ವರ್ಷದ ಸಾಧನೆಗೆ ಸಂಬAಧಿಸಿದAತೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಹೊರತಂದಿರುವ ಕಿರುಹೊತ್ತಿಗೆಯನ್ನು ಜಿಲ್ಲಾ ಉಸ್ತುವಾರಿ ಸಚಿವರು ಬಿಡುಗಡೆ ಮಾಡಿ ಮಾತನಾಡಲಿದ್ದಾರೆ.
ರಾಜ್ಯ ಸರಕಾರದ ಮೊದಲ ವರ್ಷದ ಪ್ರಧಾನ ಸಮಾರಂಭ ಜು.27ರಂದು ಜಿಲ್ಲಾ ಕೇಂದ್ರಗಳಲ್ಲಿ ಏಕಕಾಲಕ್ಕೆ ಪ್ರಸಾರ
