ಶಿವಮೊಗ್ಗ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

ಶಿವಮೊಗ್ಗ,ಆಗಸ್ಟ್-03- ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಪ್ರಸ್ತುತ ಸಾಲಿನ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿಯಲ್ಲಿ ಜನವರಿ-2019 ರಿಂದ ಡಿಸೆಂಬರ್-19 ರೊಳಗೆ ಅಂತರಾಷ್ಟ್ರೀಯ, ರಾಷ್ಟ್ರೀಯ ಮತ್ತು ರಾಜ್ಯಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪ.ಜಾ ಮತ್ತು ಪ.ಪಂ.ಗಳ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ನೀಡುತ್ತಿದ್ದು, ಅರ್ಹ ಕ್ರೀಡಾಪಟುಗಳಿಂದ ಆನ್‍ಲೈನ್ ಅರ್ಜಿ ಆಹ್ವಾನಿಸಿದೆ.
ಅರ್ಹ ಕ್ರೀಡಾಪಟುಗಳು ತಾವು ಭಾಗವಹಿಸಿ, ಬಹುಮಾನಗಳಿಸಿರುವ ಬಗ್ಗೆ ನೀಡಲಾಗಿರುವ ಪ್ರಶಸ್ತಿ ಪತ್ರದೊಂದಿಗೆ ಅರ್ಜಿಯನ್ನು ಇಲಾಖೆಯ ವೆಬ್‍ಸೈಟ್ http://karunadu.karnataka.gov.in/dyes ಮೂಲಕ ಆಗಸ್ಟ್-30 ರೊಳಗಾಗಿ ಸಲ್ಲಿಸುವಂತೆ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Leave a Reply

Your email address will not be published. Required fields are marked *