ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಿಸಲು ಮನವಿ

ಶಿವಮೊಗ್ಗ, ಆಗಸ್ಟ್-05, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಪ್ರತಿವರ್ಷ ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಣೆ ಮಾಡುವ ಬಗ್ಗೆ ಸಾರ್ವಜನಿಕರಲ್ಲಿ, ಶಾಲಾ ಮಕ್ಕಳಲ್ಲಿ ಜಾಗೃತಿ ಮೂಡಿಸಲು ಹಲವಾರು ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳುತ್ತಿದ್ದು, ಈ ವರ್ಷವೂ ಸಹ ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಿಸುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದೆ
ಕೋವಿಡ್-19 ಸೋಂಕು ಹಬ್ಬುತ್ತಿರುವ ಈ ದಿನಗಳಲ್ಲಿ ರೋಗ ನಿರೋಧಕ ಶಕ್ತಿಯುಳ್ಳ ಅರಿಶಿನ ಬಳಕೆಯಿಂದ ಗಣೇಶ ಪ್ರತಿಮೆಯನ್ನು ಮನೆಯಲ್ಲಿಯೇ ಮಾಡಿಕೊಂಡು ಪೂಜಿಸುವುದು, ಸಗಣಿಯಿಂದ, ಗೋಧಿ ಅಥವಾ ರಾಗಿ ಹಿಟ್ಟಿಗೆ ಅರಶಿಣ ಸೇರಿಸಿ ಸಣ್ಣ ಸಣ್ಣ ಗಣೇಶನ ಪ್ರತಿಮೆ ತಯಾರಿಸಿ ಪೂಜಿಸುವುದರಿಂದ ಕೋವಿಡ್-19ನ್ನು ಎದುರಿಸಲು ಸಂಕಲ್ಪ ಮಾಡಿ, ಪರಿಸರಕ್ಕೆ ಅಪಾರ ಕೊಡುಗೆ ನೀಡಬಹುದಾಗಿದೆ.
ಇಂತಹ ಪುಟ್ಟ ಪುಟ್ಟ ಪ್ರತಿಮೆಗಳನ್ನು ತಯಾರಿಸಿ, ಪೂಜಿಸಿ ಮನೆಯ ಆವರಣದಲ್ಲಿ ವಿಸರ್ಜನೆ ಮಾಡುವುದರಿಂದ ಸಾಮಾಜಿ ಅಂತರವನ್ನು ಕಾಪಾಡಿಕೊಳ್ಳುವುದರ ಜೊತೆಗೆ ಪರಿಸರ ಮಾಲಿನ್ಯವನ್ನು ತಡೆಗಟ್ಟಬಹುದು. ಈ ಕಾರ್ಯಕ್ಕೆ ಎಲ್ಲಾ ಸಾರ್ವಜನಿಕರು ಹಾಗೂ ಸಂಘಸಂಸ್ಥೆಗಳು ಕೈಜೋಡಿಸಬೇಕೆಂದು ಪರಿಸರ ಅಧಿಕಾರಿಗಳು ಮನವಿ ಮಾಡಿದ್ದಾರೆ

Leave a Reply

Your email address will not be published. Required fields are marked *