ಶಿವಮೊಗ್ಗ ಭಾರತ ಸ್ವಾತಂತ್ರ್ಯ ದಿನಾಚರಣೆ-2020

ಶಿವಮೊಗ್ಗ, ಆಗಸ್ಟ್ 13,ಜಿಲ್ಲಾ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ 2020ರ ಆಗಸ್ಟ್ 15 ರಂದು ಬೆಳಿಗ್ಗೆ 9.00ಕ್ಕೆ ನಗರದ ಡಿ.ಎ.ಆರ್. ಪೊಲೀಸ್ ಪೆರೇಡ್ ಮೈದಾನದಲ್ಲಿ ಧ್ವಜಾರೋಹಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಅಂದು ಬೆಳಿಗ್ಗೆ 9.00 ಗಂಟೆಗೆ ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರವರ ಗೌರವ ಉಪಸ್ಥಿತಿಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪರವರು ಧ್ವಜಾರೋಹಣ ನೆರವೇರಿಸುವರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯತ್ ಅದ್ಯಕ್ಷೆ ಶ್ರೀಮತಿ ಜ್ಯೋತಿ ಎಸ್. ಕುಮಾರ್, ವಿಧಾನಸಭಾ ಶಾಸಕರುಗಳಾದ ಎಸ್. ಕುಮಾರ್ ಬಂಗಾರಪ್ಪ, ಅರಗ ಜ್ಞಾನೇಂದ್ರ, ಹರತಾಳು ಹಾಲಪ್ಪ, ಸಂಗಮೇಶ್ವರ ಬಿ.ಕೆ., ಕೆ.ಬಿ. ಅಶೋಕ್ ನಾಯ್ಕ್, ಲೋಕಸಭಾ ಸಂಸದ ಬಿ.ವೈ.ರಾಘವೇಂದ್ರ, ವಿಧಾನ ಪರಿಷತ್ ಸದಸ್ಯರುಗಳಾದ ಆರ್. ಪ್ರಸನ್ನಕುಮಾರ್, ಆಯನೂರು ಮಂಜುನಾಥ್, ಸಿ.ಎಂ. ಇಬ್ರಾಹಿಂ, ಎಸ್.ಎಲ್.ಭೋಜೆಗೌಡ, ಶ್ರೀಮತಿ ಭಾರತಿ ಶೆಟ್ಟಿ, ಶಿವಮೊಗ್ಗ ಮಹಾನಗರ ಪಾಲಿಕೆ ಮಹಾಪೌರೆ ಶ್ರೀಮತಿ ಸುವರ್ಣ ಶಂಕರ್, ಕ.ಆ.ವೈ.ಸ.ಅ.ನಿ.ದ ಅಧ್ಯಕ್ಷ ಡಿ.ಎಸ್.ಅರುಣ್, ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಗುರುಮೂರ್ತಿ ಕೆ.ಎಸ್. ತಾ.ಪಂ. ಅಧ್ಯಕ್ಷೆ ಶ್ರೀಮತಿ ಗೀತಾ ಜಯಶೇಖರ್ ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯತ್ ಮತ್ತು ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳು, ಗಣ್ಯರು ಆಗಮಿಸಲಿರುವರು.
ಧ್ವಜಾರೋಹಣ ನಂತರ ರಾಷ್ಟ್ರಗೀತೆ, ನಾಡಗೀತೆ, ಪಥಸಂಚಲನ, ವಂದನೆ ಸ್ವೀಕಾರ, ಸ್ವಾತಂತ್ರ್ಯೋತ್ಸವದ ಸಂದೇಶ, ಪೆರೇಡ್ ತಂಡಗಳ ವೀಕ್ಷಣೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯಿಂದ ಸಾಂಸ್ಕøತಿಕ ಕಾರ್ಯಕ್ರಮಗಳು ನೆರವೇರಲಿವೆ.
ಈ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಶಿವಕುಮಾರ್ ಕೆ.ಬಿ., ಜಿಲ್ಲಾ ಪೊಲೀಸ್ ಅಧೀಕ್ಷಕ ಕೆ.ಎಂ.ಶಾಂತರಾಜು, ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಎಂ.ಎಲ್. ವೈಶಾಲಿ ಮತ್ತು ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ್ ಎಸ್.ವಠಾರೆ ಇವರುಗಳು ಉಪಸ್ಥಿತರಿರುವರು.
ಶಿವಮೊಗ್ಗ ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳು, ಸರ್ಕಾರಿ ಅಧಿಕಾರಿಗಳು, ನೌಕರರು ಹಾಗೂ ಸಾರ್ವಜನಿಕರು ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ ಭಾಗವಹಿಸಬೇಕೆಂದು ಸಮಿತಿ ತಿಳಿಸಿದೆ.

Leave a Reply

Your email address will not be published. Required fields are marked *