ದಾವಣಗೆರೆ ಆ.11, ಆಗಸ್ಟ್ 12 ರಂದು 66/11 ಕೆ.ವಿ. ವಿ.ವಿ. ಕೇಂದ್ರ ದಾವಣಗೆರೆಯಿಂದ ಹೊರಡುವ ಮೌನೇಶ್ವರ, ಇ.ಎಸ್.ಐ ಹಾಗೂ ಜಯನಗತ ಫೀಡರ್‍ಗಳಲ್ಲಿ ಮಹಾನಗರಪಾಲಿಕೆ ವತಿಯಿಂದ ಕೆಐಯುಡಬ್ಲೂಎಂಐಪಿ ಯೋಜನೆಯಡಿಯಲ್ಲಿ ಒಳಚರಂಡಿ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಮೌನೇಶ್ವರ, ಜಯನಗರಮತ್ತು ಇ.ಎಸ್. ಐ ಫೀಡರ್ ವ್ಯಾಪ್ತಿಯ ಈ ಕೆಳಕಂಡ ಪ್ರದೇಶಗಳಲ್ಲಿ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಹೆಚ್.ಕೆ.ಆರ್. ಸರ್ಕಲ್, ಕೆ.ಇ.ಬಿ ಕಾಲೋನಿ, ನಿಟುವಳ್ಳಿ ಹಾಗು ನಿಟುವಳ್ಳಿ ಹೊಸಬಡಾವಣೆ,
ಮೌನೇಶ್ವರ ಬಡಾವಣೆ, ಸೈಯದ್ ಪೀರ್ ಬಡಾವಣೆ, ಐ.ಟಿ.ಐ. ರಿಂಗ್‍ರಸ್ತೆ, ಜಯನಗರ, ದುರ್ಗಾಂಬಿಕದೇವಸ್ಥಾನ ಸುತ್ತಮುತ್ತ, ಎಸ್.ಎಸ್. ಹೈಟೆಕ್‍ಆಸ್ಪತ್ರೆರಸ್ತೆ, ಭಗೀರಥ ಸರ್ಕಲ್, ಕಾಳಿಕಾಂಬ ದೇವಸ್ಥಾನ, ಶಕ್ತಿನಗರ, ಹಾಗುಇ.ಎಸ್.ಐ .ಆಸ್ಪತ್ರೆ ಮತ್ತು ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಬೆಸ್ಕಾಂ ಪ್ರಕಟಣೆ ತಿಳಿಸಿದೆ
ದಾವಣಗೆರೆ ವಿದ್ಯುತ್ ವ್ಯತ್ಯಯ
