ದಾವಣಗೆರೆ ಆ.13,ರಾಜ್ಯ ಸರ್ಕಾರದ ವತಿಯಿಂದ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ 5 ವರ್ಷ ಉತ್ತಮ ಸೇವೆ ಸಲ್ಲಿಸಿದ ಸಮಾಜ ಸೇವಾ ಕಾರ್ಯಕರ್ತರು ಹಾಗೂ ಸ್ವಯಂ ಸೇವಾ ಸಂಸ್ಥೆಗಳ ಸೇವೆಯನ್ನು ಗುರುತಿಸಿ ಸಂಸ್ಥೆಗಳಿಗೆ ರಾಜ್ಯ ಪ್ರಶಸ್ತಿ ನೀಡಲಾಗುವುದು.
ಆಯ್ಕೆಯಾದ 2 ಸಂಸ್ಥೆಗಳಿಗೆ ರೂ. 1 ಲಕ್ಷ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರಗಳನ್ನು ನೀಡಲಾಗುವುದು. ಅರ್ಜಿ ನಮೂನೆಗಳನ್ನು ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಜಿಲ್ಲಾ ಕಚೇರಿ 14 ನೇ ಮುಖ್ಯ ರಸ್ತೆ, ಎಂ.ಸಿ.ಸಿ. ಬಿ ಬ್ಲಾಕ್ ಕುವೆಂಪುನಗರ ದಾವಣಗೆರೆ-04, ದೂರವಾಣಿ ಸಂಖ್ಯೆ: 08192-264056 ಇಲ್ಲಿ ಅರ್ಜಿಗಳನ್ನು ಪಡೆಯಬಹುದಾಗಿರುತ್ತದೆ.
ಅರ್ಜಿಗಳನ್ನು ಕನ್ನಡ ಭಾಷೆಯಲ್ಲಿ ಭರ್ತಿ ಮಾಡಿ ದ್ವಿಪ್ರತಿಯಲ್ಲಿ ಸೆ.10 ರೊಳಗೆ ಕಚೇರಿಗೆ ಕಳುಹಿಸಬೇಕಾಗಿರುತ್ತದೆ. ನಿಗದಿತ ದಿನಾಂಕದ ನಂತರ ಸಲ್ಲಿಸಿದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪ ನಿರ್ದೇಶಕರಾದ ವಿಜಯ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ವ್ಯಕ್ತಿ-ಸಂಸ್ಥೆಗಳಿಗೆ ಪ್ರಶಸ್ತಿಗೆ ಅರ್ಜಿ ಆಹ್ವಾನ
