ಬ್ಯಾಂಕ್‍ನ ಅಧಿಕಾರಿ, ಗುಮಾಸ್ತರ ಹುದ್ದೆಗಳಿಗೆ ತರಬೇತಿ : ನೊಂದಣಿ ಪ್ರಾರಂಭ

ಬಳ್ಳಾರಿ, ಆ 05,ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಐ.ಬಿ.ಪಿ.ಎಸ್ ರಾಷ್ಟ್ರೀಕೃತ ಬ್ಯಾಂಕ್‍ನವರು ಮುಂದಿನ ದಿನಗಳಲ್ಲಿ ಒಂಬತ್ತು ಸಾವಿರ ಅಧಿಕಾರಿಗಳ ಮತ್ತು ಗುಮಾಸ್ತರ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 50 ದಿನಗಳ ತರಬೇತಿಯನ್ನು ಆನ್‍ಲೈನ್‍ನಲ್ಲಿ ನೀಡಲು ಉದ್ದೇಶಿಸಲಾಗಿದ್ದು, ಇದಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ನೊಂದಣಿ ಮಾಡಿಕೊಳ್ಳಲಾಗುತ್ತದೆ ಎಂದು ಕರಾಮುವಿ ಕುಲಸಚಿವರಾದ ಪ್ರೊ. ಲಿಂಗರಾಜಗಾಂಧಿ ರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆಸಕ್ತರು ತಮ್ಮ ಹೆಸರನ್ನು ಆ.7 ರೊಳಗಾಗಿ ದೂ: 0821-2515944 ಮೂಲಕ ನೊಂದಣಿ ಮಾಡಿಕೊಳ್ಳಬಹುದಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *