8ನೇ ತರಗತಿಗೆ ಪ್ರವೇಶಾತಿಗೆ ಅರ್ಜಿ ಆಹ್ವಾನ

ಬಳ್ಳಾರಿ, ಆ 14, ರಾಷ್ಟಿಯ ಇಂಡಿಯನ್ ಮಿಲಿಟರಿ ಕಾಲೇಜ್ ಡೆಹರಾಡೂನ್‌ನ 2021ನೇ ಸಾಲಿಗೆ 8ನೇ ತರಗತಿಗೆ ಪ್ರವೇಶಾತಿ ಬಯಸುವ ಕರ್ನಾಟಕ ರಾಜ್ಯ ಬಾಲಕರಿಗೆ ಅರ್ಹತಾ ಪ್ರವೇಶ ಪರೀಕ್ಷೆಗೆ ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಧಾರವಾಡದ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರಾದ ವಿಂಗ್‌ಕಮಾAಡರ್(ನಿ) ಈಶ್ವರ್ ಕಡೊಳ್ಳಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
11 ರಿಂದ 13 ವರ್ಷದೊಳಗಿನ ಬಾಲಕರು ಮಾತ್ರ ಸದರಿ ಪ್ರವೇಶ ಪರೀಕ್ಷೆಗೆ ಅರ್ಹರಾಗಿರುತ್ತಾರೆ. ಸರ್ಕಾರದಿಂದ ಮಾನ್ಯತೆ ಪಡೆದಿರುವ ಶಾಲೆಯಲ್ಲಿ 7ನೇ ತರಗತಿಯಲ್ಲಿ ಓದುತ್ತಿರುವ ಅಥವಾ ಉತ್ತೀರ್ಣರಾಗಿರಬೇಕು.
ವಿವರಣ ಪತ್ರ ಹಾಗೂ ಹಳೇ ಪ್ರಶ್ನೆ ಪತ್ರಿಕೆಗಳನ್ನೊಳಗೊಂಡ ಅರ್ಜಿ ನಮೂನೆಯನ್ನು ಕೋರಿಕೆ ಪತ್ರದ ಮೇರೆಗೆ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುರ್ನವಸತಿ ಇಲಾಖೆ, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಭವನ, ನಂ.58 ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ರಸ್ತೆಯ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ರಸ್ತೆ, ಬೆಂಗಳೂರು ಇವರಿಂದ “ಖಿಊಇ ಅಔಒಒಂಓಆAಓಖಿ ಖIಒಅ ಆಇಊಖಂಆUಓ PಂಙAಃಐಇ ಂಖಿ SಃI, ಖಿಇಐ ಃಊಂಗಿAಓ, ಆಇಊಖಂಆUಓ (ಃಂಓಏ ಅಔಆಇ ಓಔ 01576)” ಇವರ ಹೆಸರಿನಲ್ಲಿ ಸಾಮಾನ್ಯ ಆಭ್ಯರ್ಥಿಗಳು 600 ರೂ, ಎಸ್ಸಿ ಮತ್ತು ಎಸ್‌ಟಿ ಅಭ್ಯರ್ಥಿಗಳು 555 ರೂ. ಪಡೆದ ಬ್ಯಾಂಕ್ ಡಿಡಿ ಮೂಲಕ ಕಳುಹಿಸಿ ಪೋಸ್ಟ್ ಮುಖಾಂತರ ಪಡೆಯಬಹುದು.
ರಿಜಿಸ್ಟರ್ಡ್ ಪೋಸ್ಟ್ ಮೂಲಕ ಅರ್ಜಿ ನಮೂನೆಯನ್ನು ಪಡೆಯಲಿಚ್ಚಿಸುವ ಅಭ್ಯರ್ಥಿಗಳು ಸಂಬAಧಿಸಿದ ಬ್ಯಾಂಕ್ ಡ್ರಾಫ್ಟ್ನೊಂದಿಗೆ ಅಗಲ ಅಳತೆಯ ಸೈಜಿನ ಸ್ವ-ವಿಳಾಸದ ಲಕೋಟೆಯ ಮೇಲೆ 40 ರೂ. ಮೌಲ್ಯದ ಅಂಚೆ ಚೀಟಿಯನ್ನು ಲಗತ್ತಿಸಿ ಕಳುಹಿಸಬೇಕು. ಲಕೋಟೆಯ ಮೇಲೆ ಆಭ್ಯರ್ಥಿಯ ಸ್ವ-ವಿಳಾಸ ಹಾಗೂ ದೂರವಾಣಿ ಸಂಖ್ಯೆಯನ್ನು ಸ್ಪಷ್ಟವಾಗಿ ನಮೂದಿಸಬೇಕು.
ಆಸಕ್ತರು ಮುನ್ಸಿಪಾಲಿಟಿ ಹಾಗೂ ಗ್ರಾಪಂ., ಪ್ರಾಧಿಕಾರದಿಂದ ಆಂಗ್ಲ ಭಾಷೆಯಲ್ಲಿ ಅಭ್ಯರ್ಥಿಯ ಜನ್ಮ ದಿನಾಂಕ ಪ್ರಮಾಣ ಪತ್ರ, 5 ಪಾಸ್‌ಪೋರ್ಟ್ ಸೈಜಿನ ಭಾವಚಿತ್ರಗಳು, ಜಾತಿ ಪ್ರಮಾಣಪತ್ರ, ವಾಸಸ್ಥಳ ದೃಢಿಕರಣಪತ್ರದೊಂದಿಗೆ ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಆ.31ರೊಳಗೆ ಬೆಂಗಳೂರಿನ ನಂ 58 ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ರಸ್ತೆಯ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಭವನದ ಸೈನಿಕ ಕಲ್ಯಾಣ ಮತ್ತು ಪುರ್ನವಸತಿ ಇಲಾಖೆಯ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು ಎಂದು ಅವರು ತಿಳಿಸಿದ್ದಾರೆ.
ಪ್ರವೇಶ ಪರೀಕ್ಷೆಯು ಬೆಂಗಳೂರು ಕೇಂದ್ರದಲ್ಲಿ ಡಿ.1 ಮತ್ತು 2ರಂದು ನಡೆಸಲಾಗುವುದು.
ಹೆಚ್ಚಿನ ಮಾಹಿತಿಗೆ ಸೈನಿಕ ಕಲ್ಯಾಣ ಮತ್ತು ಪುರ್ನವಸತಿ ಇಲಾಖೆಯ ಜಂಟಿ/ಉಪ ನಿರ್ದೇಶಕರ ಕಾರ್ಯಾಲಯ ಹಾಗೂ ದೂ.ಸಂ.080-25589459ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *