ಬಳ್ಳಾರಿ/ಹೊಸಪೇಟೆ,ಆ.14, ಪ್ರಧಾನ ಮಂತ್ರಿಗಳ ಆತ್ಮನಿರ್ಭರ ನಿಧಿ ಅಡಿಯಲ್ಲಿ ಬೀದಿ ವ್ಯಾಪಾರಿಗಳಿಗೆ ವಿಶೇಷ ಕಿರುಸಾಲ ಸೌಲಭ್ಯ ಯೋಜನೆ ಅನುಷ್ಠಾನಗೊಂಡಿದ್ದು, ಆಸಕ್ತ ಬೀದಿಬದಿ ವ್ಯಾಪಾರಸ್ಥರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ನಗರಸಭೆ ಪೌರಾಯುಕ್ತರಾದ ಜಯಲಕ್ಷಿö್ಮ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬೀದಿ ವ್ಯಾಪಾರಸ್ಥರಾಗಿರಬೇಕು, ಭರ್ತಿ ಮಾಡಿದ ಅರ್ಜಿ ನಮೂನೆ-2, ಆಧಾರ್ ಕಾರ್ಡ್, ಚುನಾವಣೆ ಗುರುತಿನ ಚೀಟಿ, ಪಡಿತರ ಚೀಟಿ, ಉದ್ಯೋಗ ಮಾಡುವ ಭಾವಚಿತ್ರ, ಆಧಾರ್ ಕಾರ್ಡ್ ಲಿಂಕ್ ಮಾಡಿರುವ ಬ್ಯಾಂಕ್ ಪಾಸ್ ಪುಸ್ತಕ ಹಾಗೂ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಮೊಬೈಲ್ ಸಂಖ್ಯೆ, ನಗರಸಭೆ ವತಿಯಿಂದ ನೀಡಿರುವ ಬೀದಿಬದಿ ವ್ಯಾಪಾರಸ್ಥ ಗುರುತಿನ ಚೀಟಿ. ಈ ಎಲ್ಲಾ ದಾಖಲೆಗಳ ಮೂಲ ಪ್ರತಿ ಹಾಗೂ 2 ನಕಲು ಪ್ರತಿಗಳನ್ನು ನಗರಸಭೆ ಕಾರ್ಯಾಲಯಕ್ಕೆ ಆ.21ರಿಂದ ನೇರವಾಗಿ ಸಲ್ಲಿಸಬೇಕು. ಅಥವಾ ಪೋರ್ಟಲ್‌ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಕೆಗೆ ಸೆ.07ರಂದು ಕೊನೆಯ ದಿನವಾಗಿರುತ್ತದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೀದಿ ವ್ಯಾಪಾರಸ್ಥರಿಗೆ ಸಾಲ ಸೌಲಭ್ಯ -ಅರ್ಜಿ ಆಹ್ವಾನ
