Friday, 16 Oct 2026
Breaking
ಕನ್ನಡ ಸಾಹಿತ್ಯದಲ್ಲಿ ವೈಚಾರಿಕ, ಸಾಂಸ್ಕೃತಿಕ ಹಾಗೂ ಸಾಮಾಜಿಕ ಮೌಲ್ಯಗಳ ಸಮನ್ವಯವಿದೆ ; ಡಾ. ಎ.ಬಿ. ರಾಮಚಂದ್ರಪ್ಪ ಶಿಕ್ಷಣ ಸಂಸ್ಥೆ, ರಿಯಲ್ ಎಸ್ಟೇಟ್ ವ್ಯವಹಾರವಿಲ್ಲ ; ಸೇವೆ ಮಾಡುವ ಉದ್ದೇಶದಿಂದ ಚುನಾವಣೆಗೆ ಸ್ಪರ್ಧೆ: ಶಶಿ ಹುಲಿಕುಂಟೆ ಮಠ ಹರಿಹರ ಗಣೇಶೋತ್ಸವದ ಇತಿಹಾಸದಲ್ಲಿ ಹೊಸ ಅಧ್ಯಾಯ ; ಐತಿಹಾಸಿಕ ರಾಜಭೀದಿ ಉತ್ಸವಕ್ಕೆ ಹರಿಹರದಲ್ಲಿ ಮುನ್ನುಡಿ ದಾವಣಗೆರೆ ‘ಆರೋಗ್ಯ ಸಂಜೀವಿ’ ಕಾಯ್ದೆಹೊಳ್ಳಿ ; ನಿಜದ ಬಿಸಿಲವೃತ್ತ” ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್‌ನಲ್ಲಿ ಇಂದಿರಾಗಾಂಧಿ ವಸತಿ ಶಾಲೆ ವಿದ್ಯಾರ್ಥಿಗಳ ಸಾಧನೆ ಸಾಲ ಮರುಪಾವತಿಸುವಂತೆ ಗ್ರಾಹಕರಿಗೆ ಮನವಿ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ತಂಬಾಕು ಮಾರಾಟ: ದಾಳಿ,ದಂಡ ವಿಧಿಸಿದ ಅಧಿಕಾರಿಗಳು
Menu
ಆರೋಗ್ಯ

ಅಂಗಾಂಗ ದಾನ ಪ್ರತಿಜ್ಞೆ ಅಭಿಯಾನಕ್ಕೆ ಚಾಲನೆ

September 7, 2026 1 month ago 1 min read

ದಾವಣಗೆರೆ True Media Kannada: ಸಾವಿನ ನಂತರವೂ ಮತ್ತೊಬ್ಬರ ಬಾಳಿಗೆ ಬೆಳಕಾಗುವ ಮಹತ್ವದ ಮಾನವೀಯ ಕಾರ್ಯವಾದ ಅಂಗಾಂಗ ದಾನ ಪ್ರತಿಜ್ಞೆ ಅಭಿಯಾನಕ್ಕೆ ನಗರದಲ್ಲಿ ಚಾಲನೆ ನೀಡಲಾಯಿತು.

ಎಸ್ ಎಸ್ ನಾರಾಯಣ ಹೆಲ್ತ್ ಸೂಪರ್ ಸ್ಪೆಷಾಲಿಟಿ ಸೆಂಟರ್ ವತಿಯಿಂದ ಶನಿವಾರ ಪ್ರತಿಜ್ಞಾ ವಿಧಿ ಅಥವಾ ಅಂಗಾಂಗ ದಾನ ವಾಗ್ದಾನ ಅಭಿಯಾನದ ವಾಹನಕ್ಕೆ ಚಾಲನೆ ನೀಡಲಾಯಿತು.\

ಸಾರ್ವಜನಿಕರಲ್ಲಿ ಅಂಗಾಂಗ ದಾನದ ಕುರಿತು ಜಾಗೃತಿ ಮೂಡಿಸುವುದರ ಜತೆಗೆ ಸ್ಥಳದಲ್ಲೇ ಪ್ರತಿಜ್ಞೆಗೆ ಸಹಿ ಹಾಕುವ ಅವಕಾಶ ನೀಡಲಾಗುತ್ತದೆ.

ಅಂಗಾಂಗ ದಾನದ ಬಗ್ಗೆ ಸಮಗ್ರ ಮಾಹಿತಿ ಒಳಗೊಂಡ ಈ ವಿಶೇಷ ವಾಹನವು ದಾವಣಗೆರೆ, ಚಿತ್ರದುರ್ಗ, ಹಾವೇರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಸಂಚರಿಸಲಿದೆ.

ಸಾರ್ವಜನಿಕರು ವಾಹನದ ಬಳಿ ಬಂದು ಸಹಿ ಮಾಡಬಹುದಾಗಿದೆ. ಈ ಮೂಲಕ ಸಾರ್ವಜನಿಕರಿಂದ ವಾಗ್ದಾನ ಪಡೆಯಲಿದೆ.

ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಮಾಹಿತಿ ಪಡೆಯವ ಮೂಲಕ ಅಭಿಯಾನದಲ್ಲಿ ಪಾಲ್ಗೊಳ್ಳಬೇಕೆಂದು ಕೋರಲಾಗಿದೆ. ಈ ಅಭಿಯಾನಕ್ಕೆ ಎಸ್.ಎಸ್. ಮೆಡಿಕಲ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಬಿ.ಎಸ್. ಪ್ರಸಾದ್, ವೈದ್ಯಕೀಯ ನಿರ್ದೇಶಕರಾದ

ಡಾ. ಅರುಣ್ ಅಜ್ಜಪ್ಪ, ಎಸ್.ಎಸ್. ನಾರಾಯಣ ಹೆಲ್ತ್ ಸೂಪರ್ ಸ್ಪೆಷಾಲಿಟಿ ಸೆಂಟರ್, ದಾವಣಗೆರೆಯ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಸುನಿಲ್ ಭಂಡಾರಿಗಲ್

ಹಾಗೂ ಎಲ್ಲ ವೈದ್ಯರು ಮತ್ತು ಸಿಬ್ಬಂದಿ ಚಾಲನೆ ನೀಡಿದರು.

Share: