ಶಿವಮೊಗ್ಗ ತಾತ್ಕಾಲಿಕ ಹುದ್ದೆ ಪ್ರಕಟ; ಆಕ್ಷೇಪಣೆಗೆ ಆಹ್ವಾನ

ಶಿವಮೊಗ್ಗ,ಜುಲೈ-28,ಕೋವಿಡ್-19 ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಛೇರಿಯ ಅಧೀನ ಆರೋಗ್ಯ ಸಂಸ್ಥೆಗಳಲ್ಲಿ ಖಾಲಿ ಇರುವ ಅರೇ ವೈದ್ಯಕೀಯ ಹುದ್ದೆಗಳನ್ನು 06 ತಿಂಗಳ ಅವಧಿಗೆ ಅಥವಾ ನೇರ ನೇಮಕಾತಿ ಮುಖೇನ ಹುದ್ದೆಗಳು ಭರ್ತಿಯಾಗುವವರೆಗೆ ತಾತ್ಕಾಲಿಕವಾಗಿ ಮೀಸಲಾತಿ ಮತ್ತು ಜೇಷ್ಠತೆ (ಅಂಕಗಳ) ಆಧಾರದ ಮೇಲೆ ನೇಮಕಾತಿಗೆ ನೇರ ಸಂದರ್ಶನ ಏರ್ಪಡಿಸಲಾಗಿತ್ತು.
ಈ ಕುರಿತು ದಾಖಲಾತಿಗಳ ಪರಿಶೀಲನೆಯ ನಂತರ ಮೆರಿಟ್ ಪಟ್ಟಿಯನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಛೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದ್ದು, ಆಕ್ಷೇಪಣೆಗಳಿದ್ದಲ್ಲಿ ದಿನಾಂಕ:03-08-2020 ರೊಳಗಾಗಿ ಸಲ್ಲಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Leave a Reply

Your email address will not be published. Required fields are marked *