ದಾವಣಗೆರೆ 74ನೇ ಸ್ವಾತಂತ್ರ್ಯ ದಿನಾಚರಣೆ

ದಾವಣಗೆರೆ ಆ.14, ಜಿಲ್ಲಾಡಳಿತದ ವತಿಯಿಂದ ಆಗಸ್ಟ್ 15 ರಂದು ಬೆಳಿಗ್ಗೆ 9 ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.
ಅಂದು ಬೆಳಿಗ್ಗೆ 9 ಗಂಟೆಗೆ ರಾಷ್ಟ್ರ ಧ್ವಜಾರೋಹಣ ಕಾರ್ಯಕ್ರಮವನ್ನು ನಗರಾಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ.ಬಸವರಾಜ (ಭೈರತಿ) ಇವರು ನೆರವೇರಿಸುವರು.
ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಸ್.ಎ.ರವೀಂದ್ರನಾಥ್ ಅಧ್ಯಕ್ಷತೆ ವಹಿಸುವರು. ಮುಖ್ಯಮಂತ್ರಿಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಎಂ.ಪಿ.ರೇಣುಕಾಚಾರ್ಯ, ಸಂಸದರಾದ ಜಿ.ಎಂ.ಸಿದ್ದೇಶ್ವರ, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ದೀಪಾ ಜಗದೀಶ್, ಶಾಸಕರು ಹಾಗೂ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ ಅಧ್ಯಕ್ಷರು ಮತ್ತು ನಿರ್ದೇಶಕರಾದ ಮಾಡಾಳ್ ವಿರೂಪಾಕ್ಷಪ್ಪ, ಶಾಸಕರು ಹಾಗೂ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಎಸ್.ವಿ.ರಾಮಚಂದ್ರ ಇವರ ಗೌರವ ಉಪಸ್ಥಿತಿ ಇದ್ದು, ಮುಖ್ಯ ಅತಿಥಿಗಳಾಗಿ ಶಾಸಕರಾದ ಡಾ.ಶಾಮನೂರು ಶಿವಶಂಕರಪ್ಪ, ಶ್ರೀ ಜಿ.ರಘು ಆಚಾರ್, ಶ್ರೀ ಆರ್.ಪ್ರಸನ್ನ ಕುಮಾರ್, ಶ್ರೀ ಲಹರ್‍ಸಿಂಗ್ ಸಿರೋಯಾ, ಶ್ರೀ ಮೋಹನ್ ಕುಮಾರ್ ಕೊಂಡಜ್ಜಿ, ಪ್ರೊ.ಎನ್.ಲಿಂಗಣ್ಣ, ಶ್ರೀ ಎಸ್.ರಾಮಪ್ಪ, ಶ್ರೀ ಕೆ.ಪಿ.ನಂಜುಂಡಿ ವಿಶ್ವಕರ್ಮ, ಶ್ರೀ ರವಿಕುಮಾರ್ ಎನ್, ಶ್ರೀ ಎಸ್.ರುದ್ರೇಗೌಡ, ಡಾ.ತೇಜಸ್ವಿನಿಗೌಡ, ಶ್ರೀ ಆಯನೂರು ಮಂಜುನಾಥ್, ಶ್ರೀ ಎಸ್.ಎಲ್.ಭೋಜೇಗೌಡ, ಡಾ.ವೈ.ಎ.ನಾರಾಯಣಸ್ವಾಮಿ, ಮಹಾನಗರಪಾಲಿಕೆ ಮಹಾಪೌರರು ಶ್ರೀ ಬಿ.ಜಿ.ಅಜಯ್ ಕುಮಾರ್, ದೂಡಾ ಅಧ್ಯಕ್ಷ ಶ್ರೀ ಎನ್.ಎಚ್.ಶಿವಕುಮಾರ್, ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಹನುಮಂತರಾಯ, ಜಿ.ಪಂ. ಸಿಇಓ ಪದ್ಮಾ ಬಸವಂತಪ್ಪ, ಪಾಲಿಕೆ ಆಯುಕ್ತರಾದ ವಿಶ್ವನಾಥ್ ಮುದ್ದಜ್ಜಿ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *