ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳ ನೇಮಕಕ್ಕೆ ಆನ್‍ಲೈನ್ ಅರ್ಜಿ

ದಾವಣಗೆರೆ ಜು.25 ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ದಾವಣಗೆರೆ, ಜಗಳೂರು, ಹೊನ್ನಾಳಿ ಮತ್ತು ಚನ್ನಗಿರಿ ತಾಲ್ಲೂಕಿನ ಶಿಶು ಅಭಿವೃದ್ದಿ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಒಟ್ಟು 13 ಅಂಗನವಾಡಿ ಕಾರ್ಯಕರ್ತೆಯರು ಹಾಗೂ 46 ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳಿಗೆ ನೇಮಕ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಜುಲೈ 27 ರಿಂದ ಅರ್ಜಿಯನ್ನು ಆನ್‍ಲೈನ್ ಮುಖಾಂತರ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ಆಗಸ್ಟ್ 27 ಕೊನೆಯ ದಿನವಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ತಾಲ್ಲೂಕುಗಳ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿ ಸಂಖ್ಯೆಗಳೂ ದಾವಣಗೆರೆ ದೂ.ಸಂ: 08192-263219, ಹರಿಹರ ದೂ.ಸಂ: 08192-241431, ಜಗಳೂರು ದೂ.ಸಂ: 08196-227132, ಹೊನ್ನಾಳಿ ದೂ.ಸಂ: 08188-251283, ಚನ್ನಗಿರಿ ದೂ.ಸಂ: 08189-228010 ಕಚೇರಿಯನ್ನು ಸಂಪರ್ಕಿಸಬಹುದೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪ ನಿರ್ದೇಶಕರಾದ ವಿಜಯ್‍ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *