ದಾವಣಗೆರೆ ಆ.13,ಜಿಲ್ಲಾಡಳಿತದ ವತಿಯಿಂದ ಆಗಸ್ಟ್ 15 ರಂದು ಬೆಳಿಗ್ಗೆ 9 ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.
ಅಂದು ಬೆಳಿಗ್ಗೆ 9 ಗಂಟೆಗೆ ರಾಷ್ಟ್ರ ಧ್ವಜಾರೋಹಣ ಕಾರ್ಯಕ್ರಮವನ್ನು ನಗರಾಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ.ಬಸವರಾಜ (ಭೈರತಿ) ಇವರು ನೆರವೇರಿಸುವರು.
ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಸ್.ಎ.ರವೀಂದ್ರನಾಥ್ ಅಧ್ಯಕ್ಷತೆ ವಹಿಸುವರು. ಮುಖ್ಯಮಂತ್ರಿಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಎಂ.ಪಿ.ರೇಣುಕಾಚಾರ್ಯ, ಸಂಸದರಾದ ಜಿ.ಎಂ.ಸಿದ್ದೇಶ್ವರ, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ದೀಪಾ ಜಗದೀಶ್, ಶಾಸಕರು ಹಾಗೂ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ ಅಧ್ಯಕ್ಷರು ಮತ್ತು ನಿರ್ದೇಶಕರಾದ ಮಾಡಾಳ್ ವಿರೂಪಾಕ್ಷಪ್ಪ, ಶಾಸಕರು ಹಾಗೂ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಎಸ್.ವಿ.ರಾಮಚಂದ್ರ ಇವರ ಗೌರವ ಉಪಸ್ಥಿತಿ ಇದ್ದು, ಮುಖ್ಯ ಅತಿಥಿಗಳಾಗಿ ವಿಧಾನಸಭಾ ಮತ್ತು ವಿಧಾನ ಪರಿಷತ್ ಶಾಸಕರು, ಮಹಾನಗರಪಾಲಿಕೆ ಮಹಾಪೌರರು, ದೂಡಾ ಅಧ್ಯಕ್ಷರು, ಜನಪ್ರತಿನಿಧಿಗಳು, ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ, ಜಿ.ಪಂ.ಸಿಇಓ, ಪಾಲಿಕೆ ಆಯುಕ್ತರು ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.
ದಾವಣಗೆರೆ 74ನೇ ಸ್ವಾತಂತ್ರ್ಯ ದಿನಾಚರಣೆ
