Sunday, 18 Oct 2026
Breaking
ಎಸ್‌ಎಸ್‌ಕೆ ಸಮಾಜದ ದಸರಾ ಆಚರಣೆ ಅತ್ಯಂತ ವಿಶೇಷ ವಾಗಿದ್ದು ಭಕ್ತಿ, ಶ್ರದ್ಧೆ ಇತರಿಗೆ ಮಾರ್ಗದರ್ಶಿ ; ಶಾಸಕ ಹರೀಶ್  ಕನ್ನಡ ಸಾಹಿತ್ಯದಲ್ಲಿ ವೈಚಾರಿಕ, ಸಾಂಸ್ಕೃತಿಕ ಹಾಗೂ ಸಾಮಾಜಿಕ ಮೌಲ್ಯಗಳ ಸಮನ್ವಯವಿದೆ ; ಡಾ. ಎ.ಬಿ. ರಾಮಚಂದ್ರಪ್ಪ ಶಿಕ್ಷಣ ಸಂಸ್ಥೆ, ರಿಯಲ್ ಎಸ್ಟೇಟ್ ವ್ಯವಹಾರವಿಲ್ಲ ; ಸೇವೆ ಮಾಡುವ ಉದ್ದೇಶದಿಂದ ಚುನಾವಣೆಗೆ ಸ್ಪರ್ಧೆ: ಶಶಿ ಹುಲಿಕುಂಟೆ ಮಠ ಹರಿಹರ ಗಣೇಶೋತ್ಸವದ ಇತಿಹಾಸದಲ್ಲಿ ಹೊಸ ಅಧ್ಯಾಯ ; ಐತಿಹಾಸಿಕ ರಾಜಭೀದಿ ಉತ್ಸವಕ್ಕೆ ಹರಿಹರದಲ್ಲಿ ಮುನ್ನುಡಿ ದಾವಣಗೆರೆ ‘ಆರೋಗ್ಯ ಸಂಜೀವಿ’ ಕಾಯ್ದೆಹೊಳ್ಳಿ ; ನಿಜದ ಬಿಸಿಲವೃತ್ತ” ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್‌ನಲ್ಲಿ ಇಂದಿರಾಗಾಂಧಿ ವಸತಿ ಶಾಲೆ ವಿದ್ಯಾರ್ಥಿಗಳ ಸಾಧನೆ ಸಾಲ ಮರುಪಾವತಿಸುವಂತೆ ಗ್ರಾಹಕರಿಗೆ ಮನವಿ
Menu
ರಾಜಕೀಯ

ವಿ.ಸೋಮಣ್ಣ ಕಾಂಗ್ರೆಸ್ ಸೇರುವ ಬಗ್ಗೆ ಚರ್ಚೆ ನಡೆದಿಲ್ಲ – ಡಿಕೆಶಿವಕುಮಾರ್

March 8, 2023 4 years ago 1 min read

ಬೆಂಗಳೂರು,ಮಾ.8-True Media Kannada- ಸಚಿವ ವಿ.ಸೋಮಣ್ಣ ಕಾಂಗ್ರೆಸ್ ಸೇರುವ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ. ಎಲ್ಲವೂ ಊಹಾಪೋಹಗಳು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ, ಸಚಿವ ವಿ ಸೋಮಣ್ಣ ಕಾಂಗ್ರೆಸ್ ಸೇರ್ಪಡೆ ಬಗ್ಗೆ ನಮ್ಮ ಬಳಿ ಯಾರು ಬಂದು ಚರ್ಚೆ ಮಾಡಿಲ್ಲ, ಅಂತಹ ಬೆಳವಣಿಗೆಯೆ ನಡೆದಿಲ್ಲ. ಅವರ ಪಕ್ಷದ ವಿಚಾರ ನಮಗೆ ಬೇಡ ಎಂದು ಹೇಳಿದರು.

ಕಾಂಗ್ರೆಸ್ನ ಗೃಹ ಜ್ಯೋತಿ ಯೋಜನೆ ಅನುಷ್ಠಾನಗೊಳಿಸಲು ಹೇಗೆ ಸಾಧ್ಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಲೇವಡಿ ಮಾಡಿದ್ದಾರೆ. ಸಾಮಥ್ರ್ಯ ಇಲ್ಲವೆಂದರೆ ಬಿಡಿ ನಮಗೆ ಗೋತ್ತಿದೆ ನಾವು ಭರವಸೆ ನೀಡಿದಂತೆ ನಡೆದುಕೊಳ್ಳುತ್ತೇವೆ. ಹಿಂದೆ ಕಾಂಗ್ರೆಸ್ ರೈತರಿಗೆ ಉಚಿತ ವಿದ್ಯುತ್ ನೀಡಿತ್ತು. ಬಿಜೆಪಿಯವರು ತಮ್ಮ ಪ್ರಣಾಳಿಕೆಯಲ್ಲಿ ಮೂರು ಗಂಟೆ ಹೆಚ್ಚು ವಿದ್ಯುತ್ ನೀಡುವುದಾಗಿ ಹೇಳಿದ್ದರು, ಆ ರೀತಿ ಏಕೆ ಹೇಳಿದ್ದರು. ಮಹಿಳೆಯರಿಗೆ ಎರಡು ಸಾವಿರ ರೂಪಾಯಿ ನೀಡುವ ಗೃಹಲಕ್ಷ್ಮೀ ಯೋಜನೆ ಘೋಷಿಸುತ್ತಿದ್ದಂತೆ ಮುಖ್ಯಮಂತ್ರಿ ಮೊದಲು 500 ರೂಪಾಯಿ ಕೊಡುತ್ತೇವೆ ಎಂದರು, ನಂತರ ಒಂದು ಸಾವಿರ ರೂಪಾಯಿ ಕೊಡುತ್ತೇವೆ ಎಂದಿದ್ದಾರೆ. ನಮಗೆ ಅಧಿಕಾರ ಇಲ್ಲ, ಮಾತನಾಡುತ್ತೇವೆ ಎಂದು ಹೇಳಬಹುದಾದರೂ ಸರ್ಕಾರ ನಡೆಸುವ ನೀವು ಭರವಸೆ ನೀಡುತ್ತಿರುವುದೇಕೆ. ಕಾಂಗ್ರೆಸ್ ಭರವಸೆ ನೀಡಿದಾಗ ಮಾತ್ರ ಅದು ಅನುಷ್ಠಾನವಾಗಲು ಸಾಧ್ಯವಿಲ್ಲ ಎಂದು ಬಿಜೆಪಿಯವರು ಮಾತನಾಡುತ್ತಾರೆ. ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆಗೆ ಪರಿಶೀಲನಾ ಸಮಿತಿ ಸಭೆ ನಡೆಸುತ್ತಿದೆ. ಈಗಾಗಲೇ ಶೇ.75ರಷ್ಟು ಪೂರ್ಣಗೊಂಡಿದೆ. ಒಂದೆರಡು ದಿನಗಳಲ್ಲಿ ಎಲ್ಲವನ್ನೂ ಅಖೈರು ಮಾಡಿ ದೆಹಲಿಗೆ ಕಳುಹಿಸುತ್ತೇವೆ. ಕ್ಷೇತ್ರದಲ್ಲಿ ಯಾರಿಗೆ ಏನು ಸಂದೇಶ ನೀಡಬೇಕೋ ಅದನ್ನು ತಲುಪಿಸಿಯಾಗಿದೆ. ಕೆಲಸ ನಡೆಯುತ್ತಿದೆ ಎಂದು ಹೇಳಿದರು.

Share:

More in ರಾಜಕೀಯ

View More →

Leave a Reply

Your email address will not be published. Required fields are marked *