ಪ್ಲಾಸ್ಟಿಕ್ ಧ್ವಜ ಉಪಯೋಗಿಸದಂತೆ ಮನವಿ

ದಾವಣಗೆರೆ ಜು.30,ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಪರಿಸರಸ್ನೇಹಿಯಾಗಿ ಆಚರಿಸಲು ಹಾಗೂ ಪರಿಸರ ಸಂರಕ್ಷಣೆಗಾಗಿ ಪ್ಲಾಸ್ಟಿಕ್ ಧ್ವಜಗಳನ್ನು ಉಪಯೋಗಿಸದಂತೆ ಮನವಿ ಮಾಡಲಾಗಿದೆ.
ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಪರಿಸರ ಸ್ನೇಹಿಯಾಗಿ ಆಚರಿಸಲು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಸಲುವಾಗಿ ಜಿಲ್ಲೆಯಾದ್ಯಂತ ಪ್ಲಾಸ್ಟಿಕ್ ಧ್ವಜ ಮಾರಾಟ ಮಾಡದಂತೆ ಹಾಗೂ ಉಪಯೋಗಿಸದಂತೆ ಕೋರಲಾಗಿದೆ.
ಪ್ಲಾಸ್ಟಿಕ್ ಧ್ವಜ ಮಾರಾಟ ಮಾಡುವಂತಹ ಅಂಗಡಿ ಮಾಲೀಕರುಗಳ ವಿರುದ್ಧ ಪ್ಲಾಸ್ಟಿಕ್ ಅಧಿನಿಯಮ 2016 ಹಾಗೂ ಪರಿಸರ ಸಂರಕ್ಷಣಾ ಕಾಯ್ದೆ 1986ರ ಅಡಿಯಲ್ಲಿ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ದಾವಣಗೆರೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿ ಕೆ.ಬಿ.ಕೊಟ್ರೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *